ಓಟಿಟಿಯಲ್ಲಿ ‘ಸಲಗ’ ದರ್ಶನವಿಲ್ಲ

Team Udayavani, Oct 19, 2021, 8:11 AM IST

gjhgfds

ಇತ್ತೀಚೆಗಷ್ಟೇ ತೆರೆಕಂಡಿರುವ ನಟ ದುನಿಯಾ ವಿಜಯ್‌ ಅಭಿನಯದ ಮತ್ತು ನಿರ್ದೇಶನದ ಚೊಚ್ಚಲ ಚಿತ್ರ “ಸಲಗ’ ಭರ್ಜರಿಯಾಗಿ ಓಪನಿಂಗ್‌ ಪಡೆದುಕೊಂಡಿದೆ. ಚಿತ್ರ ಬಿಡುಗಡೆಯಾದ ಎಲ್ಲ ಕೇಂದ್ರಗಳಲ್ಲಿ ಹೌಸ್‌ಫ‌ುಲ್‌ ಪ್ರದರ್ಶನ ಕಾಣುತ್ತಿದೆ. ಇದರ ನಡುವೆಯೇ “ಸಲಗ’ ಚಿತ್ರ ಶೀಘ್ರದಲ್ಲಿಯೇ ಓಟಿಟಿಯಲ್ಲಿ ಬಿಡುಗಡೆಯಾಗುತ್ತದೆ ಎಂಬ ಸುದ್ದಿ ಸೋಶಿಯಲ್‌ ಮೀಡಿಯಾ ಸೇರಿದಂತೆ, ಅಲ್ಲಲ್ಲಿ ಹರಿದಾಡುತ್ತಿದೆ.

ಈ ಬಗ್ಗೆ ಮಾತನಾಡಿರುವ ನಟ ಕಂ ನಿರ್ದೇಶಕ ದುನಿಯಾ ವಿಜಯ್‌ ಓಟಿಟಿಯಲ್ಲಿ “ಸಲಗ’ ಬಿಡುಗಡೆಯಾಗಲಿದೆ ಎಂಬ ವದಂತಿಯನ್ನು ತಳ್ಳಿ ಹಾಕಿದ್ದಾರೆ. ಈ ಕುರಿತು ಫೇಸ್‌ಬುಕ್‌ನಲ್ಲಿ ವಿಡಿಯೋ ಮೂಲಕ ಮಾಹಿತಿ ನೀಡಿರುವ ದುನಿಯಾ ವಿಜಯ್‌, “”ಸಲಗ ಸಿನಿಮಾಕ್ಕೆ ದೊಡ್ಡಮಟ್ಟದ ಯಶಸ್ಸು ಪ್ರೇಕ್ಷಕರಿಂದ ಸಿಕ್ಕಿದೆ. ನಮ್ಮ ಪ್ರೇಕ್ಷಕರ ಈ ಪ್ರೀತಿ-ಬೆಂಬಲಕ್ಕೆ ಇಡೀ ತಂಡ ಚಿರಋಣಿ ಆಗಿರುತ್ತೇವೆ.

ಆದರೆ, ಈ ಸಿನಿಮಾ ಓಟಿಟಿಯಲ್ಲಿ ಬರುತ್ತದೆ ಎಂಬ ವಿಚಾರವೊಂದು ಎಲ್ಲ ಕಡೆ ಓಡಾಡುತ್ತಿದೆ. ನಮ್ಮ ಯಶಸ್ಸನ್ನು ಸಹಿಸೋಕೆ ಆಗದವರು ಯಾರೋ ಕೆಲವರು, ಈ ರೀತಿ ನಮ್ಮ ಸಿನಿಮಾ ಓಟಿಟಿಯಲ್ಲಿ ಬರುತ್ತೆ ಅಂತ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಹೇಗಾದರೂ ಸರಿ, ನಮ್ಮ ಸಿನಿಮಾಕ್ಕೆ ಡ್ಯಾಮೇಜ್‌ ಮಾಡೋಣ ಅಂತ ಏನೇನೋ ಮಾಡ್ತಾ ಇದ್ದಾರೆ.

ಹಾಗಾಗಿ, ಇದು ಓಟಿಟಿಯಲ್ಲಿ ಬರುತ್ತೆ ಅಂತ ಸುದ್ದಿ ಹಬ್ಬಿಸುತ್ತಿದ್ದಾರೆ. ಆದ್ರೆ ಓಟಿಟಿಯಲ್ಲಿ ಈ ಸಿನಿಮಾ ಬರಲ್ಲ. ಇದು ಥಿಯೇಟರ್‌ನಲ್ಲೇ ಇರುತ್ತದೆ. ಈ ಸಿನಿಮಾವನ್ನು ಚಿತ್ರಮಂದಿರದಲ್ಲಿಯೇ ಜನರು ನೋಡಬೇಕು ಎಂದು ನಾವು ಎರಡು ವರ್ಷಗಳಿಂದ ಕಾದಿದ್ದೆವು. ಆಗಲೇ ನಮಗೆ ಓಟಿಟಿ ಆಫ‌ರ್‌ ಬಂದಿತ್ತು.

ಆದರೂ ನಾವೂ ಕೊಟ್ಟಿರಲಿಲ್ಲ. ಸಿನಿಮಾ ಪ್ರೇಮಿಗಳು “ಸಲಗ’ ಓಟಿಟಿಗೆ ಬರುತ್ತದೆ ಎಂದುಕೊಂಡು ಚಿತ್ರವನ್ನು ಮಿಸ್‌ ಮಾಡಿಕೊಳ್ಳಬೇಡಿ. ಚಿತ್ರಮಂದಿರಕ್ಕೆ ಬಂದು ನೋಡಿ. ಇಂತಹ ಸುಳ್ಳು ಸುದ್ದಿ ಹಬ್ಬಿಸುವವರು ಇದ್ದೇ ಇರುತ್ತಾರೆ. ಅವರ ಬಗ್ಗೆ ನಾವು ಕೇರ್‌ ಮಾಡುವುದಿಲ್ಲ’ ಎಂದಿದ್ದಾರೆ. ಒಟ್ಟಾರೆ “ಸಲಗ’ ಓಟಿಟಿಯಲ್ಲಿ ಬಿಡುಗಡೆಯಾಗುತ್ತದೆ ಎಂಬ ಊಹಾಪೋಹ ಸುದ್ದಿಗಳಿಗೆ ದುನಿಯಾ ವಿಜಯ್‌ ತಮ್ಮ ವಿಡಿಯೋ ಮೂಲಕ ಫ‌ುಲ್‌ ಸ್ಟಾಪ್‌ ಇಟ್ಟಿದ್ದಾರೆ.

ಟಾಪ್ ನ್ಯೂಸ್

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.