Threat: “ಏ. 30 ರಂದು ಸಲ್ಮಾನ್ ಖಾನ್ ನನ್ನು ಕೊಲ್ಲುತ್ತೇನೆ”.. ಟೈಗರ್ಗೆ ಮತ್ತೆ ಬೆದರಿಕೆ
Team Udayavani, Apr 11, 2023, 10:58 AM IST
ಮುಂಬಯಿ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಮತ್ತೊಂದು ಜೀವ ಬೆದರಿಕೆ ಕರೆ ಬಂದಿದೆ. ಪೊಲೀಸರಿಗೆ ವ್ಯಕ್ತಿಯೊಬ್ಬ ಬೆದರಿಕೆ ಕರೆಯನ್ನು ಮಾಡಿದ್ದಾನೆ ಎಂದು ವರದಿಯಾಗಿದೆ.
ಮುಂಬಯಿ ಪೊಲೀಸ್ ಕಂಟ್ರೋಲ್ ರೂಮ್ ಗೆ ರಾಜಸ್ಥಾನದ ಜೋಧಪುರ ಮೂಲದ ರೋಕಿ ಭಾಯಿ ಎಂಬ ವ್ಯಕ್ತಿ ಸೋಮವಾರ ( ಏ.10 ರಂದು) ಕರೆ ಮಾಡಿ “ನಾನು ಸಲ್ಮಾನ್ ಖಾನ್ ನನ್ನು ಏ.30 ರಂದು ಕೊಲೆ ಮಾಡುತ್ತೇನೆ” ಎಂದು ಹೇಳಿ ಬೆದರಿಕೆಯನ್ನು ಹಾಕಿದ್ದಾನೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಮುಂಬಯಿ ಪೊಲೀಸರು ಹೇಳಿದ್ದಾರೆ.
ಇತ್ತೀಚೆಗಷ್ಟೇ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಇಮೇಲ್ ಮೂಲಕ ಕೊಲೆ ಬೆದರಿಕೆ ಕಳುಹಿಸಿದ್ದ ಆರೋಪಿಯನ್ನು ಮುಂಬೈ ಪೊಲೀಸರೊಂದಿಗೆ ರಾಜಸ್ಥಾನ ಪೊಲೀಸರು ಭಾನುವಾರ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಬಂಧಿಸಿದ್ದರು.
ಪೂಲೀಸರು ಜೋಧ್ಪುರದ ಸಿಯಾಗೊ ಕಿ ಧಾನಿ ನಿವಾಸಿ ಧಕದ್ರಾಮ್ ಬಿಷ್ಣೋಯ್ ಎಂಬಾತ ಇಮೇಲ್ ಕಳುಹಿಸಿದ್ದಾನೆ ಎಂದು ಪತ್ತೆಹಚ್ಚಿ ಬಂಧಿಸಿದ್ದರು.
ಬೆದರಿಕೆ ಇಮೇಲ್ ಬಳಿಕ ನಟ ಸಲ್ಮಾನ್ ಖಾನ್ ಇತ್ತೀಚೆಗೆ ಬುಲೆಟ್ ಪ್ರೂಫ್ ಎಸ್ ಯುವಿ ಕಾರನ್ನು ಖರೀದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್ ಖಾನ್
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
MUST WATCH
ಹೊಸ ಸೇರ್ಪಡೆ
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ