ಸಂಜಯ್ ದತ್ ವರ್ಕೌಟ್ಗೆ ಮೆಚ್ಚುಗೆ
Team Udayavani, May 5, 2020, 10:54 AM IST
ಈ ವರ್ಷದ ಬಹುನಿರೀಕ್ಷಿತ ಕೆಜಿಎಫ್-2 ಚಿತ್ರದ ಚಿತ್ರೀಕರಣ ಬಹುತೇಕ ಪೂರ್ಣಗೊಂಡಿದ್ದು, ಕೊನೆಯ ಹಂತದ ಚಿತ್ರೀಕರಣ ಮಾತ್ರ ಬಾಕಿ ಇದೆ ಎನ್ನಲಾಗಿದೆ. ಈಗಾಗಲೇ ಚಿತ್ರದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಘೋಷಿಸಿದ್ದು, ಸದ್ಯ ಕೋವಿಡ್ 19 ಲಾಕ್ ಡೌನ್ ನಿಂದಾಗಿ ಕೆಜಿಎಫ್ ಚಿತ್ರದ ಕಲಾವಿದರು, ತಂತ್ರಜ್ಞರು ತಮ್ಮದೇಯಾದ ಚಟುವಟಿಕೆಗಳಲ್ಲಿ ತೊಡಗಿದ್ದಾರೆ.
ಇನ್ನು ಕೆಜಿಎಫ್-2 ಚಿತ್ರದಲ್ಲಿ ಅಧೀರ ಪಾತ್ರದಲ್ಲಿ ಅಭಿಯಿಸುತ್ತಿರುವ ಬಾಲಿವುಡ್ ನಟ ಸಂಜಯ್ ದತ್, ವರ್ಕೌಟ್ ಮಾಡುವುದರಲ್ಲಿ ಬ್ಯುಸಿಯಾಗಿದ್ದಾರೆ. 60ರ ಇಳಿ ವಯಸ್ಸಿನಲ್ಲಿಯೂ ಅಕ್ಟೀವ್ ಆಗಿರುವ ದತ್ ಚಿತ್ರಕ್ಕಾಗಿ ಇನ್ನೂ ಹೆಚ್ಚಿನ ವರ್ಕೌಟ್ ಮಾಡುತ್ತಿದ್ದಾರೆ. ಕೆಜಿಎಫ್-2 ಚಿತ್ರದಲ್ಲಿ ಸಂಜಯ್ ದತ್ ಅವರದ್ದು ಕೊನೆಯ ಹಂತದ ಚಿತ್ರೀಕರಣವಿದ್ದು, ಇದಕ್ಕಾಗಿ ಸಂಜಯ್ ದತ್ ಅವರು ಲಾಕ್ಡೌನ್ ಸಮಯದಲ್ಲಿ ವರ್ಕೌಟ್ ಮಾಡುತ್ತಿದ್ದಾರೆ. ಈ ಮೂಲಕ ಲಾಕ್ಡೌನ್ ಅವಧಿಯನ್ನು ಸಮರ್ಪಕವಾಗಿ ಬಳಸಿಕೊಳ್ಳುತ್ತಿದ್ದಾರೆ.
ಕೋವಿಡ್ 19 ವೈರಸ್ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಜಾಗೃತಿ ಮೂಡಿಸುವುದರ ಜೊತೆಗೆ ವರ್ಕೌಟ್ ಮಾಡುತ್ತಿರುವ ವಿಡಿಯೋವನ್ನು ಸಂಜಯ್ ಸೋಶಿಯಲ್ ಮೀಡಿಯಾದಲ್ಲಿ ಹಾಕಿಕೊಂಡಿದ್ದಾರೆ. ಇದಕ್ಕೆ ಅವರ ಅಭಿಮಾನಿಗಳಿಂದ ಕೂಡ ಬಿಗ್ ರೆಸ್ಪಾನ್ಸ್ ವ್ಯಕ್ತವಾಗುತ್ತಿದೆ. ಈಗಾಗಲೇ ಬಹುತೇಕ ಕೆಜಿಎಫ್-2 ಚಿತ್ರದ ಚಿತ್ರೀಕರಣ ಬಹುತೇಕ ಮುಗಿದಿದ್ದು, ಚಿತ್ರದ ಕೊನೆಯ ಭಾಗದಲ್ಲಿ ಯಶ್ ಹಾಗೂ ಸಂಜಯ್ ದತ್ ನಡುವಿನ ಫೈಟ್ಸ್ ಚಿತ್ರೀಕರಣ ಮಾತ್ರ ಬಾಕಿ ಇದೆ ಎನ್ನಲಾಗಿದೆ. ಚಿತ್ರ ಅ. 23ರಂದು ತೆರೆಗೆ ಬರಲಿದೆ ಎಂದು ಚಿತ್ರತಂಡ ಈಗಾಗಲೇ ಘೋಷಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್ ಬಿ; ಗಮನ ಸೆಳೆದ ಪಾತ್ರದ ಝಲಕ್
Road mishap: ಭೀಕರ ರಸ್ತೆ ಅಪಘಾತದಲ್ಲಿ ನಟ ಪಂಕಜ್ ತ್ರಿಪಾಠಿ ಬಾವ ಮೃತ್ಯು: ಸಹೋದರಿಗೆ ಗಾಯ
ʼಭಜರಂಗಿ ಭಾಯಿಜಾನ್ʼ, ʼರೌಡಿ ರಾಥೋರ್ʼ ಸೀಕ್ವೆಲ್ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ನಿರ್ಮಾಪಕ