ರಶ್ಮಿಕಾ ನಟನೆಯ ಮೊದಲ ಬಾಲಿವುಡ್ ಸಿನಿಮಾ “ಮಿಶನ್ ಮಜ್ನು” ರಿಲೀಸ್ ಡೇಟ್ ಫಿಕ್ಸ್
Team Udayavani, Nov 2, 2021, 4:24 PM IST
ಮುಂಬೈ: ದಕ್ಷಿಣ ಭಾರತದಲ್ಲಿ ಧೂಳೆಬ್ಬಿಸಿದ ನಟಿ ರಶ್ಮಿಕಾ ಮಂದಣ್ಣ ಈಗ ಬಾಲಿವುಡ್ಗೆ ಕಾಲಿಟ್ಟಿದ್ದಾರೆ. ಹಿಂದಿಯಲ್ಲಿ ಬ್ಯಾಕ್ ಟು ಬ್ಯಾಕ್ ಸಿನಿಮಾ ಒಪ್ಪಿಕೊಳ್ಳುವುದರ ಮೂಲಕ ರಶ್ಮಿಕಾ ಬಾಲಿವುಡ್ನಲ್ಲಿ ನೆಲೆಯೂರಲು ಪ್ರಯತ್ನ ನಡೆಸುತ್ತಿದ್ದಾರೆ. ಇದೀಗ ರಶ್ಮಿಕಾ ನಟನೆಯ ಮೊದಲ ಸಿನಿಮಾ “ಮಿಷನ್ ಮಜ್ನು” ಬಿಡುಗಡೆಯಾಗಲು ದಿನಾಂಕ ಘೋಷಣೆಯಾಗಿದೆ.
ರಶ್ಮಿಕಾ ಹಾಗೂ ಬಾಲಿವುಡ್ ನಟ ಸಿದ್ದಾರ್ಥ್ ಮಲ್ಹೋತ್ರಾ ಚಿತ್ರದಲ್ಲಿ ಅಭಿನಯಿಸಿದ್ದು, ಮುಂದಿನ ವರ್ಷ ಮೇ 13 ರಂದು ಥಿಯೇಟರ್ ನಲ್ಲಿ ಬಿಡುಗಡೆಯಾಗಲಿದೆ ಎಂದು ಇನ್ಸ್ಟಾಗ್ರಾಮ್ನಲ್ಲಿ ಸಿದ್ದಾರ್ಥ್ ಪೋಸ್ಟರ್ ಹಂಚಿಕೊಂಡಿದ್ದಾರೆ.
ಪಾಕಿಸ್ತಾನದ ಅಕ್ರಮ ಪರಮಾಣು ಮಹತ್ವಾಕಾಂಕ್ಷೆಗಳನ್ನು ಹಳಿತಪ್ಪಿಸಿದ ಭಾರತದ ಮಹಾನ್ ರಹಸ್ಯ ಕಾರ್ಯಾಚರಣೆಯ ಭಾಗವಾಗಲು ಸಿದ್ದರಾಗಿ. ಇದು ನೈಜ ಘಟನೆ ಆಧಾರಿತವಾಗಿದೆ. #missionmajnu 13 ಮೇ 2022 ರಂದು ತೆರೆಗೆ ಬರುತ್ತಿದೆ ಎಂದು ಬರೆದುಕೊಂಡಿದ್ದಾರೆ.
ಇದನ್ನೂ ಓದಿ: ನಾಯಿಗೆ ಹಿಂಸೆ, ತಕ್ಕ ಶಿಕ್ಷೆ ಕೊಟ್ಟ ಹಸು
“ಮಿಷನ್ ಮಜ್ನು” ನೈಜ ಘಟನೆ ಆಧರಿಸಿ ಸಿದ್ಧಗೊಂಡಿರುವ ಚಿತ್ರವಾಗಿದ್ದರಿಂದ ಸಾಕಷ್ಟು ನಿರೀಕ್ಷೆ ಇದೆ. ಸಿದ್ದಾರ್ಥ್ ಪ್ರತಿ ಸಿನಿಮಾಗೂ ಭಿನ್ನ ಪಾತ್ರ ಆಯ್ಕೆ ಮಾಡಿಕೊಳ್ಳುತ್ತಿರುವುದು ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ. ರಶ್ಮಿಕಾ ಅವರ ಪಾತ್ರ ಇನ್ನೂ ಅನಾವರಣಗೊಂಡಿಲ್ಲ. ಅವರ ಲುಕ್ ಸಿನಿಮಾದಲ್ಲಿ ಹೇಗಿರಲಿದೆ ಎಂಬುದನ್ನು ತಿಳಿದುಕೊಳ್ಳಲು ಅಭಿಮಾನಿಗಳು ಕಾತುರರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್ ಬಿ; ಗಮನ ಸೆಳೆದ ಪಾತ್ರದ ಝಲಕ್
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ