ಐಎಎಸ್ ಪರೀಕ್ಷೆಗೆ ಕೋಚಿಂಗ್ ಪಡೆಯುವವರಿಗೆ ಸೋನು ಸೂದ್ ನೆರವು..!
Team Udayavani, Jun 13, 2021, 1:37 PM IST
ಕಳೆದ ವರ್ಷ ಕೋವಿಡ್ ಲಾಕ್ ಡೌನ್ ಆದಾಗಿನಿಂದ ಇಲ್ಲಿಯವರೆಗೂ ನಟ ಸೋನು ಸೂದ್ ಹಲವು ರೀತಿಯಲ್ಲಿ ಸಹಾಯ ಮಾಡುತ್ತಿದ್ದಾರೆ. ಆರ್ಥಿಕವಾಗಿ ಸಂಕಷ್ಟ ಅನುಭವಿಸುತ್ತಿರುವ ಅನೇಕರಿಗೆ ಸೋನು ಸೂದ್ ಸಹಾಯಸ್ತ ಚಾಚಿದ್ದಾರೆ. ಇದೀಗ ಮತ್ತೊಂದು ರೀತಿಯಲ್ಲಿ ಜನರಿಗೆ ನೆರವಾಗುತ್ತಿದ್ದು, ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧವಾಗುತ್ತಿರುವವರಿಗೆ ಸಹಾಯಹಸ್ತ ಚಾಚಿದ್ದಾರೆ.
ಸೋನು ಸೂದ್ ಮತ್ತು ದೆಹಲಿಯ ಯುವ ಸಂಘಟನೆ ದಿಯಾ ಜೊತೆಗೂಡಿ ಸಂಭವಂ ಎಂಬ ಯೋಜನೆಯನ್ನು ಲಾಂಚ್ ಮಾಡಿದ್ದಾರೆ. ಇದರ ಅಡಿಯಲ್ಲಿ ಐಎಎಸ್ ಪರೀಕ್ಷೆಗೆ ಸಿದ್ಧವಾಗುತ್ತಿರುವ ಸ್ಪರ್ಧಾರ್ಥಿಗಳಿಗೆ ಉಚಿತವಾಗಿ ಕೋಚಿಂಗ್ ಸ್ಕಾಲರ್ಶಿಪ್ ನೀಡಲಾಗುತ್ತದೆ.
ಈ ಬಗ್ಗೆ ಟ್ವೀಟ್ ಮಾಡಿರುವ ನಟ, ನೀವು ಐಎಎಸ್ ತಯಾರಿ ಮಾಡುತ್ತಿದ್ದರೆ, ನಾವು ಅದರ ಜವಾಬ್ದಾರಿಯನ್ನು ಹೊರುತ್ತೇವೆ ಎಂದು ಹೇಳುವ ಮೂಲಕ ಆಫರ್ ಬಗ್ಗೆ ತಿಳಿಸಿದ್ದಾರೆ.
ಐಎಎಸ್ ಕೋಚಿಂಚ್ ಪಡೆಯಬಯಸುವವರು www.soodcharityfoundation.org ನಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಇದರ ಕೊನೆಯ ದಿನಾಂಕ ಜೂನ್ 30 ಎಂಬ ಮಾಹಿತಿಯನ್ನು ಸೋನು ಹಂಚಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ