ನಟ ಸೋನು ಸೂದ್ ಗೆ ಒಲಿದ 2020 ರ ಜನೋಪಕಾರಿ ಪ್ರಶಸ್ತಿ

ನಾರ್ವೆಯಲ್ಲಿ ನಡೆಯಲಿರುವ ಪ್ರತಿಷ್ಠಿತ ಸ್ಕ್ಯಾಂಡೀವಿಯನ್ ಬಾಲಿವುಡ್ ಫೆಸ್ಟಿವಲ್ ನಲ್ಲಿ ಈ ಪ್ರಶಸ್ತಿ ಪ್ರದಾನ

Team Udayavani, Dec 30, 2020, 7:00 PM IST

ಸೋನುಗೆ ಒಲಿದ ಹ್ಯುಮ್ಯಾನಿಟೇರಿಯನ್ 2020 ಪ್ರಶಸ್ತಿ

ಮುಂಬೈ: ಇತ್ತೀಚಿನ ದಿನಗಳಲ್ಲಿ ಹಲವಾರು ಸಾಮಾಜಿಕ ಸೇವೆಗಳ ಮೂಲಕ ತಮ್ಮನ್ನು ತಾವು ಗುರುತಿಸಿಕೊಂಡಿದ್ದ ಬಾಲಿವುಡ್ ನಟ ಸೋನು ಸೂದ್ ಅವರಿಗೆ ಜನೋಪಕಾರಿ 2020 ಪ್ರಶಸ್ತಿಯ ಗರಿ ದೊರಕಿದೆ.

ನಾರ್ವೆಯಲ್ಲಿ ನಡೆಯಲಿರುವ ಪ್ರತಿಷ್ಠಿತ ಸ್ಕ್ಯಾಂಡೀವಿಯನ್ ಬಾಲಿವುಡ್ ಫೆಸ್ಟಿವಲ್ ನಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು, ಈ ಕಾರ್ಯಕ್ರಮ ವರ್ಚುವಲ್ ವೇದಿಕೆಯ ಮೂಲಕ ನಡೆಯಲಿದೆ ಎಂದು ವರದಿಯಾಗಿದೆ.

ಈ ಕುರಿತು ಮಾತನಾಡಿರುವ ಬಾಲಿವುಡ್ ಫೆಸ್ಟಿವಲ್ ನಾರ್ವೆ ಯ ಡೈರೆಕ್ಟರ್ ನಸ್ರುಲ್ಲಾ ಖುರೇಷಿ ನಾವು ಸಮಾಜದ ಅತೀ ಸಂಕಷ್ಟದ ಸಮಯದಲ್ಲಿ ನಟ ಸೋನು ಸೂದ್ ಅವರು ಯಾವ ರೀತಿ ಮಾನವೀಯತೆಯನ್ನು ಮೆರೆದಿದ್ದಾರೆ ಎಂಬುದನ್ನು ಗಮನಿಸಿದ್ದೇವೆ. ಹಾಗೂ  ಅವರ ಸಮಾಜಮುಖಿ ಕಾರ್ಯಗಳಿಗೆ ಗೌರವ ಸೂಚಿಸುವ ನಿಟ್ಟಿನಲ್ಲಿ ಈ ಪ್ರಶಸ್ತಿಯನ್ನು ನೀಡುತ್ತಿದ್ದೇವೆ ಎಂದಿದ್ದಾರೆ.

ಕೋವಿಡ್ ಆರಂಭಗೊಂಡ ನಂತರ ಹೇರಲಾಗಿದ್ದ ಲಾಕ್ ಡೌನ್ ನಿಂದಾಗಿ ಹಲವಾರು ಜನರ ಬದುಕು ಬೀದಿಗೆ ಬಿದ್ದಿತ್ತು , ಸಾವಿರಾರು ಜನರು ಕೆಲಸವಿಲ್ಲದೆ, ಹಣವಿಲ್ಲದೆ ತಮ್ಮ ತಮ್ಮ ಊರುಗಳಿಗೆ ಹೋಗಲೂ ಆಗದೆ ಒದ್ದಾಡುವಂತಾಗಿತ್ತು . ಆ ಸಂದರ್ಭದಲ್ಲಿ ನಟ ಸೋನು ಸೂದ್ ತಮ್ಮ ಸ್ವಂತ ಖರ್ಚಿನಲ್ಲಿ  ಹಲವಾರು ಜನರು ತಮ್ಮ ತಮ್ಮ ಊರುಗಳಿಗೆ ತಲುಪಲು ಸಾರಿಗೆ ವ್ಯವಸ್ಥೆ ಮಾಡಿಕೊಟ್ಟಿದ್ದರು. ಆ ಮೂಲಕ ಸಮಾಜದ ರಿಯಲ್ ಹೀರೋ ಆಗಿ ಕಾಣಿಸಿಕೊಂಡಿದ್ದರು.

ಇವರ ಈ ಸಾಮಾಜಿಕ ಸೇವೆಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಒಳಗೊಂಡಂತೆ ಹಲವು ರಾಜಕೀಯ ನಾಯಕರು ಮತ್ತು ಸಮಾಜ ಸೇವಾ ಸಂಸ್ಥೆಗಳಿಂದ ಪ್ರಶಂಸೆ ವ್ಯಕ್ತವಾಗಿತ್ತು.

ಇದನ್ನೂ ಓದಿ:ಮಂಡ್ಯ : ಬೆಳಗೊಳ ಗ್ರಾಮ ಪಂಚಾಯತ್ ನಲ್ಲಿ ಗೆಲುವು ಸಾಧಿಸಿದ ಪತಿ, ಪತ್ನಿ

ಈ ಹಿಂದೆ ನಟ ಸೋನು ಸೂದ್ 2020ರ ಏಷ್ಯಿಯನ್ ಸೆಲೆಬ್ರಿಟಿ ಪಟ್ಟಿಯಲ್ಲಿ ತಮ್ಮ ಸ್ಥಾನವನ್ನು ಗಿಟ್ಟಿಸಿಕೊಂಡಿರುವುರೊಂದಿಗೆ ಹಲವಾರು ಪ್ರಶಸ್ತಿ ಪುರಸ್ಕಾರಗಳಿಗೆ ಭಾಜನರಾಗಿದ್ದರು.

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

ʼಖಲ್‌ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್‌ನಲ್ಲಿ ಬಿಟೌನ್‌ ಸ್ಟಾರ್ಸ್ ಜೊತೆ ಯಶ್‌, ಅಲ್ಲು?

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.