ಕೋವಿಡ್ ಗೆದ್ದ ಎಸ್ ಪಿಬಿ: ಪರೀಕ್ಷೆಯಲ್ಲಿ ನೆಗೆಟಿವ್ ವರದಿ ಬಂದಿದೆ ಎಂದ ಪುತ್ರ ಚರಣ್
Team Udayavani, Aug 24, 2020, 12:20 PM IST
ಚೆನ್ನೈ: ಖ್ಯಾತ ಹಿನ್ನಲೆ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಕೋವಿಡ್ ಪರೀಕ್ಷೆಯಲ್ಲಿ ನೆಗೆಟಿವ್ ಫಲಿತಾಂಶ ವರದಿಯಾಗಿದೆ ಎಂದು ಎಸ್ ಪಿಬಿ ಪುತ್ರ ಚರಣ್ ಹೇಳಿದ್ದಾರೆ.
ಕೋವಿಡ್ ಸೋಂಕು ದೃಢಪಟ್ಟ ಕಾರಣದಿಂದ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರು ಆಗಸ್ಟ್ ಐದರಂದು ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲಾಗಿದ್ದರು. ಆಗಸ್ಟ್ 13ರಂದು ಆರೋಗ್ಯ ಪರಿಸ್ಥಿತಿ ಹದಗೆಟ್ಟ ಕಾರಣ ಅವರಿಗೆ ಜೀವ ರಕ್ಷಕ ಸಾಧನಗಳ ಸಹಾಯದಿಂದ ಚಿಕಿತ್ಸೆ ನೀಡಲಾಗುತ್ತಿದೆ.
ಪುತ್ರ ಎಸ್ ಪಿ ಚರಣ್ ಅವರು ಇಂದು ಮಾಹಿತಿ ನೀಡಿದ್ದು, “ ನನ್ನ ತಂದೆಗೆ ನಿಮ್ಮ ನಿರಂತರ ಬೆಂಬಲ ಮತ್ತು ಪ್ರಾರ್ಥನೆಗಳಿಗೆ ಧನ್ಯವಾದಗಳು. ನನ್ನ ತಂದೆ ಉತ್ತಮ ಮತ್ತು ಸ್ಥಿರ ಮತ್ತು ಅವರ ಕೋವಿಡ್-19 ಪರೀಕ್ಷೆ ವರದಿ ನಕಾರಾತ್ಮಕವಾಗಿದೆ” ಎಂದಿದ್ದಾರೆ.
ಖ್ಯಾತ ಗಾಯಕನ ಆರೋಗ್ಯದ ಚೇತರಿಕೆಗಾಗಿ ದೇಶದೆಲ್ಲೆಡೆ ಅವರ ಅಭಿಮಾನಿಗಳು ಪ್ರಾರ್ಥನೆ ನಡೆಸುತ್ತಿದ್ದಾರೆ. ‘ ಬಾಲು’ ಆದಷ್ಟು ಬೇಗ ಗುಣಮುಖರಾಗಿ ಮತ್ತೆ ಹಾಡಲಿ ಎಂದು ಆಶಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್ ಖಾನ್
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ