ಆರ್ಯನ್ ಖಾನ್ ಇನ್ನೂ ಮಗು : ನಟ ಸುನಿಲ್ ಶೆಟ್ಟಿ
Team Udayavani, Oct 3, 2021, 3:35 PM IST
ಮುಂಬೈ : ಡ್ರಗ್ಸ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನವಾಗಿರುವ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಬೆಂಬಲಕ್ಕೆ ಬಾಲಿವುಡ್ ನಟ ಸುನಿಲ್ ಶೆಟ್ಟಿ ನಿಂತಿದ್ದಾರೆ. ಆತ ಇನ್ನೂ ಮಗು, ನೀವೇ ಅಂತಿಮ ತೀರ್ಪು ನೀಡಬೇಡಿ ಎಂದು ಮಾಧ್ಯಮಗಳಿಗೆ ಹಾಗೂ ನೆಟ್ಟಿಗರಿಗೆ ಮನವಿ ಮಾಡಿದ್ದಾರೆ.
ಶನಿವಾರ ರಾತ್ರಿ ಮುಂಬೈನ ತೀರ ಪ್ರದೇಶದ ಐಷಾರಾಮಿ ‘ಕ್ರೂಸ್’ ಹಡಗಿನಲ್ಲಿ ನಡೆದಿದ್ದ ಡ್ರಗ್ಸ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಹಾಗೂ ಇತರ ಏಳು ಜನರನ್ನು ರಾಷ್ಟ್ರೀಯ ಮಾದಕ ವಸ್ತು ನಿಯಂತ್ರಣ ಘಟಕದ (ಎನ್‌ಸಿಬಿ) ಅಧಿಕಾರಿಗಳು ಭಾನುವಾರ ವಶಕ್ಕೆ ತೆಗೆದುಕೊಂಡಿದ್ದಾರೆ.
ಈ ಘಟನೆ ಕುರಿತು ಮಾತನಾಡಿರುವ ಸುನೀಲ್ ಶೆಟ್ಟಿ, ‘ಎನ್‌ಸಿಬಿ ಯಾವುದೇ ಸ್ಥಳದಲ್ಲಿ ದಾಳಿ ಮಾಡಿದಾಗ ಅಲ್ಲಿದ್ದ ಎಲ್ಲರನ್ನೂ ವಶಕ್ಕೆ ಪಡೆದು, ಕೂಲಂಕುಷ ವಿಚಾರಣೆ ಮಾಡುತ್ತದೆ. ಆ ನಂತರ ಆರೋಪಿಗಳನ್ನು ಪತ್ತೆ ಹಚ್ಚುತ್ತೆ. ಅದೇ ರೀತಿ ಆರ್ಯನ್‌ನ್ನು ವಿಚಾರಣೆ ಮಾಡುತ್ತಿದ್ದಾರೆ ಅಷ್ಟೇ. ಆದರೆ, ನಾವು ಈ ಹುಡುಗ ಡ್ರಗ್ಸ್ ತೆಗೆದುಕೊಂಡಿದ್ದಾನೆ ಎಂದು ನಾವು ಊಹಿಸಿ ಬಿಡುತ್ತೇವೆ. ಇದು ತಪ್ಪು. ಈ ಪ್ರಕರಣದಲ್ಲಿ ಆತನ ವಿಚಾರಣೆ ನಡೆಯುತ್ತಿದೆ. ಈಗಲೇ ಆತ ಅಪರಾಧಿ ಎನ್ನುವುದು ಸರಿಯಲ್ಲ. ಆ ಮಗುವಿಗೆ ಉಸಿರಾಡಲು ಅವಕಾಶ ಕೊಡಿ ಎಂದು ನೆಟ್ಟಿಗರಿಗೆ ಮನವಿ ಮಾಡಿದ್ದಾರೆ.
“ಬಾಲಿವುಡ್‌ನಲ್ಲಿ ಏನಾದರೂ ಸಂಭವಿಸಿದಾಗ, ಮಾಧ್ಯಮಗಳು ಎಲ್ಲವನ್ನೂ ಸೂಕ್ಷ್ಮವಾಗಿ ಪರಿಶೀಲಿಸಿ ತಾವೇ ತೀರ್ಮಾನಕ್ಕೆ ಬರುತ್ತವೆ. ಈ ಮಗುವಿಗೆ ಅವಕಾಶ ನೀಡಿ. ನೈಜ ವರದಿಗಳು ಹೊರಬರಲಿ. ಬಚ್ಚಾ ಹೈ (ಅವನು ಮಗು). ಆತನನ್ನು ನೋಡಿಕೊಳ್ಳುವುದು ನಮ್ಮ ಜವಾಬ್ದಾರಿ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
10 ದಿನಗಳಲ್ಲಿ 2ನೇ ಘಟನೆ: ಬಂಗಾಳಿ ಯುವ ನಟಿ, ರೂಪದರ್ಶಿ ಬಿದಿಶಾ ಡೇ ಶವವಾಗಿ ಪತ್ತೆ
ಕರಣ್ ಜೋಹರ್ ಪಾರ್ಟಿಯಲ್ಲಿ ತನ್ನ ಹೊಸ ಗರ್ಲ್ ಫ್ರೆಂಡ್ ಪರಿಚಯಿಸಿದ ಹೃತಿಕ್ ರೋಶನ್
@62ನೇ ಹುಟ್ಟುಹಬ್ಬ: ಸ್ಟಾರ್ ನಟನಾಗುವ ಮುನ್ನ ಲಾಲೆಟ್ಟನ್ ಖ್ಯಾತ ಕುಸ್ತಿಪಟುವಾಗಿದ್ದರು!
ಎಲ್ಲಾ ಪ್ರಾದೇಶಿಕ ಭಾಷೆ ಪೂಜನೀಯ: ಪ್ರಧಾನಿ ಮೋದಿ ಹೇಳಿಕೆಗೆ ಕಿಚ್ಚ ಸುದೀಪ್ ಹೇಳಿದ್ದೇನು?
ಅಭಿಮಾನಿಗಳಿಗೆ ಸಿಹಿ ಸುದ್ದಿ: ಜ್ಯೂ.NTR 31 ಫಸ್ಟ್ ಲುಕ್…ಪ್ರಶಾಂತ್ ನೀಲ್ ಹೊಸ ಚಿತ್ರ