ಠಾಕ್ರೆ ಚಿತ್ರದ ಟೀಸರ್‌ ಬಿಡುಗಡೆ

Team Udayavani, Dec 23, 2017, 12:19 PM IST

3-a.jpg

ಮುಂಬಯಿ: ಶಿವಸೇನೆ ಪ್ರಮುಖ ದಿ| ಬಾಳಾಸಾಹೇಬ್‌ ಠಾಕ್ರೆ ಅವರ ಜೀವನದ ಬಗ್ಗೆ ನಿರ್ಮಾಣವಾಗಲಿರುವ ಚಲನಚಿತ್ರ ಠಾಕ್ರೆ ಇದರ ಟೀಸರ್‌ ಮತ್ತು ಪೋಸ್ಟರ್‌ ಗುರುವಾರ ಬಿಡುಗಡೆಯಾಗಿದೆ.

ಗುರುವಾರ ಮುಂಬಯಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಾಲಿವುಡ್‌ ನಟ ಮೆಗಾಸ್ಟಾರ್‌ ಅಮಿತಾಭ್‌ ಬಚ್ಚನ್‌ ಅವರು ಶಿವಸೇನೆ ಅಧ್ಯಕ್ಷ ಉದ್ಧವ್‌ ಠಾಕ್ರೆ ಮತ್ತು  ಚಿತ್ರದ ನಿರ್ಮಾಪಕ ಸಂಸದ ಸಂಜಯ್‌ ರಾವುತ್‌ ಅವರ ಉಪಸ್ಥಿತಿಯಲ್ಲಿ ಚಿತ್ರದ ಟೀಸರ್‌  ಬಿಡುಗಡೆಗೊಳಿಸಿದರು.

ಈ ಚಿತ್ರವು 2019ರ ಜ.23ರಂದು ದೊಡ್ಡ ಪರದೆಯಲ್ಲಿ ಬಿಡುಗಡೆಯಾಗಲಿದೆ. ಶಿವಸೇನೆ ನಾಯಕ ಸಂಜಯ್‌ ರಾವುತ್‌ ಅವರು ಬರೆದ ಈ ಜೀವನಚರಿತ್ರೆಗೆ ಅಭಿಜಿತ್‌ ಪನ್ಸೆ ಅವರು ಆ್ಯಕ್ಷನ್‌ ಕಟ್‌ ಹೇಳಲಿದ್ದಾರೆ.  ಚಿತ್ರದಲ್ಲಿ ನಟ ನವಾಜುದ್ದೀನ್‌ ಸಿದ್ದೀಕಿ ಅವರು ಬಾಳಾಸಾಹೇಬ್‌ ಠಾಕ್ರೆ ಅವರ ಪಾತ್ರವನ್ನು ನಿರ್ವಹಿಸಲಿದ್ದಾರೆ. ನವಾಜುದ್ದೀನ್‌ ಅವರಿಗಿಂತ ಮೊದಲು ಈ ಪಾತ್ರಕ್ಕೆ ಅಕ್ಷಯ್‌ ಕುಮಾರ್‌ ಮತ್ತು ಇರ್ಫಾನ್‌ ಖಾನ್‌ ಅವರ ಹೆಸರು ಚರ್ಚೆಯಲ್ಲಿತ್ತು.

ಟೀಸರ್‌  ಬಿಡುಗಡೆಗೊಳಿಸಿದ ಬಳಿಕ ತಮ್ಮ ಭಾಷಣದಲ್ಲಿ ಬಾಳಾಸಾಹೇಬ್‌ ಠಾಕ್ರೆ ಅವರನ್ನು ನೆನಪಿಸಿದ ಅಮಿತಾಭ್‌ ಬಚ್ಚನ್‌ ಅವರು,  ಠಾಕ್ರೆ ಸಾಹೇಬ್‌  ಅವರು ಎಲ್ಲರ ಸಹಾಯಕ್ಕೆ ಸದಾ ಸಿದ್ಧರಾಗಿರುತ್ತಿದ್ದರು. ಕೂಲಿ ಚಿತ್ರದ ಚಿತ್ರೀಕರಣದ ಸಮಯದಲ್ಲಿ ನಾನು ಗಾಯಗೊಂಡಿದ್ದಾಗ, ಠಾಕ್ರೆ ಸಾಹೇಬ್‌ ಅವರು ನನಗೆ ಸಹಾಯ ಮಾಡಿದ್ದರು. ಅದೇ ರೀತಿ, ಬೊಫೋರ್ಸ್‌ ಪ್ರಕರಣದಲ್ಲಿ  ಹೆಸರು ಕೇಳಿಬಂದ ಅನಂತರವೂ ಅವರು ನನಗೆ ಸಹಾಯ ಮಾಡಿದ್ದರು ಎಂದರು.

ಕೇವಲ ಒಂದು ಚಿತ್ರದಲ್ಲಿ ಬಾಳಾಸಾಹೇಬ್‌ ಅವರ ಇಡೀ ಜೀವನವನ್ನು ತೋರಿಸಲು ಸಾಧ್ಯವಿಲ್ಲ. ಅದಕ್ಕೆ ಬದಲಿಗೆ, ಅವರ ಜೀವನದ ಇಡೀ ಸೀರೀಜ್‌ ಅನ್ನು  ನಿರ್ಮಾಣಮಾಡಬೇಕು ಎಂದು ಬಚ್ಚನ್‌ ಅವರು ಅಭಿಪ್ರಾಯಪಟ್ಟಿದ್ದಾರೆ.

ಇಂದು ಚಿತ್ರದ ಟೀಸರ್‌ ಬಿಡುಗಡೆ ಮಾಡಲಾಗಿದ್ದು, ಇದು ನನಗೆ ಮಹತ್ವದ ದಿನವಾಗಿದೆ. ಠಾಕ್ರೆ ಅವರಂತಹ ಮಹಾನ್‌ ವ್ಯಕ್ತಿತ್ವದ ಪಾತ್ರದಲ್ಲಿ ಕಾಣಿಸಿಕೊಳ್ಳಲು ಅವಕಾಶ ಸಿಕ್ಕಿರುವುದು ನನಗೆ ಸಂತಸ ತಂದಿದೆ. ನನ್ನ ಪ್ರಕಾರ ಯಾವುದೇ ನಟನು ಸಹ ಠಾಕ್ರೆ ಅವರ ಪಾತ್ರವನ್ನು ಒಪ್ಪಿಕೊಳ್ಳುತ್ತಾರೆ ಎಂದು ಟೀಸರ್‌ ಬಿಡುಗಡೆ ವೇಳೆ ನಟ ನವಾಜುದ್ದೀನ್‌ ಸಿದ್ದೀಕಿ ಅವರು ನುಡಿದಿದ್ದಾರೆ.

ಕೃತಜ್ಞತೆ ಸಲ್ಲಿಕೆ 
ನಾನು ಸಂಜಯ್‌ ರಾವುತ್‌, ಉದ್ಧವ್‌ ಠಾಕ್ರೆ, ಅಭಿಜಿತ್‌ ಹಾಗೂ ಚಿತ್ರದ ಟೀಸರ್‌ ಬಿಡುಗಡೆಗೊಳಿಸಿದ ಅಮಿತಾಭ್‌ ಸರ್‌ ಅವರಿಗೆ ಕೃತಜ್ಞರಾಗಿರುತ್ತೇನೆ. ಅಭಿಜಿತ್‌ ಮತ್ತು ನಾವು ಸೇರಿ ಈ  ಜೀವನಚರಿತ್ರೆಯನ್ನು ಉತ್ತುಂಗಕ್ಕೆ ಕೊಂಡೊಯ್ಯಲಿದ್ದೇವೆ ಎಂದು ಮಾರಿಷಸ್‌ನಲ್ಲಿ ಚಿತ್ರೀಕರಣದಲ್ಲಿ ನಿರತರಾಗಿರುವ ನವಾಜುದ್ದೀನ್‌ ಸಿದ್ದೀಕಿ ಅವರು ವೀಡಿಯೋ ಕಾನ್ಫರೆನ್ಸ್‌ ಮಾಡುವ ಮೂಲಕ ಸಂತಸದ ಮಾತನ್ನ ಹೇಳಿದ್ದಾರೆ.
 
ಟಾಪ್ ನ್ಯೂಸ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

ʼಖಲ್‌ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್‌ನಲ್ಲಿ ಬಿಟೌನ್‌ ಸ್ಟಾರ್ಸ್ ಜೊತೆ ಯಶ್‌, ಅಲ್ಲು?

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.