ಒಂದು ಕಡೆ ಕ್ರಿಶ್ಚಿಯನ್ನರಿಗೆ ಪೌರತ್ವ ಇನ್ನೊಂದೆಡೆ ಏಸು ಪ್ರತಿಮೆಗೆ ವಿರೋಧ: ಅಖ್ತರ್ ಕಿಡಿ


Team Udayavani, Jan 13, 2020, 10:42 PM IST

Javed-Akhtar-730

ನವದೆಹಲಿ: ಕರ್ನಾಟಕ ರಾಜ್ಯದ ಕನಕಪುರದಲ್ಲಿ ಏಸು ಕ್ರಿಸ್ತನ ಪ್ರತಿಮೆ ನಿರ್ಮಾಣದ ವಿವಾದ ಇದೀಗ ರಾಷ್ಟ್ರಮಟ್ಟದಲ್ಲಿ ಚರ್ಚೆಯ ವಸ್ತುವಾಗಿದೆ. ರಾಜ್ಯದಲ್ಲಿನ ಭಾರತೀಯ ಜನತಾ ಪಕ್ಷದ ನಾಯಕರು ಕನಕಪುರದಲ್ಲಿರುವ ಕಪಾಲ ಬೆಟ್ಟದಲ್ಲಿ ಬೃಹತ್ ಏಸು ಕ್ರಿಸ್ತನ ಪ್ರತಿಮೆಗೆ ತೀವ್ರ ವಿರೋಧ ವ್ಯಕ್ತಪಡಿಸುತ್ತಿರುವುದನ್ನು ಹಲವರು ಖಂಡಿಸಿದ್ದಾರೆ.

ಇತ್ತ ಇದರ ಕುರಿತಾಗಿ ಟ್ವಿಟ್ಟರ್ ನಲ್ಲಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿರುವ ಬಾಲಿವುಡ್ ಗೀತ ರಚನೆಕಾರ ಮತ್ತು ಸಾಮಾಜಿಕ ಹೋರಾಟಗಾರ ಜಾವೇದ್ ಅಖ್ತರ್ ಅವರು, ಬಿಜೆಪಿ ಒಂದು ಕಡೆ ನೆರೆ ರಾಷ್ಟ್ರಗಳಿಂದ ಭಾರತಕ್ಕೆ ಬಂದಿರುವ ನಿರಾಶ್ರಿತ ಕ್ರಿಶ್ಚಿಯನ್ನರಿಗೆ ಆಶ್ರಯ ನೀಡುವ ಮಾತನಾಡುತ್ತಿದೆ ಮತ್ತೊಂದೆಡೆ ಆ ಪಕ್ಷ ಅಧಿಕಾರದಲ್ಲಿರುವ ರಾಜ್ಯದಲ್ಲೇ ಏಸುವಿನ ಪ್ರತಿಮೆ ನಿರ್ಮಾಣಕ್ಕೆ ವಿರೋಧ ಮಾಡುತ್ತಾರೆ, ಇದು ಕೇಸರಿ ಪಕ್ಷದ ದ್ವಂದ್ವ ನಿಲುವನ್ನು ತೋರಿಸುತ್ತದೆ ಎಂದು ಅಖ್ತರ್ ಟೀಕಿಸಿದ್ದಾರೆ.


ತಮ್ಮ ಈ ಟೀಕೆಗೆ ಅಖ್ತರ್ ಅವರು ಕೇಂದ್ರ ಸರಕಾರ ಇತ್ತೀಚೆಗೆ ಅನುಷ್ಠಾನಗೊಳಿಸಿರುವ ಪೌರತ್ವ ತಿದ್ದುಪಡಿ ಕಾಯ್ದೆಯ ಉದಾಹರಣೆಯನ್ನು ನೀಡಿದ್ದಾರೆ. ಮೂರು ನೆರೆ ರಾಷ್ಟ್ರಗಳಿಂದ ಭಾರತದ ಆಶ್ರಯ ಬಯಸಿ ಬಂದಿರುವ ಆರು ಧರ್ಮದವರಿಗೆ ಬಿಜೆಪಿ ಪೌರತ್ವ ನೀಡುವ ವಿಚಾರವನ್ನು ಮಾತನಾಡುತ್ತದೆ. ಆದರೆ ಅತ್ತ ಕರ್ನಾಟಕದಲ್ಲಿ ಅವರದ್ದೇ ಪಕ್ಷದ ಮುಖಂಡರು ಏಸುವಿನ ಪ್ರತಿಮೆ ನಿರ್ಮಾಣ ವಿಚಾರಕ್ಕೆ ತಮ್ಮ ಖಂಡತುಂಡ ವಿರೋಧವನ್ನು ವ್ಯಕ್ತಪಡಿಸುತ್ತಿರುವುದು ಎಷ್ಟರಮಟ್ಟಿಗೆ ಸರಿ ಎಂದು ಜಾವೇದ್ ಅಖ್ತರ್ ಅವರು ಪ್ರಶ್ನಿಸಿದ್ದಾರೆ.

ಕನಕಪುರದ ಹಾರೊಬೆಲೆಯಲ್ಲಿರುವ ಕಪಾಲ ಬೆಟ್ಟದಲ್ಲಿ ಕ್ರಿಶ್ಚಿಯನ್ ಸಮುದಾಯದವರು ಅಲ್ಲಿನ ಶಾಸಕ ಡಿ.ಕೆ. ಶಿವಕುಮಾರ್ ಸಹಕಾರದಲ್ಲಿ ನಿರ್ಮಿಸಲು ಉದ್ದೇಶಿಸಿರುವ 114 ಅಡಿ ಎತ್ತರದ ಏಸು ಕ್ರಿಸ್ತನ ಪ್ರತಿಮೆ ನಿರ್ಮಾಣವನ್ನು ವಿರೋಧಿಸಿ ಬಲಪಂಥೀಯ ಸಂಘಟನೆಗಳು ಇಂದು ಆಯೋಜಿಸಿದ್ದ ಪ್ರತಿಭಟನಾ ಸಭೆಯ ಕುರಿತಾಗಿ ಪ್ರಸ್ತಾಪಿಸಿ ಅಖ್ತರ್ ಅವರು ಬಿಜೆಪಿ ಮತ್ತು ಅದರ ಮಾತೃಸಂಘಟನೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ನಿಗೂಢ ಕಾರ್ಯಸೂಚಿಯ ವಿರುದ್ಧ ಧ್ವನಿ ಎತ್ತಿದ್ದಾರೆ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.