ರೇಪ್ ಆ್ಯಂಡ್ ಬ್ಲ್ಯಾಕ್ ಮೇಲ್; ಟೆಲಿವಿಷನ್ ನಟ ಕರಣ್ ಒಬೆರಾಯ್ ಅರೆಸ್ಟ್

Team Udayavani, May 6, 2019, 2:21 PM IST

ಮುಂಬೈ:ನಟಿ, ರೂಪದರ್ಶಿಯೊಬ್ಬಳ ಮೇಲೆ ಅತ್ಯಾಚಾರ ಮತ್ತು ಬ್ಲ್ಯಾಕ್ ಮೇಲ್ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಟೆಲಿವಿಷನ್ ನಟ ಕರಣ್ ಒಬೆರಾಯ್ ಯನ್ನು ಸೋಮವಾರ ಪೊಲೀಸರು ಬಂಧಿಸಿದ್ದಾರೆ.

ಪೊಲೀಸ್ ಮಾಹಿತಿ ಪ್ರಕಾರ, ಮದುವೆಯಾಗುವುದಾಗಿ ನಂಬಿಸಿ ರೂಪದರ್ಶಿಯೊಬ್ಬಳ ಮೇಲೆ ಕರಣ್ ಅತ್ಯಾಚಾರ ನಡೆಸಿರುವುದಾಗಿ ತಿಳಿಸಿದೆ.

ಆಕೆ ಮೇಲೆ ಅತ್ಯಾಚಾರ ಎಸಗಿದ್ದಲ್ಲದೇ, ಅದನ್ನು ವಿಡಿಯೋ ಚಿತ್ರೀಕರಣ ಮಾಡಿ..ಹಣ ನೀಡುವಂತೆ ಒತ್ತಾಯಿಸಿದ್ದ. ಒಂದು ವೇಳೆ ಹಣ ನೀಡದಿದ್ದರೆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆ ಮಾಡುವುದಾಗಿ ಕರಣ್ ಬ್ಲ್ಯಾಕ್ ಮೇಲ್ ಮಾಡಿರುವುದಾಗಿ ರೂಪದರ್ಶಿ ನೀಡಿರುವ ದೂರಿನಲ್ಲಿ ಆರೋಪಿಸಲಾಗಿದೆ.

ಕರಣ್ ವಿರುದ್ಧ ಮುಂಬೈನ ಓಶಿವಾರಾ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಮತ್ತು ಹಣಕ್ಕೆ ಬೇಡಿಕೆ ಇಟ್ಟ ಆಧಾರದ ಮೇಲೆ ಎಫ್ ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಟೆಲಿವಿಷನ್ ನಲ್ಲಿ ಮಹೇಶ್ ಭಟ್ ನಿರ್ದೇಶನದ ಸ್ವಾಭಿಮಾನ್ ಸೀರಿಯಲ್ ಮೂಲಕ ಕರಣ್ ವೃತ್ತಿ ಜೀವನ ಆರಂಭಿಸಿದ್ದ. ಹೀಗೆ ಹಲವು ಸೀರಿಯಲ್ ನಲ್ಲಿ ನಟಿಸಿದ್ದ ಈತ ಜಾಹೀರಾತು ಪ್ರಚಾರದಲ್ಲಿಯೂ ಕಾಣಿಸಿಕೊಂಡಿರುವುದಾಗಿ ವರದಿ ಹೇಳಿದೆ.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ