
ಬಾಲಿವುಡ್ ಹಿರಿಯ ನಟ ವಿಕ್ರಮ್ ಗೋಖಲೆ ನಿಧನ
Team Udayavani, Nov 26, 2022, 3:18 PM IST

ಮುಂಬಯಿ: ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಿವುಡ್ ಹಿರಿಯ ನಟ ವಿಕ್ರಮ್ ಗೋಖಲೆ ಶನಿವಾರ (ನ.26 ರಂದು) ನಿಧನರಾಗಿದ್ದಾರೆ ಎಂದು ವರದಿ ತಿಳಿಸಿದೆ.
ಇತ್ತೀಚೆಗೆ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದ್ದರಿಂದ ಪುಣೆಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಅವರು ಕೊನೆಯುಸಿರೆಳೆದಿದ್ದಾರೆ. ನಟ ವಿಕ್ರಮ್ ಗೋಖಲೆ ಪರ್ವಾನಾ, ಹಮ್ ದಿಲ್ ದೇ ಚುಕೆ ಸನಮ್, ಅಗ್ನಿಪಥ್, ಖುದಾ ಗವಾಹ್ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿದ್ದರು.
2010 ರಲ್ಲಿ ಮರಾಠಿಯಲ್ಲಿ ತೆರೆಕಂಡ ʼ ಅನುಮತಿʼ ಚಿತ್ರದಲ್ಲಿನ ಅಭಿನಯಕ್ಕಾಗಿ ಅವರಿಗೆ ಅತ್ಯುತ್ತಮ ನಟನಾಗಿ ರಾಷ್ಟ್ರ ಪ್ರಶಸ್ತಿ ಪ್ರಾಪ್ತವಾಗಿತ್ತು. ಬೆಳ್ಳಿತೆರೆ ಮಾತ್ರವಲ್ಲದೆ ಕಿರುತೆರೆಯಲ್ಲಿ ನಟಿಸಿ ಜನಪ್ರಿಯರಾಗಿದ್ದರು.
ʼಘರ್ ಆಜಾ ಪರದೇಸಿʼ, ʼಅಲ್ಪವಿರಾಮ್ʼ, ʼಜಾನಾ ನಾ ದಿಲ್ ಸೆ ದೂರ್ʼ, ʼಸಂಜೀವಿನಿ, ಇಂದ್ರಧನುಷ್ ಧಾರಾವಾಹಿಗಳಲ್ಲಿ ನಟಿಸಿದ್ದರು.2010 ರಲ್ಲಿ ʼ ಆಘಾತ್ʼ ಚಿತ್ರವನ್ನು ನಿರ್ದೇಶನ ಮಾಡಿದ್ದರು. ಇತ್ತೀಚೆಗೆ ಶಿಲ್ಪಾ ಶೆಟ್ಟಿ ಅವರ ʼ ನಿಕಮ್ಮ, ಚಿತ್ರದಲ್ಲಿ ಕಾಣಿಸಿಕೊಂಡಿದ್ದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೆಲ್ಫಿ ತೆಗೆಯಲು ಪ್ರಯತ್ನಿಸಿದ ಅಭಿಮಾನಿಯ ಮೊಬೈಲ್ ಫೋನ್ ಎಸೆದ ರಣಬೀರ್ ಕಪೂರ್ ವಿಡಿಯೋ ವೈರಲ್!

ತೆಲುಗು ಸಿನಿಮಾರಂಗದ ಜನಪ್ರಿಯ ಡಬ್ಬಿಂಗ್ ಕಲಾವಿದ ಶ್ರೀನಿವಾಸ ಮೂರ್ತಿ ಹೃದಯಾಘಾತದಿಂದ ನಿಧನ

ʼಪಠಾಣ್ʼ ಮೋಡಿ: 32 ವರ್ಷದ ಬಳಿಕ ಹೌಸ್ ಫುಲ್ ಆದ ಕಾಶ್ಮೀರದ ಥಿಯೇಟರ್

ಬಹುಭಾಷಾ ಹಿರಿಯ ನಟಿ ಜಮುನಾ ನಿಧನ

ಆಲ್ ಟೈಮ್ ರೆಕಾರ್ಡ್: ಮೊದಲ ದಿನ ಗಳಿಸಿದ್ದೆಷ್ಟು ಕಿಂಗ್ ಖಾನ್ ʼಪಠಾಣ್ʼ ಸಿನಿಮಾ
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
