ಪ್ರಾಮಾಣಿಕ ಹುಡುಗನ ನೋವು-ನಲಿವು

ಚಿತ್ರ ವಿಮರ್ಶೆ

Team Udayavani, Nov 30, 2019, 7:04 AM IST

pramanika

ಆತ ಒಳ್ಳೆಯ ಹುಡುಗ. ತಾನಾಯಿತು ತನ್ನ ಕೆಲಸವಾಯಿತು ಎಂದುಕೊಂಡೇ ಶಿಕ್ಷಣ ಮುಗಿಸಿದ ಆತನಿಗೆ ಸರ್ಕಾರಿ ನೌಕರಿಯೂ ಸಿಗುತ್ತದೆ. ಅದೆಷ್ಟೋ ಹುಡುಗಿಯರು ಪ್ರೀತಿ, ಪ್ರೇಮ, ಪ್ರಣಯ ಎಂದು ಆತನ ಹಿಂದೆ ಬಿದ್ದರೂ ಆತ ಮಾತ್ರ ಅವರೆಲ್ಲರನ್ನೂ ತಿರಸ್ಕರಿಸಿ, ಮದುವೆಯಾಗಿ ಬರುವ ಹುಡುಗಿಗೆ ನಿಷ್ಠನಾಗಿರುತ್ತಾನೆ. ಹೇಗೋ ಮದುವೆಯೂ ಆಗಿಬಿಡುತ್ತದೆ. ಆದರೆ, ಒಳ್ಳೆಯ ಹುಡುಗನಿಗೆ ಎಲ್ಲವೂ ಒಳ್ಳೆಯದೇ ಆಗಬೇಕೆಂಬ ಯಾವ ನಿಯಮವೂ ಇಲ್ಲ.

ಮದುವೆಯ ಮೊದಲ ರಾತ್ರಿಯಿಂದಲೇ ಆತ ಕೊರಗಲು ಆರಂಭಿಸುತ್ತಾನೆ. ಸಂಸಾರದಲ್ಲೂ ಬಿರುಗಾಳಿ ಬೀಸುತ್ತದೆ. ಅದಕ್ಕೆ ಕಾರಣ ಆತನಲ್ಲಿರುವ ಸಮಸ್ಯೆ. ಹಾಗಾದರೆ ಆ ಸಮಸ್ಯೆಯಿಂದ ಒಳ್ಳೆ ಹುಡುಗ ಹೊರ ಬರುತ್ತಾನಾ ಎಂಬ ಕುತೂಹಲವಿದ್ದರೆ ನೀವು “ಬ್ರಹ್ಮಚಾರಿ’ ಸಿನಿಮಾ ನೋಡಬಹುದು. ಮನುಷ್ಯನಲ್ಲಿರುವ ಸಮಸ್ಯೆಗಳನ್ನಿಟ್ಟುಕೊಂಡು ಈಗಾಗಲೇ ಅನೇಕ ಸಿನಿಮಾಗಳು ಬಂದಿವೆ. “ಬ್ರಹ್ಮಚಾರಿ’ ಕೂಡಾ ಸಮಸ್ಯೆಯೊಂದರ ಸುತ್ತ ಸಾಗುವ ಸಿನಿಮಾ.

ಸುಖ ಸಂಸಾರದ ಕನಸು ಕಂಡ ಹುಡುಗನೊಬ್ಬನ ಬಾಳಿನಲ್ಲಿ ಕಾಣಿಸಿಕೊಳ್ಳುವ ಸಮಸ್ಯೆಯನ್ನಿಟ್ಟುಕೊಂಡು ಈ ಸಿನಿಮಾ ಮಾಡಲಾಗಿದೆ. ಈ ಸಿನಿಮಾದ ಮುಖ್ಯ ಉದ್ದೇಶ ಮನರಂಜನೆ. ಹಾಗಂತ ಇಡೀ ಸಿನಿಮಾ ಕೇವಲ ಅಷ್ಟಕ್ಕೇ ಸೀಮಿತವಾಗಿಲ್ಲ. ಅದರಾಚೆ ಸೂಕ್ಷ್ಮ ಸಂದೇಶವೊಂದನ್ನೂ ಹೇಳುತ್ತಾ ಸಾಗುವುದು ಪ್ಲಸ್‌. ದಾಂಪತ್ಯದಲ್ಲಿ ಕಾಣಿಸಿಕೊಳ್ಳುವ ಸಮಸ್ಯೆಯಿಂದ ಅದೆಷ್ಟೋ ಜೋಡಿಗಳು ದೂರವಾಗುತ್ತಿದ್ದಾರೆ. ಇಂಥವರಿಗೆ ಈ ಚಿತ್ರದಲ್ಲೊಂದು ತಿಳಿ ಹೇಳುವ ಪ್ರಯತ್ನ ಮಾಡಲಾಗಿದೆ.

ಹಾಗಂತ ಚಿತ್ರದಲ್ಲಿ ಅತಿಯಾದ ಬೋಧನೆ ಇದೆ ಎಂದು ನೀವಂದುಕೊಳ್ಳುವಂತಿಲ್ಲ. ಈ ಚಿತ್ರದ ಮೂಲ ಉದ್ದೇಶ ಮನರಂಜನೆ. ಅದಕ್ಕೆ ನಿರ್ದೇಶಕರು ಇಲ್ಲಿ ಮೋಸ ಮಾಡಿಲ್ಲ. ಚಿತ್ರದ ಆರಂಭದಿಂದಲೂ ನಗಿಸುತ್ತಲೇ ಸಾಗಿದ್ದಾರೆ. ಹಣ, ಅಂತಸ್ತು ಏನೇ ಇದ್ದರೂ ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ನೆಮ್ಮದಿ ಇಲ್ಲದೇ ಹೋದರೆ ಒಬ್ಬ ವ್ಯಕ್ತಿ ಯಾವ ರೀತಿ ಕೊರಗುತ್ತಾನೆ ಎಂಬ ಅಂಶವನ್ನು ಇಲ್ಲಿ ಹೇಳಲಾಗಿದೆ. ಮೊದಲೇ ಹೇಳಿದಂತೆ ಇದೊಂದು ಕಾಮಿಡಿ ಚಿತ್ರ.

ಹಾಗಾಗಿ, ಇಲ್ಲಿ ಹಾಸ್ಯಕ್ಕೆ ಹೆಚ್ಚು ಒತ್ತು. ಹಾಗಂತ ಇಲ್ಲಿ ಅಶ್ಲೀಲ ದೃಶ್ಯಗಳಾಗಲೀ, ಫ್ಯಾಮಿಲಿ ಮಂದಿ ಮುಜುಗರ ಪಡುವಂತಹ ಸನ್ನಿವೇಶಗಳಾಗಲೀ ಇಲ್ಲ. ಆ ಮಟ್ಟಿಗೆ ಇದು ಫ್ಯಾಮಿಲಿ ಎಂಟರ್‌ಟೈನರ್‌. ಇನ್ನು, ಚಿತ್ರದ ಒಂದಷ್ಟು ದೃಶ್ಯಗಳಿಗೆ ಕತ್ತರಿ ಹಾಕಿ, ಸಿನಿಮಾದ ವೇಗ ಹೆಚ್ಚಿಸುವ ಅವಕಾಶ ನಿರ್ದೇಶಕರಿಗಿತ್ತು. ನೀನಾಸಂ ಸತೀಶ್‌ ಇಲ್ಲಿ ಒಳ್ಳೇ ಹುಡುಗ ರಾಮ್‌ ಆಗಿ ಕಾಣಿಸಿಕೊಂಡಿದ್ದಾರೆ.

ತುಂಬಾ ಗಂಭೀರವಾಗಿರುವ ಪಾತ್ರ. ಆ ಗಂಭೀರತೆಯಲ್ಲೇ ಪ್ರೇಕ್ಷಕರನ್ನು ನಗಿಸಲು ಪ್ರಯತ್ನಿಸಿದ್ದಾರೆ. ನಾಯಕಿ ಅದಿತಿ ಪ್ರಭುದೇವ ಅವರಿಗೆ ನಟನೆಗೆ ಅವಕಾಶವಿರುವ ಪಾತ್ರ ಸಿಕ್ಕಿದೆ. ತುಂಬಾ ಬೋಲ್ಡ್‌ ಅಂಡ್‌ ಕ್ಯೂಟ್‌ ಆಗಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಅಚ್ಯುತ್‌ ಕುಮಾರ್‌, ಶಿವರಾಜ್‌ ಕೆ.ಆರ್‌.ಪೇಟೆ, ದತ್ತಣ್ಣ, ಪದ್ಮಜಾ ರಾವ್‌ ತಮ್ಮ ಪಾತ್ರಕ್ಕೆ ನ್ಯಾಯ ಒದಗಿಸಿದ್ದಾರೆ. ಚಿತ್ರದ ಹಾಡು ಇಷ್ಟವಾಗುತ್ತದೆ.

ಚಿತ್ರ: ಬ್ರಹ್ಮಚಾರಿ
ನಿರ್ಮಾಣ: ಉದಯ್‌ ಮೆಹ್ತಾ
ನಿರ್ದೇಶನ: ಚಂದ್ರಮೋಹನ್‌
ತಾರಾಗಣ: ಸತೀಶ್‌ ನೀನಾಸಂ, ಅದಿತಿ ಪ್ರಭುದೇವ, ದತ್ತಣ್ಣ, ಅಚ್ಯುತ್‌ ಕುಮಾರ್‌ ಮತ್ತಿತರರು.

* ರವಿಪ್ರಕಾಶ್‌ ರೈ

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

Bharjari gandu movie review

Bharjari Gandu Review; ಹಳ್ಳಿ ಅಡ್ಡದಲ್ಲಿ ಭರ್ಜರಿ ಆ್ಯಕ್ಷನ್‌

Marigold movie review

Marigold movie review; ಥ್ರಿಲ್ಲರ್ ಹಾದಿಯಲ್ಲಿ ಗೋಲ್ಡನ್ ರೈಡ್

Matinee movie review

Matinee Review; ಪ್ರೀತಿಯ ಅರಮನೆಯಲ್ಲಿ ಆತ್ಮದ ಆಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.