Kadda Chitra review; ಥ್ರಿಲ್ಲರ್‌ ಹಾದಿಯಲ್ಲಿ ಭಾವನೆಗಳ ಪಯಣ


Team Udayavani, Sep 9, 2023, 2:47 PM IST

kadda chitra review

ನಿಜಕ್ಕೂ ಆತ ಕೃತಿಚೌರ್ಯ ಮಾಡಿದ್ದಾನಾ ಅಥವಾ ಅದು ಸುಳ್ಳು ಆರೋಪನಾ, ಆ ಆರೋಪದ ಹಿಂದೆ ಬೇರೆ ಉದ್ದೇಶವಿದೆಯಾ… ಇಂತಹ ಪ್ರಶ್ನೆಗಳನ್ನು ಹುಟ್ಟುಹಾಕುತ್ತಾ ಮುಂದೆ ಸಾಗುವ ಸಿನಿಮಾ ಈ ವಾರ ತೆರೆಕಂಡಿರುವ “ಕದ್ದ ಚಿತ್ರ’.

ವಿಜಯ ರಾಘವೇಂದ್ರ ನಾಯಕರಾಗಿ ನಟಿಸಿರುವ ಈ ಸಿನಿಮಾ ಒಂದು ಸಸ್ಪೆನ್ಸ್‌-ಥ್ರಿಲ್ಲರ್‌ ಜಾನರ್‌ನಡಿ ಮೂಡಿಬಂದಿದೆ. ಪ್ರೇಕ್ಷಕರನ್ನು ಕುತೂಹಲದ ತುತ್ತತುದಿಗೆ ಕೊಂಡೊಯ್ಯಬೇಕೆಂಬುದು ಪರಮ ಉದ್ದೇಶ. ಅದೇ ಕಾರಣಕ್ಕಾಗಿ ಸಾಕಷ್ಟು ಟ್ವಿಸ್ಟ್‌-ಟರ್ನ್ಗಳೊಂದಿಗೆ ಸಿನಿಮಾವನ್ನು ಕಟ್ಟಿಕೊಟ್ಟಿದ್ದಾರೆ.

ಚಿತ್ರದಲ್ಲಿ ನಾಯಕನ ಮೇಲೆ ಬರುವ ಆರೋಪ ಆತನ ಫ್ಯಾಮಿಲಿ ಮೇಲೆ ಏನೆಲ್ಲಾ ಪರಿಣಾಮ ಬೀರುತ್ತದೆ, ಅದರಿಂದ ಆತ ಪಡುವ ಪಾಡೇನು ಎಂಬ ಅಂಶದ ಮೂಲಕ ಚಿತ್ರಕ್ಕೆ ಸೆಂಟಿಮೆಂಟ್‌ ಟಚ್‌ ಕೂಡಾ ಕೊಟ್ಟಿದ್ದಾರೆ. ಮೊದಲೇ ಹೇಳಿದಂತೆ ಆರಂಭದಲ್ಲಿ ಬರಹಗಾರನೊಬ್ಬನ ಬದುಕಿನ ಏಳು-ಬೀಳಿನ ಕಥೆಯಾಗಿ ತೆರೆದುಕೊಳ್ಳುವ ಸಿನಿಮಾ, ಮುಂದೆ ಸಾಗುತ್ತಾ ಹಲವು ಅಸ್ಪಷ್ಟ ಪ್ರಶ್ನೆಗಳನ್ನು ಪ್ರೇಕ್ಷಕರ ಮಡಿಲಿಗೆ ಹಾಕುತ್ತದೆ. ಈ ಹಂತದಲ್ಲಿ ಪ್ರೇಕ್ಷಕನ ತಲೆಗೆ ಹುಳ ಹೊಕ್ಕ ಅನುಭವ. ಆದರೆ, ನಿರ್ದೇಶಕರು ಮುಂದೆ ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡುತ್ತಾ ಪ್ರೇಕ್ಷಕನನ್ನು ಸಮಾಧಾನಪಡಿಸಿ ಕಳುಹಿಸುತ್ತಾರೆ. ಆ ಮಟ್ಟಿಗೆ “ಕದ್ದ ಚಿತ್ರ’ ಒಂದೊಳ್ಳೆಯ ಪ್ರಯತ್ನ.

ಇಡೀ ಸಿನಿಮಾದ ಕಥೆ ನಿಂತಿರೋದು ದ್ವಿತೀಯಾರ್ಧದಲ್ಲಿ. ಇಲ್ಲಿ ಸಿನಿಮಾದ ಹಲವು ಆಯಾಮಗಳು ತೆರೆದುಕೊಳ್ಳುತ್ತಾ ಪ್ರೇಕ್ಷಕನ ಕುತೂಹಲಕ್ಕೆ ಉತ್ತರ ಸಿಗುತ್ತಾ ಹೋಗುತ್ತದೆ. ಕೆಲವೇ ಕೆಲವು ಪಾತ್ರಗಳ ಮೂಲಕ ಇಡೀ ಸಿನಿಮಾವನ್ನು ಕಟ್ಟಿಕೊಡಲಾಗಿದೆ. ಇಡೀ ಸಿನಿಮಾವನ್ನು ಹೆಗಲ ಮೇಲೆ ಹೊತ್ತು ಸಾಗಿರುವುದು ವಿಜಯ ರಾಘವೇಂದ್ರ. ಖುಷಿ, ದುಃಖ, ವೇದನೆ, ಸಿಟ್ಟು, ಪಶ್ಚಾತ್ತಾಪ.. ಹೀಗೆ ನಾನಾ ಭಾವನೆಗಳನ್ನು ಹೊತ್ತು ಸಾಗುವ ಪಾತ್ರದಲ್ಲಿ ವಿಜಯ ರಾಘವೇಂದ್ರ ಗಮನ ಸೆಳೆಯುತ್ತಾರೆ. ಉಳಿದಂತೆ ಚಿತ್ರದ ಸಂಗೀತ, ಛಾಯಾಗ್ರಹಣ ಕಥೆಯ ಆಶಯಕ್ಕೆ ತಕ್ಕುದಾಗಿದೆ.

ರವಿ ರೈ

ಟಾಪ್ ನ್ಯೂಸ್

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

Bharjari gandu movie review

Bharjari Gandu Review; ಹಳ್ಳಿ ಅಡ್ಡದಲ್ಲಿ ಭರ್ಜರಿ ಆ್ಯಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.