‘ಬಡ್ಡೀಸ್‌’ ಚಿತ್ರ ವಿಮರ್ಶೆ: ಸ್ನೇಹದ ನೆರಳಿನಲ್ಲಿ ಥ್ರಿಲ್ಲಿಂಗ್‌ ಸ್ಟೋರಿ


Team Udayavani, Jun 26, 2022, 11:48 AM IST

Kannada movie ‘buddies’ review

ಕಾಲೇಜು, ಫ್ರೆಂಡ್ಸ್‌, ಲವ್‌ ಅಂಶಗಳನ್ನಿಟ್ಟುಕೊಂಡು ಈಗಾಗಲೇ ಅನೇಕ ಸಿನಿಮಾಗಳು ಬಂದಿವೆ. ಈ ವಾರ ತೆರೆಕಂಡಿರುವ “ಬಡ್ಡೀಸ್‌’ ಕೂಡಾ ಕಾಲೇಜು ಸುತ್ತ ಸಾಗುವ ಕಥೆಯಾದರೂ, ತನ್ನ ಕಥಾಹಂದರ ಹಾಗೂ ನಿರೂಪಣೆಯಿಂದ ಭಿನ್ನವಾಗಿ ನಿಲ್ಲುತ್ತದೆ. ಆ ಮಟ್ಟಿಗೆ ನಿರ್ದೇಶಕ ಗುರುವೇಂದ್ರ ಶೆಟ್ಟಿ ಹೊಸತನ ಕಾಯ್ದುಕೊಂಡಿದ್ದಾರೆ.

ಈ ಚಿತ್ರದ ಮೂಲ ಆಶಯ ಸ್ನೇಹವೇ ಮಿಗಿಲು, ಸ್ನೇಹಕ್ಕೆ ಯಾರೇ ಮೋಸ ಮಾಡಿದರೂ ಕೊನೆಗೆ ಗೆಲ್ಲುವುದು ಸ್ನೇಹ ಎಂಬ ಅಂಶದೊಂದಿಗೆ ಇಡೀ ಚಿತ್ರವನ್ನು ಕಟ್ಟಿಕೊಡಲಾಗಿದೆ. ಹಾಗಂತ ಚಿತ್ರ ಕೇವಲ ಸ್ನೇಹಕ್ಕಷ್ಟೇ ಸೀಮಿತವಾಗಿಲ್ಲ. ಜೊತೆಗೊಂದು ಥ್ರಿಲ್ಲರ್‌ ಅಂಶವನ್ನು ಸೇರಿಸಿದ್ದಾರೆ.

ಮೊದಲರ್ಧ ಕಾಲೇಜು, ಸ್ನೇಹ ಎಂಬ ಜಾಲಿರೈಡ್‌ನಲ್ಲಿ ಸಾಗಿದರೆ, ದ್ವಿತೀಯಾರ್ಧ ಥ್ರಿಲ್ಲರ್‌ನೊಂದಿಗೆ ಕುತೂಹಲ ಹೆಚ್ಚಿಸುತ್ತಾ ಸಾಗುತ್ತದೆ. ಎಲ್ಲಾ ಓಕೆ, ಚಿತ್ರದ ಕಥೆ ಏನು ಎಂದು ನೀವು ಕೇಳಬಹುದು. ಇಲ್ಲಿನ ನಾಯಕ ಶ್ರೀಮಂತ. ಆದರೆ, ಆತನಿಗೆ ಒಂಟಿತನ ಕಾಡುತ್ತದೆ. ಈ ಒಂಟಿತನದಿಂದ ಆತನನ್ನು ದೂರ ಮಾಡಲು ಅನಾಥಶ್ರಮದಿಂದ ಬರುವ ನಾಲ್ಕು ಹುಡುಗರು, ಈ ನಡುವೆ ಒಂದು ಲವ್‌ಸ್ಟೋರಿ, ಕಾಲೇಜು ರಂಗು… ಹೀಗೆ ಸಾಗುವ ಕಥೆಯಲ್ಲಿ ಸಾಕಷ್ಟು ಟ್ವಿಸ್ಟ್‌ ಟರ್ನ್ಗಳಿವೆ. ಇದರಿಂದಾಗಿ “ಬಡ್ಡೀಸ್‌’ ಜಾಲಿಯಾಗಿಯೇ ಸಾಗುತ್ತದೆ. ಮೊದಲೇ ಹೇಳಿದಂತೆ ಚಿತ್ರದಲ್ಲಿ ಸ್ನೇಹದ ಮಹತ್ವವನ್ನು ಹೇಳಲಾಗಿದೆ. ಅದಕ್ಕಾಗಿ ನಿರ್ದೇಶಕರು ಸಾಕಷ್ಟು ಸನ್ನಿವೇಶವನ್ನು ಸೃಷ್ಟಿಸಿದ್ದಾರೆ ಕೂಡಾ.

ಕಿರುತೆರೆಯಲ್ಲಿ ತನ್ನದೇ ಅಭಿಮಾನಿ ಬಳಗ ಹೊಂದಿರುವ ನಾಯಕ ನಟ ಕಿರಣ್‌ ರಾಜ್‌ “ಬಡ್ಡೀಸ್‌’ ಮೂಲಕ ಗಮನ ಸೆಳೆದಿದ್ದಾರೆ. ನಟನೆಯ ಜೊತೆಗೆ ಹಾಡು-ಫೈಟುಗಳಲ್ಲೂ ಕಿರಣ್‌ ರಾಜ್‌ ಮಿಂಚಿದ್ದು, ಹೀರೋ ಆಗಿ ಭವಿಷ್ಯದ ಭರವಸೆ ಮೂಡಿಸಿದ್ದಾರೆ. ನಾಯಕಿ ಸಿರಿ, ಗೋಪಾಲಕೃಷ್ಣ ದೇಶಪಾಂಡೆ ತಮ್ಮ ಪಾತ್ರಗಳಲ್ಲಿ ಮಿಂಚಿದ್ದಾರೆ. “ಬಡ್ಡೀಸ್‌’ಗಳ ಜಾಲಿ ರೈಡ್‌ ಅನ್ನು ಒಮ್ಮೆ ಕಣ್ತುಂಬಿಕೊಳ್ಳಬಹುದು

ರವಿ ರೈ

ಟಾಪ್ ನ್ಯೂಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

Bharjari gandu movie review

Bharjari Gandu Review; ಹಳ್ಳಿ ಅಡ್ಡದಲ್ಲಿ ಭರ್ಜರಿ ಆ್ಯಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.