ಚಿತ್ರ ವಿಮರ್ಶೆ: ಸರಳ ಸುಂದರ ‘ಮಗಳೇ’

Team Udayavani, Apr 22, 2023, 2:02 PM IST

magale kannada movie review

ಒಂದು ಸರಳವಾದ ಕಥೆಯನ್ನು ನೀವು ಎಷ್ಟು ಸುಂದರವಾಗಿ, ಮನಮಟ್ಟುವಂತೆ ಕಟ್ಟಿಕೊಡುತ್ತೀರಿ ಎಂಬುದರ ಮೇಲೆ ಒಂದು ಸಿನಿಮಾದ ಓಟ ನಿಂತಿರುತ್ತದೆ. ಆ ವಿಚಾರದಲ್ಲಿ ಈ ವಾರ ತೆರೆಕಂಡಿರುವ “ಮಗಳೇ’ ಒಂದು ಉತ್ತಮ ಪ್ರಯತ್ನದ ಸಿನಿಮಾ. ಸಣ್ಣ ಬಜೆಟ್‌ನಲ್ಲಿ, ಕಡಿಮೆ ಪಾತ್ರಗಳ ನ್ನಿಟ್ಟುಕೊಂಡು, ಎಲ್ಲೂ ಗೊಂದಲವಿಲ್ಲದಂತೆ ಹೇಳಬೇಕಾದ ವಿಚಾರವನ್ನು ಸ್ಪಷ್ಟವಾಗಿ ಹೇಳುತ್ತಾ, ಪ್ರೇಕ್ಷಕರಿಗೆ ಹತ್ತಿರವಾಗುವ ಸಿನಿಮಾ “ಮಗಳೇ’.

ಸಿನಿಮಾದ ಹೆಸರೇ ಸೂಚಿಸುವಂತೆ “ಮಗಳೇ’ ರೆಗ್ಯುಲರ್‌ ಕಮರ್ಷಿಯಲ್‌ ಅಂಶಗಳಿಂದ ಮುಕ್ತವಾಗಿರುವ ಸಿನಿಮಾ. ಒಂದು ಗಟ್ಟಿ ಕಥಾಹಂದರದೊಂದಿಗೆ “ಮಗಳೇ’ ಸಿನಿಮಾವನ್ನು ಕಟ್ಟಿಕೊಟ್ಟಿದ್ದಾರೆ ನಿರ್ದೇಶಕ ಸೋಮು ಕೆಂಗೇರಿ. ಸಿನಿಮಾದ ಕಥೆಯನ್ನು ಯಾವ ರೀತಿ ಕಟ್ಟಿಕೊಡಬೇಕು ಎಂಬ ಸ್ಪಷ್ಟತೆ ನಿರ್ದೇಶಕರಲ್ಲಿ ಇದೆ. ಈ ಮೂಲಕ ಮೊದಲ ಚಿತ್ರದಲ್ಲೇ ನಿರ್ದೇಶಕರು ಭರವಸೆ ಮೂಡಿಸಿದ್ದಾರೆ.

ಕೆಲವೇ ಕೆಲವು ಪಾತ್ರಗಳನ್ನಿಟ್ಟುಕೊಂಡು, ಯಾವುದೇ ಅಬ್ಬರವಿಲ್ಲದೇ, ಕಥೆಯ ಆಶಯಕ್ಕೆ ತಕ್ಕಂತೆ ಚಿತ್ರವನ್ನು ಕಟ್ಟಿಕೊಡಲಾಗಿದೆ. ಹೆತ್ತವರ ಹಾಗೂ ಮಕ್ಕಳ ನಡುವಿನ ಬಾಂಧ್ಯವದ ಕಥಾಹಂದರದೊಂದಿಗೆ ತಯಾರಾಗಿರುವ ಈ ಸಿನಿಮಾದಲ್ಲಿ ಇವತ್ತಿನ ಪಾಲಕರು ಮಗಳ ಜೊತೆ ಹೇಗಿರಬೇಕು, ಎಷ್ಟು ಸೂಕ್ಷ್ಮವಾಗಿರಬೇಕು ಎಂಬ ಅಂಶವನ್ನು ಹೇಳಲಾಗಿದೆ.ಈ ಚಿತ್ರದ ಹೈಲೈಟ್‌ಗಳಲ್ಲಿ ಸಿನಿಮಾ ಸಾಗುವ ರೀತಿ ಹಾಗೂ ಅಲ್ಲಲ್ಲಿ ಬರುವ ಟ್ವಿಸ್ಟ್‌ ಪ್ರಮುಖವಾಗಿದೆ. ಮೊದಲರ್ಧ ಸಿನಿಮಾದ ಪಾತ್ರ ಪರಿಚಯ ಸೇರಿದಂತೆ ಇತರ ಅಂಶಗಳೊಂದಿಗೆ ಸಾಗಿದರೆ, ಸಿನಿಮಾದ ನಿಜವಾದ ಟ್ವಿಸ್ಟ್‌ ತೆರೆದುಕೊಳ್ಳುವುದು ದ್ವಿತೀಯಾರ್ಧದಲ್ಲಿ. ಪ್ರೇಕ್ಷಕನ ಊಹೆಗೆ ನಿಲುಕದಂತೆ ಸಿನಿಮಾ ಸಾಗುವುದು ಈ ಸಿನಿಮಾದ ಪ್ಲಸ್‌ ಪಾಯಿಂಟ್‌ಗಳಲ್ಲಿ ಒಂದು.

ಚಿತ್ರದಲ್ಲಿ ಗುರುರಾಜಶೆಟ್ಟಿ, ಬಿಂದು ರಕ್ಷಿಧಿ, ಸುಪ್ರಿತಾ ರಾಜ್‌, ಗ್ರೀಷ್ಮ ಶ್ರೀಧರ್‌, ಬಿಷನ್‌ ಶೆಟ್ಟಿ, ನೀನಾಸಂ ನವೀನ್‌ ಕುಮಾರ್‌ ಮುಂತಾದವರು ಅಭಿನಯಿಸಿದ್ದು, ಪ್ರತಿಯೊಬ್ಬರು ಪಾತ್ರಕ್ಕೆ ನ್ಯಾಯ ಒದಗಿಸಿದ್ದಾರೆ. ಅದರಲ್ಲೂ ಬಿಂದು ರಕ್ಷಿಧಿ ಗಮನ ಸೆಳೆಯುತ್ತಾರೆ. ಬಿ.ಎಸ್‌.ಕೆಂಪರಾಜು ಅವರ ಸಂಕಲನ ಕೂಡಾ ಚಿತ್ರ ತೆರೆಮೇಲೆ ಅಚ್ಚುಕಟ್ಟಾಗಿ ಮೂಡಿಬರುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಒಂದು ಪ್ರಯತ್ನವಾಗಿ “ಮಗಳೇ’ ಇಷ್ಟವಾಗುತ್ತದೆ.

ರವಿ ರೈ

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

Bharjari gandu movie review

Bharjari Gandu Review; ಹಳ್ಳಿ ಅಡ್ಡದಲ್ಲಿ ಭರ್ಜರಿ ಆ್ಯಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.