ಚಿತ್ರ ವಿಮರ್ಶೆ: ‘ಶ್ರೀಮಂತ’ ರೈತರ ಚಿತ್ರಣ

Team Udayavani, May 20, 2023, 3:19 PM IST

ಚಿತ್ರ ವಿಮರ್ಶೆ: ‘ಶ್ರೀಮಂತ’ ರೈತರ ಚಿತ್ರಣ

ಹಳ್ಳಿಯಲ್ಲಿರುವ ಯುವಕರು ಇಂದು ಮಹಾನಗರಗಳತ್ತ ಮುಖ ಮಾಡುತ್ತಿದ್ದಾರೆ. ಹಳ್ಳಿಯಲ್ಲಿ ಕೃಷಿ ಮಾಡಿಕೊಂಡು ಬದುಕು ಕಟ್ಟಿಕೊಳ್ಳುವುದು ಕಷ್ಟ ಎಂಬ ವಾತಾವರಣ ಸೃಷ್ಠಿಯಾಗುತ್ತಿದೆ. ಒಂದೆಡೆ, ಹಳ್ಳಿಯಲ್ಲಿರುವ ಯುವಕರಿಗೆ ಮದುವೆಯಾಗಲು ಹುಡುಗಿಯರು ಸಿಗೋದು ಕಷ್ಟ ಅಂತಿದ್ರೆ, ಮತ್ತೂಂದೆಡೆ ಹಳ್ಳಿಯ ಹುಡುಗಿಯರು ಕೂಡ ಪಟ್ಟಣದ ಹುಡುಗರನ್ನೇ ಬಯಸುತ್ತಾರೆ. ಇಂಥ ಪರಿಸ್ಥಿತಿ ಮತ್ತು ಮಾತುಗಳನ್ನು ಬಹುತೇಕರು ಕೇಳಿರುತ್ತೀರಿ. ಇಂಥದ್ದೇ ವಿಷಯವನ್ನು ಇಟ್ಟುಕೊಂಡು ಈ ವಾರ ತೆರೆಗೆ ಬಂದಿರುವ ಸಿನಿಮಾ “ಶ್ರೀಮಂತ’ ಹಳ್ಳಿಯೊಂದರ ರೈತಾಪಿ ಬದುಕು, ಸಾಮಾಜಿಕ ಸ್ಥಿತಿಗತಿ, ನೋವು-ನಲಿವು, ಸ್ನೇಹ-ಪ್ರೀತಿ-ಬಾಂಧವ್ಯ ಎಲ್ಲದರ ಚಿತ್ರಣವನ್ನು “ಶ್ರೀಮಂತ’ವಾಗಿ ತೆರೆಮೇಲೆ ಕಟ್ಟಿಕೊಟ್ಟಿದ್ದಾರೆ ನಿರ್ದೇಶಕ ಹಾಸನ್‌ ರಮೇಶ್‌.

ಪ್ರಸ್ತುತ ಗ್ರಾಮೀಣ ಭಾಗದ ಜನಜೀವನವನ್ನು ಒಂದಷ್ಟು ಮನರಂಜನಾತ್ಮಕವಾಗಿ “ಶ್ರೀಮಂತ’ ಸಿನಿಮಾದ ಮೂಲಕ ಕಟ್ಟಿಕೊಡುವಲ್ಲಿ ಚಿತ್ರತಂಡ ಭಾಗಶಃ ಯಶಸ್ವಿಯಾಗಿದೆ. ಅಲ್ಲಲ್ಲಿ ಹಾಡುಗಳು, ಆ್ಯಕ್ಷನ್‌, ಲವ್‌, ಕಾಮಿಡಿ, ಸೆಂಟಿಮೆಂಟ್‌ ಎಲ್ಲವನ್ನೂ ಹದವಾಗಿ ಸೇರಿಸಿ ಕಲಾತ್ಮಕ ಕಥಾಹಂದರ ಒಂದಕ್ಕೆ ಕಮರ್ಷಿಯಲ್‌ ಟಚ್‌ ನೀಡಲಾಗಿದೆ. ಅದನ್ನು ಹೊರತುಪಡಿಸಿ, ಸಿನಿಮಾದ ಅವಧಿಯನ್ನು ಸ್ವಲ್ಪ ಕಡಿಮೆ ಮಾಡಿ, ಕೆಲ ದೃಶ್ಯಗಳಿಗೆ ಕತ್ತರಿ ಹಾಕಿದ್ದರೆ, “ಶ್ರೀಮಂತ’ ಇನ್ನಷ್ಟು ಪರಿಣಾಮಕಾರಿಯಾಗಿ ಪ್ರೇಕ್ಷಕರನ್ನು ತಲುಪುವ ಸಾಧ್ಯತೆಗಳಿದ್ದವು.

ಇನ್ನು ಯುವ ನಟ ಕ್ರಾಂತಿ, ವೈಷ್ಣವಿ ಮೆನನ್‌ ಮತ್ತು ವೈಷ್ಣವಿ ಪಟವರ್ಧನ್‌ ತಮ್ಮ ಪಾತ್ರವನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ. ನಟಿ ಕಲ್ಯಾಣಿ ಗ್ರಾಮೀಣ ಮಹಿಳೆಯಾಗಿ ತಮ್ಮ ಪಾತ್ರದಲ್ಲಿ ಗಮನ ಸೆಳೆಯುವ ಅಭಿನಯ ನೀಡಿದ್ದಾರೆ. ನಟ ಸೋನು ಸೂದು ಕೊನೆಯಲ್ಲಿ ಬಂದು ಹಿತೋಪದೇಶ ಮಾಡಿ ತೆರಳುತ್ತಾರೆ.

ಉಳಿದಂತೆ ಚರಣ್‌ ರಾಜ್‌, ಗಿರೀಶ್‌ ಶಿವಣ್ಣ, ಕುರಿರಂಗ, ರಮೇಶ್‌ ಭಟ್‌, ರಾಜು ತಾಳಿಕೋಟೆ, ರವಿಶಂಕರ್‌ ಗೌಡ, ಸಾಧುಕೋಕಿಲ ಹೀಗೆ ಬೃಹತ್‌ ಕಲಾವಿದರ ತಾರಾಗಣ ಸಿನಿಮಾದ ಉದ್ದಕ್ಕೂ ಕಾಣ ಸಿಗುತ್ತದೆ. ಸಿನಿಮಾದ ಛಾಯಾಗ್ರಹಣ “ಶ್ರೀಮಂತ’ನ ದೃಶ್ಯಗಳನ್ನು ಶ್ರೀಮಂತವಾಗಿಯೇ ಕಾಣುವಂತೆ ಮಾಡಿದೆ. ಸಿನಿಮಾದ ಹಾಡುಗಳು ಮತ್ತು ಹಿನ್ನೆಲೆ ಸಂಗೀತ ಸಿನಿಮಾದ ಹೈಲೈಟ್ಸ್‌ ಎನ್ನಬಹುದು. ಒಂದಷ್ಟು ಮರಂಜನೆ ಜೊತೆಗೊಂದು ಮೆಸೇಜ್‌ ಹೊತ್ತುಕೊಂಡು ಬಂದಿರುವ “ಶ್ರೀಮಂತ’ನನ್ನು ಒಮ್ಮೆ ನೋಡಿಬರಲು ಅಡ್ಡಿಯಿಲ್ಲ.

ಟಾಪ್ ನ್ಯೂಸ್

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

Bharjari gandu movie review

Bharjari Gandu Review; ಹಳ್ಳಿ ಅಡ್ಡದಲ್ಲಿ ಭರ್ಜರಿ ಆ್ಯಕ್ಷನ್‌

Marigold movie review

Marigold movie review; ಥ್ರಿಲ್ಲರ್ ಹಾದಿಯಲ್ಲಿ ಗೋಲ್ಡನ್ ರೈಡ್

Matinee movie review

Matinee Review; ಪ್ರೀತಿಯ ಅರಮನೆಯಲ್ಲಿ ಆತ್ಮದ ಆಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

16

Crime: ಸುಳ್ಯ ಭಾಗದ ಅಪರಾಧ ಸುದ್ದಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.