ಮೆಗಾ ಅಭಿಮಾನಿಗಳಿಗೆ ಶಾಕಿಂಗ್ : ನಟ ಸಾಯಿ ಧರ್ಮತೇಜ್ ಬೈಕ್ ಅಪಘಾತ, ಆಸ್ಪತ್ರೆಗೆ ದಾಖಲು
Team Udayavani, Sep 11, 2021, 8:14 AM IST
ಹೈದರಾಬಾದ್ : ತೆಲುಗು ಖ್ಯಾತ ನಟ ಸಾಯಿ ಧರ್ಮತೇಜ್ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಸದ್ಯ ಸಾಯಿ ಧರ್ಮ ತೇಜ್ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಹೈದರಾಬಾದ್ ನಲ್ಲಿರುವ ಕೇಬಲ್ ಬ್ರಿಜ್ಡ್ ಬಳಿ ಬೈಕ್ ನಲ್ಲಿ ವೇಗವಾಗಿ ಬರುತ್ತಿದ್ದ ಹಿನ್ನೆಲೆಯಲ್ಲಿ ಅಪಘಾತ ಸಂಭವಿಸಿದೆ. ಸ್ಪೋರ್ಟ್ ಬೈಕ್ ನಲ್ಲಿ ಜೋರಾಗಿ ಚಲಿಸುತ್ತಿದ್ದ ಹಿನ್ನೆಲೆಯಲ್ಲೇ ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನು ಸಾಯಿ ಧರ್ಮ ತೇಜ್ ಹೆಲ್ಮೆಟ್ ಧರಿಸಿದ್ದರು. ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಜುಬಿಲಿ ಹಿಲ್ಸ್ನ ಅಪೋಲೊ ಆಸ್ಪತ್ರೆಯಲ್ಲಿ ಸಾಯಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರನ್ನು ತುರ್ತು ನಿಗಾ ಘಟಕದಲ್ಲಿ ಇರಿಸಲಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಇನ್ನು ಸಾಯಿ ಧರಮ್ ಸಹೋದರ ವೈಷ್ಣವ್ ತೇಜ್, ಚಿಕ್ಕಪ್ಪ ಪವನ್ ಕಲ್ಯಾಣ್, ಸೋದರ ಸಂಬಂಧಿಗಳಾದ ವರುಣ್ ತೇಜ್, ನಿಹಾರಿಕಾ ಕೊನಿಡೆಲಾ ಮತ್ತು ಸ್ನೇಹಿತ ಸಂದೀಪ್ ಕಿಶನ್ ಆಸ್ಪತ್ರೆಗೆ ಭೇಟಿ ನೀಡಿ, ನಟನ ಆರೋಗ್ಯ ವಿಚಾರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು
Congress ಪಡೆದ ಬಾಂಡ್ ಸುಲಿಗೆ ಅಲ್ಲವೇ: ಅಮಿತ್ ಶಾ ಪ್ರಶ್ನೆ
250 km per hour; ಶೀಘ್ರದಲ್ಲೇ ಬುಲೆಟ್ ರೈಲಿನಲ್ಲೂ ಆತ್ಮನಿರ್ಭರತೆ!
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?