ಮೇನಲ್ಲಿ ಟಕ್ಕರ್: ಕನ್ನಡತಿ ರಂಜನಿ ನಾಯಕಿ
Team Udayavani, Mar 23, 2022, 10:06 AM IST
ಕೆಲವು ಸಿನಿಮಾಗಳ ಹೆಸರು ಕೇಳಿಬರುತ್ತಲೇ ಇರುತ್ತದೆ. ಆದರೆ, ಆ ಸಿನಿಮಾಗಳು ಮಾತ್ರ ಯಾವಾಗ ಬಿಡುಗಡೆಯಾಗುತ್ತದೆ ಎಂಬ ಪ್ರಶ್ನೆಗೆ ಉತ್ತರ ಹುಡುಕೋದು ಕಷ್ಟ. ಇದೇ ರೀತಿ “ಟಕ್ಕರ್’ ಸಿನಿಮಾ ಕೂಡಾ ರಿಲೀಸ್ ವಿಚಾರದಲ್ಲಿ ಗೊಂದಲದಲ್ಲಿತ್ತು.
ಈಗ ಆ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದ್ದು, ಮೇ ತಿಂಗಳಿನಲ್ಲಿ ಬಿಡುಗಡೆಯಾಗಲಿದೆ. ಮನೋಜ್ ಕುಮಾರ್ ಹಾಗೂ ರಂಜನಿ ರಾಘವನ್ ನಟಿಸಿರುವ ಈ ಚಿತ್ರವನ್ನು ನಾಗೇಶ್ ಕೋಗಿಲು ನಿರ್ಮಿಸಿದ್ದಾರೆ. ಚಿತ್ರವನ್ನು ವಿ.ರಘು ಶಾಸ್ತ್ರಿ ನಿರ್ದೇಶಿಸಿದ್ದಾರೆ. ಚಿತ್ರದ ಒಂದು ಹಾಡನ್ನು ಮಲೇಶಿಯಾದಲ್ಲಿ ಚಿತ್ರೀಕರಿಸಿದ್ದು ಉಳಿದ ಭಾಗದ ಚಿತ್ರೀಕರಣ ಬೆಂಗಳೂರು, ಮೈಸೂರಿನಲ್ಲಿ ಶೂಟ್ ಮಾಡಲಾಗಿದೆ.
ಈ ಚಿತ್ರಕ್ಕೆ ಕದ್ರಿ ಮಣಿಕಾಂತ್ ಅವರ ಸಂಗೀತ, ಡಾ. ವಿ ನಾಗೇಂದ್ರ ಪ್ರಸಾದ್ ಅವರ ಸಾಹಿತ್ಯ, ಡಿಫರೆಂಟ್ ಡ್ಯಾನಿ ಸಾಹಸ, ಕೆ.ಎಂ. ಪ್ರಕಾಶ್ ಸಂಕಲನ, ಮೋಹನ್ ನೃತ್ಯ ನಿರ್ದೇಶನ, ಈಶ್ವರಿ ಕುಮಾರ್ ಕಲಾ ನಿರ್ದೇಶನ, ಗುರುರಾಜ್ ದೇಸಾಯಿ ಅವರ ಸಂಭಾಷಣೆ ಚಿತ್ರಕ್ಕಿದೆ. ಮನೋಜ್ ಕುಮಾರ್, ರಂಜನಿ ರಾಘವನ್, ಕೆ.ಎಸ್. ಶ್ರೀಧರ್, ಶಂಕರ್ ಅಶ್ವಥ್, ಸುಮಿತ್ರಾ, ಭಜರಂಗಿ ಖ್ಯಾತಿಯ ಸೌರವ್ ಲೋಕಿ, ಸಾಧು ಕೋಕಿಲಾ, ಲಕ್ಷ್ಮಣ್ ಶಿವಶಂಕರ್, ಅಶ್ವಿನ್ ಹಾಸನ್ ಸೇರಿದಂತೆ ಅನೇಕರು ನಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ