ಭಾರತ:24ಗಂಟೆಯಲ್ಲಿ 1,334 covid ಪ್ರಕರಣ ಪತ್ತೆ,ಒಟ್ಟು ಸಂಖ್ಯೆ 15,712ಕ್ಕೆ ಏರಿಕೆ:ಸಚಿವಾಲಯ
23 ರಾಜ್ಯಗಳ 54 ಜಿಲ್ಲೆಗಳಲ್ಲಿ, ಕೇಂದ್ರಾಡಳಿತ ಪ್ರದೇಶಗಳಲ್ಲಿ ಕಳೆದ 14 ದಿನಗಳಲ್ಲಿ ಯಾವುದೇ ಕೋವಿಡ್ 19 ಸೋಂಕಿನ ಪ್ರಕರಣ ವರದಿಯಾಗಿಲ್ಲ
Team Udayavani, Apr 19, 2020, 6:08 PM IST
ನವದೆಹಲಿ: ಕಳೆದ 24ಗಂಟೆಯಲ್ಲಿ ಕೋವಿಡ್ 19 ವೈರಸ್ ನ 1,334 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 27 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ದೇಶದಲ್ಲಿ ಕೋವಿಡ್ 19 ಸಾವಿನ ಸಂಖ್ಯೆ 507ಕ್ಕೆ ಏರಿದೆ. ಸೋಂಕಿತರ ಸಂಖ್ಯೆ 15,712 ದಾಟಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವಾಲಯದ ಜಂಟಿ ಕಾರ್ಯದರ್ಶಿ ಲಾವ್ ಅಗರ್ವಾಲ್, ಕಳೆದ 28 ದಿನಗಳಲ್ಲಿ ಕರ್ನಾಟಕದ ಕೊಡಗು ಮತ್ತು ಪಾಂಡಿಚೇರಿಯ ಮಾಹೆಯಲ್ಲಿ ಕೋವಿಡ್ 19 ವೈರಸ್ ನ ಯಾವುದೇ ಹೊಸ ಪ್ರಕರಣಗಳು ಪತ್ತೆಯಾಗಿಲ್ಲ ಎಂದು ಪುನರುಚ್ಚರಿಸಿದರು.
23 ರಾಜ್ಯಗಳ 54 ಜಿಲ್ಲೆಗಳಲ್ಲಿ, ಕೇಂದ್ರಾಡಳಿತ ಪ್ರದೇಶಗಳಲ್ಲಿ ಕಳೆದ 14 ದಿನಗಳಲ್ಲಿ ಯಾವುದೇ ಕೋವಿಡ್ 19 ಸೋಂಕಿನ ಪ್ರಕರಣ ವರದಿಯಾಗಿಲ್ಲ ಎಂದು ವಿವರಿಸಿದ್ದಾರೆ. ದೇಶದಲ್ಲಿ ಈವರೆಗೆ 2,231 ಕೋವಿಡ್ 19 ಸೋಂಕಿತ ವ್ಯಕ್ತಿಗಳು ಗುಣಮುಖರಾಗಿದ್ದಾರೆ ಎಂದು ತಿಳಿಸಿದರು.
ದೇಶಾದ್ಯಂತ 755 ಆಸ್ಪತ್ರೆಗಳು ಮತ್ತು 1,389 ಹೆಲ್ತ್ ಕೇರ್ ಸೆಂಟರ್ ಗಳು ಕೋವಿಡ್ 19 ವೈರಸ್ ಪೀಡಿತರಿಗಾಗಿಯೇ ಕಾರ್ಯನಿರ್ವಹಿಸುತ್ತಿದೆ. ಇಲ್ಲಿ ಎಲ್ಲಾ ವಿಧದಲ್ಲಿಯೂ ಚಿಕಿತ್ಸೆ, ಶುಶ್ರೂಷೆ ನಡೆಸಲಾಗುತ್ತಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..