ಕೋವಿಡ್ ಕಳವಳ ಜು.16: 4169 ಸೋಂಕಿತರು ; 1263 ಚೇತರಿಕೆ ಮತ್ತು 104 ಸಾವು

ಬೆಂಗಳೂರು ನಗರ 2344, ದಕ್ಷಿಣ ಕನ್ನಡ 238, ಧಾರವಾಡ 176, ವಿಜಯಪುರ 144, ಮೈಸೂರು 130, ಕಲಬುರಗಿ 123, ಮತ್ತು ಉಡುಪಿ 113 ಸೋಂಕು ಪ್ರಕರಣಗಳು

Team Udayavani, Jul 16, 2020, 7:59 PM IST

ಕೋವಿಡ್ ಕಳವಳ ಜು.16: 4169 ಸೋಂಕಿತರು ; 1263 ಚೇತರಿಕೆ ಮತ್ತು 104 ಸಾವು

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೆಂಗಳೂರು: ಬುಧವಾರ ಸಾಯಂಕಾಲದಿಂದ ಗುರುವಾರ ಸಾಯಂಕಾಲದವರೆಗಿನ ಕೋವಿಡ್ 19 ಪ್ರಕರಣಗಳ ವರದಿಯ ಪ್ರಕಾರ ರಾಜ್ಯದಲ್ಲಿ ಈ 24 ಗಂಟೆಗಳ ಅವಧಿಯಲ್ಲಿ ಒಟ್ಟು 4169 ಕೋವಿಡ್ 19 ಸೋಂಕು ಪ್ರಕರಣಗಳು ವರದಿಯಾಗಿವೆ.

ಲಭ್ಯ ವರದಿಗಳ ಪ್ರಕಾರ ಈ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 1263 ಕೋವಿಡ್ 19 ಸೋಂಕಿತರು ಚೇತರಿಸಿಕೊಂಡಿರುವುದು ಒಂದು ಆಶಾದಾಯಕ ವಿಚಾರವಾಗಿದೆ. ಇಂದು ರಾಜ್ಯದಲ್ಲಿ ಕೋವಿಡ್ 19 ಸಂಬಂಧಿತ ಒಟ್ಟು 104 ಸಾವು ಸಂಭವಿಸಿದೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ ಎರಡು ಸಾವಿರದ ಗಡಿ ದಾಟಿದ್ದು, ಇಂದು ಇಲ್ಲಿ 2344 ಸೋಂಕಿತರು ಪತ್ತೆಯಾಗಿದ್ದಾರೆ. ಆ ಬಳಿಕದ ಸ್ಥಾನದಲ್ಲಿ ದಕ್ಷಿಣ ಕನ್ನಡ (238), ಧಾರವಾಡ (176), ವಿಜಯಪುರ (144), ಮೈಸೂರು (130), ಕಲಬುರಗಿ (123), ಉಡುಪಿ (113) ಹಾಗೂ ರಾಯಚೂರು (101) ಜಿಲ್ಲೆಗಳಿವೆ.

ಇಂದು ರಾಜ್ಯದಲ್ಲಿ ಕೋವಿಡ್ 19 ಸೋಂಕಿಗೆ ಒಟ್ಟು 104 ಜನ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ ಈ ಮಹಾಮಾರಿಗೆ ಬಲಿಯಾದವರ ಒಟ್ಟು ಸಂಖ್ಯೆ 1032ಕ್ಕೆ ಏರಿಕೆ ಆಗಿದೆ.

ಇದನ್ನೂ ಓದಿ: ಚಿಕಿತ್ಸೆಗೆ ಸ್ಪಂದಿಸಿದ ಒಂದೂವರೆ ತಿಂಗಳ ಮಗು ಕೋವಿಡ್ ಸೋಂಕಿನಿಂದ ಗುಣಮುಖ

ಇಂದು ರಾಜ್ಯಾದ್ಯಂತ ಒಟ್ಟು 1263 ಕೋವಿಡ್ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ರಾಜ್ಯದಲ್ಲಿ ಇಂದಿನವರೆಗೆ ಒಟ್ಟು 51422 ಕೋವಿಡ್ 19 ಸೋಂಕು ಪ್ರಕರಣಗಳು ದಾಖಲುಗೊಂಡಿದೆ. ಮತ್ತು ಇವರಲ್ಲಿ 19729 ಸೋಂಕಿತರು ಗುಣಮುಖರಾಗಿದ್ದಾರೆ ಹಾಗೂ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 30655 ಇದೆ.

ಈ ಅವಧಿಯಲ್ಲಿ ಬೆಂಗಳೂರು ನಗರ ಜಿಲ್ಲೆಯೊಂದರಲ್ಲೇ 70 ಸೋಂಕಿತರು ಮೃತಪಟ್ಟಿದ್ದಾರೆ. ಇನ್ನುಳಿದಂತೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 07 ಸೋಂಕಿತರು ಮೃತಪಟ್ಟಿದ್ದಾರೆ. ಕೋಲಾರ ಜಿಲ್ಲೆಯಲ್ಲಿ 06 ಹಾಗೂ ಬಾಗಲಕೋಟೆ ಜಿಲ್ಲೆಯಲ್ಲಿ 05 ಸೋಂಕಿತರು ಸಾವನ್ನಪ್ಪಿದ್ದಾರೆ. ಇನ್ನುಳಿದಂತೆ, ಬಳ್ಳಾರಿ ಜಿಲ್ಲೆಯಲ್ಲಿ 04, ಮೈಸೂರು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ತಲಾ 03, ಬೀದರ್, ಹಾಸನ ಜಿಲ್ಲೆಗಳಲ್ಲಿ ತಲಾ 2 ಕೋವಿಡ್ 19 ಸಂಬಂಧಿ ಸಾವು ಸಂಭವಿಸಿದೆ. ಕಲಬುರಗಿ ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ತಲಾ ಒಂದೊಂದು ಸಾವು ಸಂಭವಿಸಿದೆ.

ಇದನ್ನೂ ಓದಿ: ಉಡುಪಿಯಲ್ಲಿ ಮತ್ತೆ ಶತಕ ದಾಟಿದ ಕೋವಿಡ್: 109 ಜನರಿಗೆ ಕೋವಿಡ್ ಸೋಂಕು ದೃಢ

ಈ ಮೂಲಕ ರಾಜ್ಯದಲ್ಲಿ ಕೋವಿಡ್ 19 ಸೋಂಕಿಗೆ ಸಾವನ್ನಪ್ಪಿದವರ ಸಂಖ್ಯೆ ಸಾವಿರದ ಗಡಿ ದಾಟಿದ್ದು ಇಲ್ಲಿಯವರೆಗೆ 1032 ಸಾವು ಸಂಭವಿಸಿದೆ. ಹಾಗೂ 06 ಜನ ಕೋವಿಡ್ 19 ಸೋಂಕಿತರು ಅನ್ಯ ಕಾರಣದಿಂದ ಮೃತಪಟ್ಟಿದ್ದಾರೆ. 539 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

ಇದನ್ನೂ ಓದಿ: ತಿರುಪತಿ ತಿರುಮಲ ದೇವಾಲಯದ 15 ಪುರೋಹಿತರಿಗೆ, 91 ಉದ್ಯೋಗಿಗಳಿಗೆ ಕೋವಿಡ್ 19 ದೃಢ

ಬೆಂಗಳೂರು ನಗರ ಜಿಲ್ಲೆಯಲ್ಲಿ 2344 ಪಾಸಿಟಿವ್ ಪ್ರಕರಣ ಸೇರಿದಂತೆ, ದಕ್ಷಿಣ ಕನ್ನಡ – 238, ಧಾರವಾಡ – 176, ವಿಜಯಪುರ 144, ಮೈಸೂರು – 130, ಕಲಬುರಗಿ – 123, ಉಡುಪಿ – 113, ರಾಯಚೂರು – 101 ಜಿಲ್ಲೆಗಳಲ್ಲಿ ಮೂರಂಕಿಯ ಕೋವಿಡ್ 19 ಪ್ರಕರಣಗಳು ದಾಖಲಾಗಿದ್ದರೆ, ಬೆಳಗಾವಿ – 92, ಉತ್ತರ ಕನ್ನಡ – 79, ಚಿಕ್ಕಬಳ್ಳಾಪುರ – 77, ಬೀದರ್ – 53, ಶಿವಮೊಗ್ಗ – 46, ಬಳ್ಳಾರಿ – 44, ಗದಗ – 44, ಕೋಲಾರ – 43, ಬಾಗಲಕೋಟೆ – 34, ಯಾದಗಿರಿ – 34, ಕೊಪ್ಪಳ – 32, ಹಾಸನ – 31, ಬೆಂಗಳೂರು ಗ್ರಾಮಾಂತರ – 31, ಚಿಕ್ಕಮಗಳೂರು – 30, ದಾವಣಗೆರೆ – 25, ಚಿತ್ರದುರ್ಗ – 21, ಹಾವೇರಿ – 18, ಕೊಡಗು – 18, ಚಾಮರಾಜನಗರ – 16, ತುಮಕೂರು – 12, ಮಂಡ್ಯ – 11 ಸೇರಿದಂತೆ ರಾಜ್ಯದ ಒಟ್ಟು 28 ಜಿಲ್ಲೆಗಳಲ್ಲಿ ಇಂದು ಮೂರಂಕಿ ಹಾಗೂ ಎರಡಂಕಿಯ ಕೋವಿಡ್ 19 ಸೋಂಕಿನ ಪ್ರಕರಣಗಳು ವರದಿಯಾಗಿವೆ.

ಇಂದು ರಾಜ್ಯದಲ್ಲಿ ಒಟ್ಟು 23451 ಮಾದರಿಗಳನ್ನು ತಪಾಸಣೆ ನಡೆಸಲಾಗಿದ್ದು ಇವುಗಳಲ್ಲಿ 19347 ವರದಿಗಳು ನೆಗೆಟಿವ್ ಬಂದಿದೆ ಮತ್ತು 4169 ಪ್ರಕರಣಗಳು ಪಾಸಿಟಿವ್ ಆಗಿವೆ. ರಾಜ್ಯದಲ್ಲಿ ಇಲ್ಲಿಯವರೆಗೆ ಒಟ್ಟು 925477 ಮಾದರಿಗಳನ್ನು ಪರೀಕ್ಷೆಗೊಳಪಡಿಸಲಾಗಿದ್ದು ಇವುಗಳಲ್ಲಿ 850593 ಮಾದರಿಗಳ ವರದಿ ನೆಗೆಟಿವ್ ಬಂದಿದೆ ಹಾಗೂ 51422 ವರದಿಗಳು ಪಾಸಿಟಿವ್ ಆಗಿವೆ.

ಇದನ್ನೂ ಓದಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 238 ಪಾಸಿಟಿವ್ ಪ್ರಕರಣ! ಆರು ಮಂದಿ ಸಾವು

ಬೆಂಗಳೂರು ನಗರ ಜಿಲ್ಲೆಯಲ್ಲಿ ಒಟ್ಟು ಕೋವಿಡ್ 19 ಸೋಂಕಿತ ಪ್ರಕರಣಗಳ ಸಂಖ್ಯೆ 25288ಕ್ಕೆ ಏರಿಕೆಯಾಗಿದ್ದು, 5952 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ ಹಾಗೂ ಸಕ್ರಿಯ ಪ್ರಕರಣಗಳ ಸಂಖ್ಯೆ 18828ಕ್ಕೆ ಏರಿಕೆಯಾಗಿದೆ. ಇಲ್ಲಿ ಕೋವಿಡ್ ಸಂಬಂಧಿತ 507 ಸಾವು ಸಂಭವಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಾಸಿಟಿವ್ ಪ್ರಕರಣಗಳ ಸಂಖ್ಯೆ 2758ಕ್ಕೆ ಏರಿಕೆಯಾಗಿದ್ದು ಇವರಲ್ಲಿ 946 ಸೋಂಕಿತರು ಗುಣಮುಖರಾಗಿದ್ದಾರೆ. 1758 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ ಹಾಗೂ ಇಲ್ಲಿ ಕೋವಿಡ್ ಸಂಬಂಧಿತ 52 ಸಾವು ಸಂಭವಿಸಿದೆ.

ಕಲಬುರಗಿಯಲ್ಲಿ ಒಟ್ಟು 2503 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ 1525 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. 940 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ ಹಾಗೂ ಇಲ್ಲಿ 38 ಜನರು ಈ ಸೋಂಕಿಗೆ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ರ‍್ಯಾಂಡಮ್ ಟೆಸ್ಟ್: ಪಡುಬಿದ್ರಿ ಹೋಟೆಲ್ ಮತ್ತು ವ್ಯವಹಾರ ಮಳಿಗೆ ಸಿಬ್ಬಂದಿಗೆ ಸೋಂಕು ದೃಢ

ಉಡುಪಿ ಜಿಲ್ಲೆಯಲ್ಲಿ 1900 ಕೋವಿಡ್ 19 ಸೋಂಕಿನ ಪ್ರಕರಣಗಳು ದಾಖಲಾಗಿದ್ದು 1451 ಜನರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ ಹಾಗೂ ಜಿಲ್ಲೆಯಲ್ಲಿ 446 ಸಕ್ರಿಯ ಪ್ರಕರಣಗಳಿವೆ.

ಬಳ್ಳಾರಿ ಜಿಲ್ಲೆಯಲ್ಲಿ ಒಟ್ಟು 2067 ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು 1147 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 569 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 51 ಸಾವು ಸಂಭವಿಸಿದೆ.

ಯಾದಗಿರಿ ಜಿಲ್ಲೆಯಲ್ಲಿ 1535 ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು 1083 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 451 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 1 ಸಾವು ಸಂಭವಿಸಿದೆ.

ಬೀದರ್ ಜಿಲ್ಲೆಯಲ್ಲಿ 1191 ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು 670 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 466 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 53 ಸಾವು ಸಂಭವಿಸಿದೆ.

ಧಾರವಾಡ ಜಿಲ್ಲೆಯಲ್ಲಿ 1574 ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು 524 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 1006 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 44 ಸಾವು ಸಂಭವಿಸಿದೆ.

ಮೈಸೂರು ಜಿಲ್ಲೆಯಲ್ಲಿ 1320 ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು 531 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 739 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 50 ಸಾವು ಸಂಭವಿಸಿದೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.