ಕೋವಿಡ್ ಕಳವಳ-ಆಗಸ್ಟ್ 31: 6495 ಹೊಸ ಪ್ರಕರಣ ; 7238 ಡಿಸ್ಚಾರ್ಜ್ ; 113 ಸಾವು

Team Udayavani, Aug 31, 2020, 8:56 PM IST

ಕೋವಿಡ್ ಕಳವಳ-ಆಗಸ್ಟ್ 31: 6495 ಹೊಸ ಪ್ರಕರಣ ; 7238 ಡಿಸ್ಚಾರ್ಜ್ ; 113 ಸಾವು

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೆಂಗಳೂರು: ರವಿವಾರ ಸಾಯಂಕಾಲದಿಂದ ಸೋಮವಾರ ಸಾಯಂಕಾಲದವರೆಗಿನ ಕೋವಿಡ್ 19 ಸೋಂಕು ಪ್ರಕರಣಗಳ ವರದಿಯ ಪ್ರಕಾರ, ಈ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 6495 ಕೋವಿಡ್ 19 ಸೋಂಕು ಪ್ರಕರಣಗಳು ವರದಿಯಾಗಿವೆ.

ಈ ನಿರ್ಧಿಷ್ಟ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 7238 ಸೋಂಕಿತರು ಗುಣಮುಖರಾಗಿದ್ದಾರೆ. ಮತ್ತು ಈ ಅವಧಿಯಲ್ಲಿ 113 ಸೋಂಕಿತರು ಮೃತಪಟ್ಟಿದ್ದಾರೆ.

ಇದೀಗ ರಾಜ್ಯದಲ್ಲಿ ಒಟ್ಟು ಕೋವಿಡ್ 19 ಸೋಂಕಿತರ ಸಂಖ್ಯೆ ಮೂರುವರೆ ಲಕ್ಷದ ಸಮೀಪದಲ್ಲಿದೆ. ನಮ್ಮಲ್ಲಿ ಸದ್ಯಕ್ಕೆ ಒಟ್ಟು 3,42,423 ಸೋಂಕು ಪ್ರಕರಣಗಳು ದಾಖಲಾಗಿವೆ. ಈ ನಡುವೆ ಸೋಂಕಿತರ ಚೇತರಿಕೆ ಸಂಖ್ಯೆಯೂ 2.5ಲಕ್ಷದ ಸನಿಹಕ್ಕೆ ತಲುಪಿರುವುದು ಆಶಾದಾಯಕ ವಿಷಯವಾಗಿದೆ. ರಾಜ್ಯದಲ್ಲಿ ಇದೀಗ ಒಟ್ಟು 2,49,467 ಕೋವಿಡ್ ಸೊಂಕಿತರು ಚೇತರಿಸಿಕೊಂಡಿದ್ದಾರೆ ಮತ್ತು ಒಟ್ಟು 87,235 ಸಕ್ರಿಯ ಸೋಂಕು ಪ್ರಕರಣಗಳಿವೆ.

ಹಾಗೂ ರಾಜ್ಯದಲ್ಲಿ ಕೋವಿಡ್ 19 ಸೊಂಕು ಸಂಬಂಧಿ ಒಟ್ಟು 5702 ಸಾವಿನ ಪ್ರಕರಣಗಳು ದಾಖಲಾಗಿವೆ ಹಾಗೂ 19 ಜನ ಕೋವಿಡ್ 19 ಸೋಂಕಿತರು ಅನ್ಯ ಕಾರಣದಿಂದ ಮೃತಪಟ್ಟಿದ್ದಾರೆ. 747 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

ಈ ಅವಧಿಯಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ 1862 ಕೋವಿಡ್ 19 ಸೊಂಕು ಪ್ರಕರಣಗಳು ವರದಿಯಾಗುವ ಮೂಲಕ ಸೋಂಕು ಪ್ರಕರಣಗಳಲ್ಲಿ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ.

ಇನ್ನುಳಿದಂತೆ, ಮೈಸೂರು (405), ಬಳ್ಳಾರಿ (365), ದಾವಣಗೆರೆ (257), ಹಾಸನ (217), ಶಿವಮೊಗ್ಗ (168), ಬೆಳಗಾವಿ (154), ದಕ್ಷಿಣ ಕನ್ನಡ (270), ರಾಯಚೂರು (140), ಧಾರವಾಡ (279), ಕಲಬುರಗಿ (161), ಚಿಕ್ಕಮಗಳೂರು (100), ಉಡುಪಿ (83), ಮಂಡ್ಯ (159), ಚಿತ್ರದುರ್ಗ (286), ಉತ್ತರ ಕನ್ನಡ (86), ಕೊಪ್ಪಳ (200), ತುಮಕೂರು (316), ವಿಜಯಪುರ (84), ಬಾಗಲಕೋಟೆ (172), ಹಾವೇರಿ (63), ಗದಗ (178), ಚಿಕ್ಕಬಳ್ಳಾಪುರ (68), ಕೋಲಾರ (60), ರಾಮನಗರ (69), ಯಾದಗಿರಿ (122), ಬೀದರ್ (30), ಚಾಮರಾಜನಗರ (51), ಕೊಡಗು (17) ಮತ್ತು ಬೆಂಗಳೂರು ಗ್ರಾಮಾಂತರ (73) ಸೇರಿದಂತೆ ರಾಜ್ಯದ ಒಟ್ಟು 30 ಜಿಲ್ಲೆಗಳಲ್ಲಿ ಇಂದು ಮೂರಂಕಿ ಹಾಗೂ ಎರಡಂಕಿಯ ಕೋವಿಡ್ 19 ಸೋಂಕಿನ ಪ್ರಕರಣಗಳು ವರದಿಯಾಗಿವೆ.

ಇಂದು ರಾಜ್ಯದಲ್ಲಿ ಒಟ್ಟು 13,056 Rapid ಆ್ಯಂಟಿಜೆನ್ ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದೆ ಹಾಗೂ RT PCR ಮತ್ತು ಇನ್ನಿತರೇ ವಿಧಾನಗಳ ಮೂಲಕ 30,076 ಸೋಂಕು ಪತ್ತೆ ಪರೀಕ್ಷೆಗಳನ್ನು ಈ ಅವಧಿಯಲ್ಲಿ ನಡೆಸಲಾಗಿದೆ. ಈ ಮೂಲಕ ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ ಒಟ್ಟು 43,132 ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದೆ.

ರಾಜ್ಯದಲ್ಲಿ ಇದುವರೆಗೆ ಒಟ್ಟು 8,40,955 Rapid ಆ್ಯಂಟಿಜೆನ್ ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದೆ. ಇದನ್ನು ಹೊರತಾಗಿಸಿ ರಾಜ್ಯಾದ್ಯಂತ 20,54,852 ಜನರಿಗೆ RT PCR ಮತ್ತು ಇನ್ನಿತರೇ ವಿಧಾನಗಳ ಮೂಲಕ ಕೋವಿಡ್ 19 ಸೋಂಕು ಪತ್ತೆ ಪರೀಕ್ಷೆಯನ್ನು ನಡೆಸಲಾಗಿದೆ. ಮತ್ತು ಈ ಎಲ್ಲಾ ವಿಧಾನಗಳ ಮೂಲಕ ರಾಜ್ಯದಲ್ಲಿ ಇಂದಿನವರೆಗೆ ಒಟ್ಟು 28,95,807 ಜನರಿಗೆ ಕೋವಿಡ್ 19 ಸೋಂಕು ಪತ್ತೆ ಪರೀಕ್ಷೆಯನ್ನು ನಡೆಸಲಾಗಿದೆ.

ಟಾಪ್ ನ್ಯೂಸ್

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.