ಕೋವಿಡ್ ಕಳವಳ- ಸೆ.02: 9860 ಹೊಸ ಪ್ರಕರಣ ; 6287 ಡಿಸ್ಚಾರ್ಜ್ ; 113 ಸಾವು


Team Udayavani, Sep 2, 2020, 7:37 PM IST

ಕೋವಿಡ್ ಕಳವಳ- ಸೆ.02: 9860 ಹೊಸ ಪ್ರಕರಣ ; 6287 ಡಿಸ್ಚಾರ್ಜ್ ; 113 ಸಾವು

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೆಂಗಳೂರು: ಮಂಗಳವಾರ ಸಾಯಂಕಾಲದಿಂದ ಬುಧವಾರ ಸಾಯಂಕಾಲದವರೆಗಿನ ಕೋವಿಡ್ 19 ಸೋಂಕು ಪ್ರಕರಣಗಳ ವರದಿಯ ಪ್ರಕಾರ, ಈ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 9860 ಕೋವಿಡ್ 19 ಸೋಂಕು ಪ್ರಕರಣಗಳು ವರದಿಯಾಗಿವೆ.

ಈ ನಿರ್ಧಿಷ್ಟ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 6287 ಸೋಂಕಿತರು ಗುಣಮುಖರಾಗಿದ್ದಾರೆ. ಮತ್ತು ಈ ಅವಧಿಯಲ್ಲಿ 113 ಸೋಂಕಿತರು ಮೃತಪಟ್ಟಿದ್ದಾರೆ.

ಇದೀಗ ರಾಜ್ಯದಲ್ಲಿ ಒಟ್ಟು ಕೋವಿಡ್ 19 ಸೋಂಕಿತರ ಸಂಖ್ಯೆ ಮೂರು ಲಕ್ಷದ ಅರವತ್ತು ಸಾವಿರಕ್ಕೇರಿದೆ. ನಮ್ಮಲ್ಲಿ ಸದ್ಯಕ್ಕೆ ಒಟ್ಟು 3,61,341 ಸೋಂಕು ಪ್ರಕರಣಗಳು ದಾಖಲಾಗಿವೆ. ಈ ನಡುವೆ ಸೋಂಕಿತರ ಚೇತರಿಕೆ ಸಂಖ್ಯೆಯೂ 2.5 ಲಕ್ಷದ ಗಡಿಯನ್ನು ದಾಟಿರುವುದು ಆಶಾದಾಯಕ ವಿಷಯವಾಗಿದೆ. ರಾಜ್ಯದಲ್ಲಿ ಇದೀಗ ಒಟ್ಟು 2,60,913 ಕೋವಿಡ್ ಸೊಂಕಿತರು ಚೇತರಿಸಿಕೊಂಡಿದ್ದಾರೆ ಮತ್ತು ಸಕ್ರಿಯ ಪ್ರಕರಣಗಳ ಸಂಖ್ಯೆ ಒಂದು ಲಕ್ಷಕ್ಕೇರುವ ಸಾಧ್ಯತೆಗಳು ಕಳವಳ ಮೂಡಿಸಿವೆ. ನಮ್ಮಲ್ಲಿ ಇದೀಗ ಒಟ್ಟು 94,459 ಸಕ್ರಿಯ ಸೋಂಕು ಪ್ರಕರಣಗಳಿವೆ.

ಹಾಗೂ ರಾಜ್ಯದಲ್ಲಿ ಕೋವಿಡ್ 19 ಸೊಂಕು ಸಂಬಂಧಿ ಒಟ್ಟು 5950 ಸಾವಿನ ಪ್ರಕರಣಗಳು ದಾಖಲಾಗಿವೆ ಹಾಗೂ 19 ಜನ ಕೋವಿಡ್ 19 ಸೋಂಕಿತರು ಅನ್ಯ ಕಾರಣದಿಂದ ಮೃತಪಟ್ಟಿದ್ದಾರೆ. 751 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

ಈ ಅವಧಿಯಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ 3420 ಕೋವಿಡ್ 19 ಸೊಂಕು ಪ್ರಕರಣಗಳು ವರದಿಯಾಗುವ ಮೂಲಕ ಸೋಂಕು ಪ್ರಕರಣಗಳಲ್ಲಿ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ.

ಇನ್ನುಳಿದಂತೆ, ಮೈಸೂರು (667), ಬಳ್ಳಾರಿ (433), ದಾವಣಗೆರೆ (321), ಹಾಸನ (290), ಶಿವಮೊಗ್ಗ (342), ಬೆಳಗಾವಿ (470), ದಕ್ಷಿಣ ಕನ್ನಡ (414), ರಾಯಚೂರು (232), ಧಾರವಾಡ (327), ಕಲಬುರಗಿ (194), ಚಿಕ್ಕಮಗಳೂರು (117), ಉಡುಪಿ (169), ಮಂಡ್ಯ (245), ಚಿತ್ರದುರ್ಗ (174), ಉತ್ತರ ಕನ್ನಡ (126), ಕೊಪ್ಪಳ (282), ತುಮಕೂರು (357), ವಿಜಯಪುರ (122), ಬಾಗಲಕೋಟೆ (166), ಹಾವೇರಿ (149), ಗದಗ (195), ಬೆಂಗಳೂರು ಗ್ರಾಮಾಂತರ (146), ಚಿಕ್ಕಬಳ್ಳಾಪುರ (100), ಕೋಲಾರ (83), ರಾಮನಗರ (59), ಯಾದಗಿರಿ (106), ಬೀದರ್ (62), ಚಾಮರಾಜನಗರ (67) ಮತ್ತು ಕೊಡಗು (25) ಸೇರಿದಂತೆ ರಾಜ್ಯದ ಒಟ್ಟು 30 ಜಿಲ್ಲೆಗಳಲ್ಲಿ ಇಂದು ಮೂರಂಕಿ ಹಾಗೂ ಎರಡಂಕಿಯ ಕೋವಿಡ್ 19 ಸೋಂಕಿನ ಪ್ರಕರಣಗಳು ವರದಿಯಾಗಿವೆ.

ಇಂದು ರಾಜ್ಯದಲ್ಲಿ ಒಟ್ಟು 38,735 Rapid ಆ್ಯಂಟಿಜೆನ್ ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದೆ ಹಾಗೂ RT PCR ಮತ್ತು ಇನ್ನಿತರೇ ವಿಧಾನಗಳ ಮೂಲಕ 34,582 ಸೋಂಕು ಪತ್ತೆ ಪರೀಕ್ಷೆಗಳನ್ನು ಈ ಅವಧಿಯಲ್ಲಿ ನಡೆಸಲಾಗಿದೆ. ಈ ಮೂಲಕ ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ ಒಟ್ಟು 73,317 ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದೆ.

ರಾಜ್ಯದಲ್ಲಿ ಇದುವರೆಗೆ ಒಟ್ಟು 9,31,677 Rapid ಆ್ಯಂಟಿಜೆನ್ ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದೆ. ಇದನ್ನು ಹೊರತಾಗಿಸಿ ರಾಜ್ಯಾದ್ಯಂತ 21,21,117 ಜನರಿಗೆ RT PCR ಮತ್ತು ಇನ್ನಿತರೇ ವಿಧಾನಗಳ ಮೂಲಕ ಕೋವಿಡ್ 19 ಸೋಂಕು ಪತ್ತೆ ಪರೀಕ್ಷೆಯನ್ನು ನಡೆಸಲಾಗಿದೆ. ಮತ್ತು ಈ ಎಲ್ಲಾ ವಿಧಾನಗಳ ಮೂಲಕ ರಾಜ್ಯದಲ್ಲಿ ಇಂದಿನವರೆಗೆ ಒಟ್ಟು 30,52,794 ಜನರಿಗೆ ಕೋವಿಡ್ 19 ಸೋಂಕು ಪತ್ತೆ ಪರೀಕ್ಷೆಯನ್ನು ನಡೆಸಲಾಗಿದೆ.

ಟಾಪ್ ನ್ಯೂಸ್

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.