ಲಾಕ್ ಡೌನ್ ತೆರವು ಬೆನ್ನಲ್ಲೇ ಪ್ರವಾಸಿ ತಾಣಕ್ಕೆ ಮುಗಿಬಿದ್ದ ಚೀನೀಯರು!


Team Udayavani, Apr 8, 2020, 8:52 PM IST

ಲಾಕ್ ಡೌನ್ ತೆರವು ಬೆನ್ನಲ್ಲೇ ಪ್ರವಾಸಿ ತಾಣಕ್ಕೆ ಮುಗಿಬಿದ್ದ ಚೀನೀಯರು!

ದಕ್ಷಿಣ ಚೀನದ ಪ್ರಸಿದ್ಧ ಪ್ರವಾಸಿ ತಾಣವಾಗಿರುವ ಹುವಾಂಗ್‌ಶಾನ್‌ ಪರ್ವತ ಶ್ರೇಣಿ.

ಬೀಜಿಂಗ್‌: 2 ತಿಂಗಳುಗಳ ಬಳಿಕ ಲಾಕ್‌ಡೌನ್‌ ಸಡಿಲಿಸಿದ ಬೆನ್ನಲ್ಲೇ, ಸೋಂಕು ಹರಡುವ ಭಯವನ್ನೂ ಮರೆತ ಚೀನದ ಸಾವಿರಾರು ಪ್ರಜೆಗಳು ಪ್ರವಾಸಿ ತಾಣಗಳಿಗೆ ಹುಚ್ಚರಂತೆ ಮುಗಿಬಿದ್ದಿದ್ದಾರೆ. ಲಾಕ್‌ ಡೌನ್‌ ಸಡಿಲಿಸಿದ್ದರೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕೆಂಬ ನಿಯಮವನ್ನು ಗಾಳಿಗೆ ತೂರಿ ಸಾವಿರಾರು ಮಂದಿ ಒಂದೇ ಕಡೆ ಸೇರಿರುವುದು ಸೋಂಕು ಮತ್ತೆ ವ್ಯಾಪಕವಾಗುವ ಆತಂಕ ಸೃಷ್ಟಿಸಿದೆ.

ಜತೆಗೆ, ಸೋಂಕಿನ ಜನರನ್ನು ನಿಯಂತ್ರಿಸುವುದು  ಸರಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಕೋವಿಡ್ ಸೋಂಕು ಹರಡುವಿಕೆ ಪ್ರಮಾಣ ತಗ್ಗಿದ ಹಿನ್ನೆಲೆಯಲ್ಲಿ ಸೋಂಕಿನ ಉಗಮ ಸ್ಥಾನವಾಗಿರುವ ವುಹಾನ್‌ ನಗರದಲ್ಲಿನ ಎಲ್ಲ ತಾತ್ಕಾಲಿಕ ಆಸ್ಪತ್ರೆಗಳನ್ನು ಮುಚ್ಚಿದ ಚೀನ ಸರಕಾರ, ಲಾಕ್‌ ಡೌನ್‌ ಅನ್ನು ತಕ್ಕ ಮಟ್ಟಿಗೆ ಸಡಿಲಿಸಿತ್ತು. ಇದೇ ಅವಕಾಶಕ್ಕಾಗಿ ಕಾಯುತ್ತಿದ್ದ ನಾಗರಿಕರು, ದಕ್ಷಿಣ ಚೀನದ ಪ್ರಸಿದ್ಧ ಪ್ರವಾಸಿ ತಾಣವಾಗಿರುವ ಹುವಾಂಗ್‌ಶಾನ್‌ ಪರ್ವತ ಶ್ರೇಣಿ ನೋಡಲು ಮುಗಿಬಿದ್ದಿದ್ದಾರೆ.

ಚೀನದಲ್ಲಿ ಹೊಸ ಸಾವು ಸಂಭವಿಸಿಲ್ಲ
ಕೋವಿಡ್ 19 ವೈರಸ್ ನ ತವರೂರಾಗಿರುವ ಚೀನದಲ್ಲಿ ಮಂಗಳವಾರಕ್ಕೆ ಸಂಬಂಧಿಸಿದಂತೆ ಹೊಸತಾಗಿ ಸಾವಿನ ಪ್ರಕರಣಗಳು ವರದಿಯಾಗಿಲ್ಲ. ಜನವರಿಂದ ಈಚೆಗೆ ಸೋಂಕಿನ ಪರಿಣಾಮವಾಗಿ ಸಾವಿನ ಸಂಖ್ಯೆ ಮಾಹಿತಿ ನೀಡುತ್ತಿದ್ದ ರಾಷ್ಟ್ರದಿಂದ ಇದೇ ಮೊದಲ ಬಾರಿಗೆ ಹೊಸ ಸಾವಿನ ಮಾಹಿತಿ ಪ್ರಕಟಗೊಂಡಿಲ್ಲ.

ಆದರೆ ವಿದೇಶಗಳಿಂದ ಬಂದ ಸೋಂಕಿನ ಪ್ರಕರಣಗಳ ಒಟ್ಟು ಸಂಖ್ಯೆ 983ಕ್ಕೆ ಏರಿಕೆಯಾಗಿದೆ. ಈ ಅಂಶವನ್ನು ಚೀನದ ರಾಷ್ಟ್ರೀಯ ಆರೋಗ್ಯ ಆಯೋಗ ನೀಡಿದೆ. ಅಲ್ಲಿ ಒಟ್ಟು 3, 331 ಸಾವು ಸಂಭವಿಸಿದೆ. ಚೀನದಲ್ಲಿ ಸೋಮವಾರದವರೆಗೆ 81,740 ಪ್ರಕರಣಗಳು ಖಚಿತಪಟ್ಟಿವೆ. ಈ ಪೈಕಿ 1, 242 ಮಂದಿ ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. 77,167 ಮಂದಿ ಡಿಸ್ಚಾರ್ಜ್‌ ಆಗಿದ್ದಾರೆಂದು ಆಯೋಗ ತಿಳಿಸಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.