ಕೋವಿಡ್ ಸೋಂಕಿತ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಆರೋಗ್ಯ ಸ್ಥಿರ
Team Udayavani, Apr 9, 2020, 2:40 AM IST
ಕೋವಿಡ್ ಸೋಂಕು ಕಾಣಿಸಿಕೊಂಡಿರುವ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿರವಾಗಿದೆ. ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಡೌನಿಂಗ್ ಸ್ಟ್ರೀಟ್ ತಿಳಿಸಿದೆ.
ಸೋಂಕು ತಗುಲಿದ ಬಳಿಕ ಸೆಲ್ಫ್ ಕ್ವಾರಂಟೈನ್ನಲ್ಲಿದ್ದ ಅವರು ಜ್ವರ ಹೆಚ್ಚಾದ ಕಾರಣ ಸೋಮವಾರ ರಾತ್ರಿ ಲಂಡನ್ನ ಸೆಂಟ್ ಥಾಮಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. 2ನೇ ದಿನವೂ ಐಸಿಯುನಲ್ಲಿದ್ದು, ಅವರು ಉಲ್ಲಾಸವಾಗಿದ್ದಾರೆ ಆದರೆ ಸಕ್ರಿಯವಾಗಿ ಕಾರ್ಯನಿರ್ವಹಿಸಲಾಗುತ್ತಿಲ್ಲ. ಅಧಿಕಾರಿಗಳು ಹಾಗೂ ಸಚಿವರ ಸಂಪರ್ಕದಲ್ಲಿದ್ದಾರೆ ಎಂದು ಪ್ರಧಾನಿ ಕಛೇರಿಯ ವಕ್ತಾರರು ತಿಳಿಸಿದ್ದಾರೆ.
ಒಂದೇ ದಿನ 786 ಸಾವು: ಬ್ರಿಟನ್ನಲ್ಲಿ ಮಂಗಳವಾರ ಒಂದೇ ದಿನ 786 ಮಂದಿ ಮೃತ ಪಟ್ಟಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 6,115ಕ್ಕೆ ಏರಿಕೆಯಾಗಿದೆ. ಸೋಂಕಿನ ಪ್ರಮಾಣ ಏರಿಕೆಯಾಗುತ್ತಿದ್ದು, ಪ್ರತಿಯೊಬ್ಬರೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಸರಕಾರ ಆಗ್ರಹಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ