ಆತಂಕ; ಮುಂಬೈನಲ್ಲೇ 4000 Covid-19 ಪ್ರಕರಣ ಪತ್ತೆ, ಮಹಾರಾಷ್ಟ್ರದಲ್ಲಿ 6000ಕ್ಕೆ ಏರಿಕೆ
ರಾಜ್ಯದಲ್ಲಿ ಕೋವಿಡ್ 19 ಮಹಾಮಾರಿಯನ್ನು ತಡೆಯಲು ಹಲವಾರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದೆ.
Team Udayavani, Apr 24, 2020, 10:03 AM IST
Representative Image
ಮುಂಬೈ: ಮಹಾರಾಷ್ಟ್ರದಲ್ಲಿ ಕೋವಿಡ್ 19 ವೈರಸ್ ಕ್ಷಿಪ್ರವಾಗಿ ಹರಡುತ್ತಿದ್ದು, ಸೋಂಕು ತಡೆಗಟ್ಟಲು ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿದ್ದು, ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 6,427ಕ್ಕೆ ಏರಿದೆ. ಸಾವಿನ ಸಂಖ್ಯೆ 283ಕ್ಕೆ ತಲುಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
522ಕ್ಕೂ ಹೆಚ್ಚು ಮಂದಿಗೆ ಕೋವಿಡ್ 19 ವೈರಸ್ ಪಾಸಿಟಿವ್ ವರದಿ ಬಂದಿದೆ. ಇದರಿಂದ ಮುಂಬೈಯಲ್ಲಿಯೇ ಬರೋಬ್ಬರಿ 4.025 ಜನರಿಗೆ ಕೋವಿಡ್ 19 ವೈರಸ್ ಪ್ರಕರಣಗಳು ಪತ್ತೆಯಾಗಿದೆ. ಸೋಂಕು ಹರಡಲು ಆರಂಭವಾದ ದಿನದಿಂದ ಈವರೆಗಿನ ಅಂಕಿಅಂಶದ ಪ್ರಕಾರ ರಾಜ್ಯದಲ್ಲಿ ಒಂದೇ ದಿನ ಭಾರೀ ಪ್ರಮಾಣದ ಸೋಂಕು ಪತ್ತೆಯಾಗಿದೆ ಎಂದು ವರದಿ ತಿಳಿಸಿದೆ.
ಏಷ್ಯಾದ ಅತೀ ದೊಡ್ಡ ಕೊಳಗೇರಿ ಪ್ರದೇಶವಾದ ಧಾರಾವಿಯಲ್ಲಿ ಎಂಟು ಲಕ್ಷ ಮಂದಿ ವಾಸವಾಗಿದ್ದು, ಈ ಪ್ರದೇಶದಲ್ಲಿ ಸುಮಾರು 214 ಪ್ರಕರಣಗಳು ವರದಿಯಾಗಿದ್ದು, ಈವರೆಗೆ ಸಾವನ್ನಪ್ಪಿದವರ ಸಂಖ್ಯೆ 13ಕ್ಕೆ ಏರಿದೆ. ದೇಶದಲ್ಲಿಯೇ ಮುಂಬೈ ಕೋವಿಡ್ 19 ವೈರಸ್ ನ ಹಾಟ್ ಸ್ಪಾಟ್ ಆಗಿದೆ ಎಂದು ಕೇಂದ್ರ ಸರ್ಕಾರ ಘೋಷಿಸಿದೆ.
ಅತೀ ಹೆಚ್ಚು ಜನಸಂಖ್ಯೆ ಹೊಂದಿರುವ ಕೊಳಗೇರಿ ಸೇರಿದಂತೆ ರಾಜ್ಯದಲ್ಲಿ ಕೋವಿಡ್ 19 ಮಹಾಮಾರಿಯನ್ನು ತಡೆಯಲು ಹಲವಾರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಆದರೆ ವೈರಸ್ ಕ್ಷಿಪ್ರವಾಗಿ ಹರಡುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.