ಆಂಧ್ರದಲ್ಲಿ ಸೋಂಕು ಶೇ.865ರಷ್ಟು ಹೆಚ್ಚಳ; ಜುಲೈ ತಿಂಗಳಲ್ಲಿ ರಾಜ್ಯದೆಲ್ಲೆಡೆ ವ್ಯಾಪಕ ಪ್ರಕರಣ

Team Udayavani, Aug 2, 2020, 6:21 AM IST

ಆಂಧ್ರದಲ್ಲಿ ಸೋಂಕು ಶೇ. 865ರಷ್ಟು ಹೆಚ್ಚಳ ; ಜುಲೈ ತಿಂಗಳಲ್ಲಿ ರಾಜ್ಯದೆಲ್ಲೆಡೆ ವ್ಯಾಪಕ ಪ್ರಕರಣ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ/ಹೈದರಾಬಾದ್‌: ಕೋವಿಡ್ 19 ಘಾತಕ್ಕೆ ಸಿಲುಕಿರುವ ಆಂಧ್ರಪ್ರದೇಶದಲ್ಲಿ ಸೋಂಕು ಕಾಡ್ಗಿಚ್ಚಿನಂತೆ ವ್ಯಾಪಿಸುತ್ತಿದ್ದು, ದೇಶದ ಕೋವಿಡ್ 19 ಹಾಟ್‌ಸ್ಪಾಟ್‌ ರಾಜ್ಯಗಳ ಪೈಕಿ ಈಗ ಆಂಧ್ರ ಮೂರನೇ ಸ್ಥಾನಕ್ಕೇರಿದೆ.

ಕಳೆದ 3 ದಿನಗಳಲ್ಲಿ ಇಲ್ಲಿ 30 ಸಾವಿರಕ್ಕೂ ಅಧಿಕ ಮಂದಿಗೆ ಸೋಂಕು ದೃಢಪಟ್ಟಿದೆ. ಜುಲೈ ತಿಂಗಳೊಂದರಲ್ಲೇ ಇಲ್ಲಿನ ಸೋಂಕಿತರ ಸಂಖ್ಯೆಯಲ್ಲಿ ಶೇ.865ರಷ್ಟು ಏರಿಕೆ ಕಂಡುಬಂದಿದೆ ಎಂದು ಅಂಕಿ ಅಂಶಗಳು ತಿಳಿಸಿವೆ. ಯಾವುದೇ ರಾಜ್ಯದಲ್ಲೂ ಒಂದೇ ತಿಂಗಳಲ್ಲಿ ಸೋಂಕು ಪ್ರಕರಣಗಳು ಇಷ್ಟೊಂದು ಏರಿಕೆಯಾಗಿರಲಿಲ್ಲ.

3ನೇ ಸ್ಥಾನ: ಜೂನ್‌ 30ರಂದು ಆಂಧ್ರದಲ್ಲಿ 14,596 ಪ್ರಕರಣಗಳು ಪತ್ತೆಯಾಗಿದ್ದವು. ಜುಲೈ ಅಂತ್ಯದ ವೇಳೆಗೆ ಈ ಸಂಖ್ಯೆ 1.26 ಲಕ್ಷಕ್ಕೇರಿದೆ. ರಾಜ್ಯದ ಅತಿ ಹೆಚ್ಚು ಜನಬಾಹುಳ್ಯವುಳ್ಳ ಪೂರ್ವ ಗೋದಾವರಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆಯಲ್ಲಿ ದಾಖಲೆಯ ಶೇ.1,800ರಷ್ಟು ಏರಿಕೆ ಕಂಡುಬಂದಿದೆ.

ಶುಕ್ರವಾರದಿಂದ ಶನಿವಾರದವರೆಗಿನ 24 ಗಂಟೆಗಳಲ್ಲಿ 10,376 ಮಂದಿಗೆ ಸೋಂಕು ದೃಢಪಟ್ಟಿದೆ. ಹೀಗಾಗಿ, ದೇಶದ ಹಾಟ್‌ಸ್ಪಾಟ್‌ ರಾಜ್ಯಗಳ ಪೈಕಿ ಆಂಧ್ರವು 3ನೇ ಸ್ಥಾನವನ್ನು ಆಕ್ರಮಿಸಿಕೊಳ್ಳುವಂತಾಗಿದೆ. ಮಹಾರಾಷ್ಟ್ರ ಹಾಗೂ ತಮಿಳುನಾಡು ಕ್ರಮವಾಗಿ ಮೊದಲೆರಡು ಸ್ಥಾನದಲ್ಲಿದ್ದರೆ, ಈವರೆಗೆ ಮೂರನೇ ಸ್ಥಾನದಲ್ಲಿದ್ದ ದಿಲ್ಲಿ ಈಗ 4ನೇ ಸ್ಥಾನಕ್ಕಿಳಿದಿದೆ.

ದಿಲ್ಲಿಯ ಪರಿಸ್ಥಿತಿ ಸುಧಾರಣೆ: ಹಲವು ವಾರಗಳಿಂದಲೂ 3ನೇ ಸ್ಥಾನದಲ್ಲಿದ್ದ ದಿಲ್ಲಿಯಲ್ಲಿ ಈಗ ಪರಿಸ್ಥಿತಿ ಸುಧಾರಿಸಿದೆ. ಜೂನ್‌ ತಿಂಗಳಲ್ಲಿ ಪ್ರತಿ ದಿನ 4 ಸಾವಿರದಷ್ಟು ಪ್ರಕರಣ ಗಳಿಗೆ ಸಾಕ್ಷಿಯಾಗಿದ್ದ ದಿಲ್ಲಿಯಲ್ಲಿ ಈಗ ಸೋಂಕಿತರ ಸಂಖ್ಯೆ ದಿನಕ್ಕೆ 600ರ ಆಸುಪಾಸಿನಲ್ಲಿದೆ. ಕೋವಿಡ್ 19 ಸೋಂಕನ್ನು ನಿಯಂತ್ರಿಸಬೇಕೆಂದರೆ ಎಲ್ಲ ರಾಜ್ಯಗಳೂ ದಿಲ್ಲಿ ಮಾದರಿಯನ್ನು ಅನು ಸರಿಸಬೇಕು. ಹೆಚ್ಚು ಹೆಚ್ಚು ಮಂದಿಯನ್ನು ಪರೀಕ್ಷೆಗೆ ಒಳಪಡಿಸಿದರೆ, ಸೋಂಕನ್ನು ಬೇಗ ನಿಯಂತ್ರಿಸಬಹುದು ಎಂದು  ಕೇಂದ್ರ ಗೃಹ ಖಾತೆ ಸಹಾಯಕ ಸಚಿವ ಜಿ. ಕಿಶನ್‌ ರೆಡ್ಡಿ ಶನಿವಾರ ತಿಳಿಸಿದ್ದಾರೆ.

24 ಗಂಟೆ; ದಾಖಲೆಯ 57,117 ಪ್ರಕರಣ
ದೇಶದಲ್ಲಿ ಇದೇ ಮೊದಲ ಬಾರಿಗೆ ದಾಖಲೆಯ ಪ್ರಕರಣಗಳು ಪತ್ತೆಯಾಗಿದ್ದು, 24 ಗಂಟೆಗಳಲ್ಲಿ 57,117 ಮಂದಿಗೆ ಸೋಂಕು ದೃಢಪಟ್ಟಿದೆ. 764 ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಸೋಂಕಿತರ ಸಂಖ್ಯೆ 17 ಲಕ್ಷ ದಾಟಿದ್ದರೆ, ಗುಣಮುಖ ಪ್ರಮಾಣ 11 ಲಕ್ಷಕ್ಕೇರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಟಾಪ್ ನ್ಯೂಸ್

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.