ಮೃತ ವೃದ್ಧನ ಪತ್ನಿ, ಸಹೋದರನಿಗೂ  ಸೋಂಕು ; ಬಾಗಲಕೋಟೆಯಲ್ಲಿ ಸೋಂಕಿತ ಸಂಖ್ಯೆ ಮೂರಕ್ಕೆ ಏರಿಕೆ

ಒಟ್ಟು 73 ಜನರ ಮಾದರಿ ಪರೀಕ್ಷೆಗೆ ರವಾನೆ

Team Udayavani, Apr 6, 2020, 10:40 PM IST

ಮೃತ ವೃದ್ಧನ ಪತ್ನಿ, ಸಹೋದರನಿಗೂ  ಸೋಂಕು ; ಬಾಗಲಕೋಟೆಯಲ್ಲಿ ಸೋಂಕಿತ ಸಂಖ್ಯೆ ಮೂರಕ್ಕೆ ಏರಿಕೆ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬಾಗಲಕೋಟೆ : ಮಹಾಮಾರಿ ಕೋವಿಡ್ 19 ವೈರಸ್ ಸೋಂಕಿಗೆ ದಿನಸಿ ಅಂಗಡಿ ಮಾಲಿಕ ವೃದ್ಧ (ರೋಗಿ ಸಂಖ್ಯೆ-125) ಕಳೆದ ಶುಕ್ರವಾರ ಬಲಿಯಾಗಿದ್ದು, ಆತನ ಪತ್ನಿ ಹಾಗೂ ಸಹೋದರನಿಗೂ ಈ ಸೋಂಕು ಇರುವುದು ಸೋಮವಾರ ದೃಢಪಟ್ಟಿದೆ.

ನಗರದ ತರಕಾರಿ ಮಾರುಕಟ್ಟೆಯಲ್ಲಿ ಕಿರಾಣಿ ಅಂಗಡಿ ಹಾಗೂ ಅಡತ ಬಜಾರ್ ಬಳಿಯ ಹಳಪೇಟ ಮಡುವಿನಲ್ಲಿ ಮನೆ ಹೊಂದಿದ್ದ ವೃದ್ಧ, ವಿದೇಶ, ಹೊರ ರಾಜ್ಯ ಅಥವಾ ಹೊರ ಜಿಲ್ಲೆಗೂ ಪ್ರವಾಸ ಮಾಡದಿದ್ದರೂ ಇವರಿಗೆ ಕೋವಿಡ್ 19 ಸೋಂಕು ತಗುಲಿತ್ತು. ವೃದ್ಧನಿಗೆ ಸೋಂಕು ಇರುವುದು ದೃಢಪಟ್ಟ ಬಳಿಕ ಆತನ ಮನೆಯವರನ್ನೂ ತಪಾಸಣೆಗೆ ಒಳಪಡಿಸಲಾಗಿತ್ತು. ಪುತ್ರ, ಪುತ್ರಿ, ತಮ್ಮನ ಪತ್ನಿಗೆ ಕೋವಿಡ್ 19 ವೈರಸ್ ನೆಗೆಟಿವ್ ಬಂದಿತ್ತು.

ಆದರೆ, ವೃದ್ಧ ಮೃತಪಟ್ಟ ಬೆನ್ನೆಲ್ಲೆ ಆತನ ಇಡೀ ಮನೆಯವರು ಹಾಗೂ ಅವರೊಂದಿಗೆ ಸಂಪರ್ಕ ಹೊಂದಿದ್ದ ಒಟ್ಟು 10 ಜನರನ್ನು ಜಿಲ್ಲಾ ಆಸ್ಪತ್ರೆಯಲ್ಲಿ ನಿಗಾದಲ್ಲಿರಿಸಲಾಗಿತ್ತು. ಗುರುವಾರ ವೃದ್ಧನ ಪತ್ನಿ ಮತ್ತು ಸಹೋದರನ ಗಂಟಲು ದ್ರವ ಮತ್ತು ರಕ್ತದ ಮಾದರಿ ಕಳುಹಿಸಲಾಗಿತ್ತು.

ಇವುಗಳ ವರದಿ ಮೂರು ದಿನಗಳಿಂದ ಬಂದಿರಲಿಲ್ಲ. ಸೋಮವಾರ ಮಧ್ಯಾಹ್ನ ಅವರ ವರದಿಯೂ ಬಂದಿದ್ದು, ಈ ವರದಿಯಲ್ಲಿ ಮೂವರಿಗೂ ಸೋಂಕು ಪಾಸಿಟಿವ್ ಆಗಿರುವುದು ದೃಢಪಟ್ಟಿದೆ. ಇದು ರೋಗಿ ಸಂಖ್ಯೆ 125ರ ವೃದ್ಧನೊಂದಿಗೆ ಸಂಪರ್ಕ ಹೊಂದಿದ್ದರಿಂದಲೇ ಬಂದಿದೆ ಎಂದು ರಾಜ್ಯ ಸರ್ಕಾರ ಅಧಿಕೃತವಾಗಿ ಘೋಷಿಸಿದೆ.

12 ಸಾವಿರ ಜನರ ಸಮೀಕ್ಷೆ:
ರೋಗಿ ಸಂಖ್ಯೆ 125ರ ವೃದ್ಧ ಎಲ್ಲಿಯೂ ಪ್ರವಾಸ ಮಾಡದಿದ್ದರೂ ಆತನಿಗೆ ಈ ಕೋವಿಡ್ ಸೋಂಕು ತಗುಲಿರುವುದು ಹೇಗೆ ಎಂಬುದು ಈವರೆಗೆ ಪತ್ತೆಯಾಗಿಲ್ಲ. ಸಧ್ಯ ಆತನ ಪತ್ನಿ, ತಮ್ಮನಿಗೂ ಸೋಂಕು ಬಂದಿದೆ. ಈ ಕುರಿತು ಪತ್ತೆ ಮಾಡಲು ಜಿಲ್ಲಾಡಳಿತ ಹರಸಾಹಸಪಡುತ್ತಿದೆ.

ಸೋಮವಾರ ಹಳಪೇಟ ಮಡುವಿನಲ್ಲಿನ ವೃದ್ಧನ ಮನೆ, ತರಕಾರಿ ಮಾರುಕಟ್ಟೆಯಲ್ಲಿನ ಅಂಗಡಿ ಸುತ್ತಲಿನ ಸುಮಾರು 12ಸಾವಿರ ಜನರ ಸರ್ವೆ ನಡೆಸಲಾಗಿದೆ. ಪ್ರತಿಯೊಬ್ಬರಿಗೂ ಜ್ವರ, ನೆಗಡಿ – ಕೆಮ್ಮು ಇರುವ ಕುರಿತು ಸ್ಕ್ರೀನಿಂಗ್ ಮಾಡಲಾಗಿದ್ದು, 60 ವರ್ಷ ಮೇಲ್ಪಟ್ಟವರಲ್ಲಿ ಇಂತಹ ಲಕ್ಷಣ ಕಂಡು ಬಂದಲ್ಲಿ ಕೂಡಲೇ ಅವರನ್ನು ನಿಗಾ ಘಟಕಕ್ಕೆ ಸಾಗಿಸಲಾಗುತ್ತಿದೆ. ಸೋಮವಾರ ಒಂದೇ ದಿನ ಒಟ್ಟು 23 ಜನರನ್ನು ಜಿಲ್ಲಾ ಆಸ್ಪತ್ರೆಗೆ ಸಾಗಿಸಿ, ನಿಗಾ ಘಟಕದಲ್ಲಿಡಲಾಗಿದೆ.

ಮತ್ತೆ ಏಳು ಜನರ ಮಾದರಿ ಪರೀಕ್ಷೆಗೆ :
ಕೋವಿಡ್ ಸೋಂಕಿನಿಂದ ಮೃತಪಟ್ಟ ವೃದ್ಧನೊಂದಿಗೆ ಸಂಪರ್ಕ ಹೊಂದಿದ್ದ ಇನ್ನೂ ಏಳು ಜನರನ್ನು ಪತ್ತೆ ಮಾಡಲಾಗಿದ್ದು, ಅವರ ರಕ್ತದ ಮಾದರಿ ಹಾಗೂ ಗಂಟಲು ದ್ರವ ಪರೀಕ್ಷೆಗೆ ಕಳುಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ|ರಾಜೇಂದ್ರ ತಿಳಿಸಿದ್ದಾರೆ. ವೃದ್ಧನಿಗೆ ಕೋವಿಡ್ ಸೋಂಕು ಹೇಗೆ ಬಂತು ಎಂಬುದು ಇನ್ನೂ ದೃಢಪಟ್ಟಿಲ್ಲ. ಆತನ ಮಗ, ಪುತ್ರಿಗೆ ಸೋಂಕು ಇಲ್ಲವಾದರೂ ಅವರ ಪ್ರವಾಸದ ಕುರಿತು ಸಮಗ್ರ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದೂ ಅವರು ಹೇಳಿದ್ದಾರೆ.

ಕೋವಿಡ್ 19 ವೈರಸ್ ಸೋಂಕಿನ ಕಾರಣದಿಂದ  ಮೂರು ದಿನಗಳ ಹಿಂದೆ ವೃದ್ಧ (ರೋಗಿ ಸಂಖ್ಯೆ-125) ಮೃತಪಟ್ಟಿದ್ದ. ಈಗ ಆತನ ತಮ್ಮ ಮತ್ತು ಪತ್ನಿಗೆ ಸೋಂಕು ಇರುವುದು ದೃಢಪಟ್ಟಿದೆ. ಜಿಲ್ಲೆಯಲ್ಲಿ ಈ ವರೆಗೆ ಒಟ್ಟು 73 ಜನರ ಗಂಟಲು ಮಾದರಿ ಪರೀಕ್ಷೆಗೆ ಕಳುಹಿಸಿದ್ದು, 23 ನೆಗೆಟಿವ್ ಬಂದಿದ್ದು, ಮೂವರಿಗೆ ಪಾಜಿಟಿವ್ ಬಂದಿದೆ. 46 ಜನರ ವರದಿ ಬರಬೇಕಿದೆ. ಈ 46 ಜನರಲ್ಲಿ 25 ಜನರು, ದೆಹಲಿಯ ನಿಜಾಮುದ್ದೀನ್ ತಬ್ಲಿಘಿ ಧರ್ಮ ಸಭೆಗೆ ಹೋಗಿ ಬಂದವರಿದ್ದಾರೆ.

ಟಾಪ್ ನ್ಯೂಸ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.