ದೇಶದಲ್ಲಿ ಕೋವಿಡ್ 19 ವೈರಸ್ ಸಂಬಂಧಿತ ಸಾವಿನ ಪ್ರಮಾಣ ಶೇ.3
Team Udayavani, Apr 30, 2020, 7:02 PM IST
ನವದೆಹಲಿ: ಕಳೆದ ಮೂರು ದಿನಗಳಿಂದ ಕೋವಿಡ್ ವೈರಸ್ ಸೋಂಕಿತರ ಸಂಖ್ಯೆ ದ್ವಿಗುಣಗೊಳ್ಳುವ ಅವಧಿಯು 11.3 ದಿನಕ್ಕೆ ಏರಿಕೆಯಾಗಿದ್ದು, ಸಾವಿನ ಪ್ರಮಾಣ ಶೇ.3ರಷ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಮಾಹಿತಿ ನೀಡಿದ್ದಾರೆ.
ಬುಧವಾರ ದೈನಂದಿನ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ದೇಶಾದ್ಯಂತ ಈವರೆಗೆ ಶೇ.24.52 ರೋಗಿಗಳು ಗುಣಮುಖರಾಗಿರುವುದು ಆಶಾದಾಯಕ ಬೆಳವಣಿಗೆಯಾಗಿದೆ. ಕೇವಲ ಶೇ.0.33 ರೋಗಿಗಳು ವೆಂಟಿಲೇಟರ್ಗಳಲ್ಲಿ, ಶೇ.1.5 ಸೋಂಕಿತರು ಕೃತಕ ಆಮ್ಲಜನಕದ ನೆರವಿನಲ್ಲಿದ್ದು, ಶೇ.2.34 ಮಂದಿ ಐಸಿಯುನಲ್ಲಿದ್ದಾರೆ. ಇದು ದೇಶದಲ್ಲಿ ಸೋಂಕಿತರಿಗೆ ಗುಣಮಟ್ಟದ ಚಿಕಿತ್ಸೆ ಸಿಗುತ್ತಿರುವುದಕ್ಕೆ ಸಾಕ್ಷಿಯಾಗಿದೆ ಎಂದರು.
ಇದೇ ವೇಳೆ ಬುಧವಾರ ಬೆಳಗ್ಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 71 ಸೋಂಕಿತರು ಮೃತಪಟ್ಟಿದ್ದು, ದೇಶದಲ್ಲಿ ಒಟ್ಟಾರೆ ಸಾವಿನ ಸಂಖ್ಯೆ ಒಂದು ಸಾವಿರದ ಗಡಿ ದಾಟಿದೆ. ಈ ಪೈಕಿ ಮಹಾರಾಷ್ಟ್ರದಲ್ಲಿ 31, ಗುಜರಾತ್ನಲ್ಲಿ 19 ಸಾವು ಸಂಭವಿಸಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.