ಕೋವಿಡ್ 19: ಝೈಡಸ್ ಕಂಪನಿಯ ವಿರಾಫಿನ್ ತುರ್ತು ಬಳಕೆಗೆ ಡಿಜಿಸಿಐ ಅನುಮತಿ
ವಿರಾಫಿನ್ ಹೆಚ್ಚು ನೆರವಾಗಬಲ್ಲದು ಅಲ್ಲದೇ ಇದು ಹೆಚ್ಚಿನ ಅಪಾಯವನ್ನು ತಪ್ಪಿಸಲು ಸಹಕಾರಿಯಾಗಿದೆ
Team Udayavani, Apr 23, 2021, 6:14 PM IST
ನವದೆಹಲಿ: ವಯಸ್ಕ ಕೋವಿಡ್ ರೋಗಿಗಳ ತುರ್ತು ಬಳಕೆಗಾಗಿ ಗುಜರಾತ್ ಮೂಲದ ಝೈಡಸ್ ಕ್ಯಾಡಿಲಾ ಕಂಪನಿಯ ಸೋಂಕು ನಿರೋಧಕ ವಿರಾಫಿನ್ ಗೆ ಭಾರತೀಯ ಪ್ರಧಾನ ಔಷಧ ನಿಯಂತ್ರಕ (ಡಿಜಿಸಿಐ) ಇಲಾಖೆ ಶುಕ್ರವಾರ(ಏಪ್ರಿಲ್ 23) ಅನುಮತಿ ನೀಡಿದೆ.
ಕೋವಿಡ್ ನಿಂದ ಬಳಲುತ್ತಿದ್ದ ಶೇ.91.15ರಷ್ಟು ಮಂದಿಗೆ ಪೆಗ್ಐ ಎಫ್ ಎನ್ ಮೂಲಕ ಚಿಕಿತ್ಸೆ ನೀಡಲಾಗಿದ್ದು, ಸುಮಾರು 7 ದಿನಗಳ ಬಳಿಕ ಆರ್ ಟಿ ಪಿಸಿಆರ್ ನಲ್ಲಿ ಪರೀಕ್ಷಿಸಿದಾಗ ನೆಗೆಟಿವ್ ವರದಿ ಬಂದಿರುವುದಾಗಿ ಝೈಡಸ್ ತಿಳಿಸಿದೆ.
ಕೋವಿಡ್ ಸೋಂಕಿನಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ಒಂದು ಡೋಸ್ ಆ್ಯಂಟಿ ವೈರಲ್ ವಿರಾಫಿನ್ ನೀಡಿದರೆ ರೋಗನಿರೋಧಕ ಶಕ್ತಿ ಹೆಚ್ಚಾಗಲಿದೆ ಎಂದು ಹೇಳಿದೆ. ಆ ನಿಟ್ಟಿನಲ್ಲಿ ಸೂಕ್ಷ್ಮ ಲಕ್ಷಣಗಳು ಇರುವ ವಯಸ್ಕ ಕೋವಿಡ್ ಸೋಂಕಿತರಿಗೆ ವಿರಾಫಿನ್ ಲಸಿಕೆ ತುರ್ತು ಬಳಕೆ ಮಾಡಲು ಡಿಸಿಜಿಐ ಅನುಮತಿ ನೀಡಿದೆ ಎಂದು ಝೈಡಸ್ ಕಂಪನಿ ವಿವರಿಸಿದೆ.
ಕೋವಿಡ್ ಸೋಂಕಿತರು ಶೀಘ್ರವಾಗಿ ಗುಣಮುಖರಾಗಲು ವಿರಾಫಿನ್ ಹೆಚ್ಚು ನೆರವಾಗಬಲ್ಲದು ಅಲ್ಲದೇ ಇದು ಹೆಚ್ಚಿನ ಅಪಾಯವನ್ನು ತಪ್ಪಿಸಲು ಸಹಕಾರಿಯಾಗಿದೆ ಎಂದು ಝೈಡಸ್ ಕ್ಯಾಡಿಲಾ ಕಂಪನಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ