ಲಾಕ್ ಡೌನ್ 4.O; ಮೇ 31ರವರೆಗೆ ಮೂರು ರಾಜ್ಯಗಳ ಜನರು ಕರ್ನಾಟಕ ಪ್ರವೇಶಿಸಲು ನಿರ್ಬಂಧ
ಕಳೆದ 24ಗಂಟೆಯಲ್ಲಿ ಕರ್ನಾಟಕದಲ್ಲಿ 84 ಹೊಸ ಪ್ರಕರಣಗಳು ವರದಿಯಾಗಿದೆ
Team Udayavani, May 18, 2020, 4:46 PM IST
Representative Image
ಬೆಂಗಳೂರು:ಕೋವಿಡ್ 19 ವೈರಸ್ ಕ್ಷಿಪ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮೂರು ರಾಜ್ಯಗಳ ಜನರಿಗೆ ಕರ್ನಾಟಕ ಪ್ರವೇಶಿಸದಂತೆ ನಿಷೇಧ ಹೇರಿದೆ. ಮೇ 31ರವರೆಗೆ ಮಹಾರಾಷ್ಟ್ರ, ಗುಜರಾತ್, ತಮಿಳುನಾಡು ರಾಜ್ಯದ ಜನರ ಪ್ರವೇಶಕ್ಕೆ ನಿರ್ಬಂಧ ವಿಧಿಸಿರುವುದಾಗಿ ವರದಿ ತಿಳಿಸಿದೆ.
ಭಾರತದಲ್ಲಿ ಮಹಾರಾಷ್ಟ್ರ, ಗುಜರಾತ್ ಮತ್ತು ತಮಿಳುನಾಡಿನಲ್ಲಿ ಅತೀ ಹೆಚ್ಚು ಕೋವಿಡ್ 19 ವೈರಸ್ ಪ್ರಕರಣ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯಗಳು ಪರಸ್ಪರ ಸಂವಹನ ನಡೆಸಿದ ಮೇಲೆಯೇ ಜನರ ಓಡಾಟಕ್ಕೆ ಅವಕಾಶ ನೀಡಬೇಕೆಂದು ಕೇಂದ್ರ ಸರ್ಕಾರ ಸೂಚಿಸಿತ್ತು.
ಕಳೆದ 24ಗಂಟೆಯಲ್ಲಿ ಕರ್ನಾಟಕದಲ್ಲಿ 84 ಹೊಸ ಪ್ರಕರಣಗಳು ವರದಿಯಾಗಿದ್ದು, ಒಟ್ಟು ರಾಜ್ಯದಲ್ಲಿ ಕೋವಿಡ್ 19 ಸೋಂಕು ಪೀಡಿತರ ಸಂಖ್ಯೆ 1,231ಕ್ಕೆ ಏರಿತ್ತು. ಅಲ್ಲದೇ ರಾಜ್ಯದ ದಕ್ಷಿಣ ಭಾಗದಲ್ಲಿ ಲಾಕ್ ಡೌನ್ ನಿರ್ಬಂಧಗಳನ್ನು ಸಡಿಲಿಕೆ ಮಾಡಲು ನಿರ್ಧರಿಸಿರುವುದಾಗಿ ಎನ್ ಡಿಟಿವಿ ವರದಿ ವಿವರಿಸಿದೆ.
ಕೇಂದ್ರ ಸರ್ಕಾರದ ಸೂಚನೆಯಂತೆ ಮೇ 31ರವರೆಗೆ ಲಾಕ್ ಡೌನ್ ಮುಂದುವರಿಸುವುದಾಗಿ ತಿಳಿಸಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಕಂಟೈನ್ ಮೆಂಟ್ ಮತ್ತು ರೆಡ್ ಜೋನ್ ಹೊರತುಪಡಿಸಿ ಉಳಿದ ಕಡೆ ಎಲ್ಲಾ ಸರ್ಕಾರಿ ಬಸ್ ಗಳು ಸಂಚರಿಸಲು ಅನುಮತಿ ನೀಡಲಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಂಡು ಬಸ್ ನಲ್ಲಿ ಕೇವಲ 30 ಜನರು ಮಾತ್ರ ಸಂಚರಿಸಬಹುದಾಗಿದೆ ಎಂದು ತಿಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!