ಕಳೆದ 1 ತಿಂಗಳಲ್ಲಿ ಶೇ.60ರಷ್ಟು ಸೋಂಕು

Team Udayavani, Jul 3, 2020, 11:00 AM IST

ಕಳೆದ 1 ತಿಂಗಳಲ್ಲಿ ಶೇ.60ರಷ್ಟು ಸೋಂಕು

ಜಿನೇವಾ: ಸದ್ಯ ಜಗತ್ತು ಕೋವಿಡ್‌-19 ಎರಡನೇ ಹಂತದ ಸೋಂಕು ದಾಳಿಯನ್ನು ಎದುರಿಸುತ್ತಿದ್ದು, ಪ್ರಾರಂಭಿಕ ಹಂತಕ್ಕಿಂತ ವೇಗವಾಗಿ ಸೋಂಕು ಹರಡುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ ವಿಶ್ವದ ಒಟ್ಟಾರೆ ಸೋಂಕು ಪ್ರಕರಣಗಳ ಶೇ.60ರಷ್ಟು ಸೋಂಕು ಪ್ರಕರಣಗಳು ಕಳೆದ ಒಂದೇ ತಿಂಗಳು ವರದಿಯಾಗಿದೆ. ಈ ಕುರಿತು ವಿಶ್ವ ಆರೋಗ್ಯ ಸಂಸ್ಥೆಯ ಮಹಾ ನಿರ್ದೇಶಕ ಡಾ. ಟೆಡ್ರೊಸ್‌ ಅಧಾನೊಮ್‌ ಘೆಬ್ರೆಯೆಸಸ್‌ ಹೇಳಿದ್ದು, ಪ್ರಪಂಚಾದ್ಯಂತ 1.3 ಕೋಟಿ ಸೋಂಕು ಪ್ರಕರಣಗಳು ದಾಖಲಾಗಿದ್ದು, 5 ಲಕ್ಷಕ್ಕೂ ಹೆಚ್ಚು ಜನ ಮೃತ ಪಟ್ಟಿದ್ದಾರೆ. ಕಳೆದ ಒಂದು ವಾರದಲ್ಲಿ 1.60 ಲಕ್ಷಕ್ಕೂ ಅಧಿಕ ಪ್ರಕರಣಗಳು ದಾಖಲಾಗಿದೆ.

ದೇಶಗಳು ಲಾಕ್‌ಡೌನ್‌ ನಿಬಂಧನೆಗಳನ್ನು ತೆರವುಗೊಳಿಸಲು ಪ್ರಾರಂಭಿಸಿದಾಗಲೇ ಸೋಂಕು ಹೆಚ್ಚಳವನ್ನು ನಿರೀಕ್ಷಿಸಲಾಗಿತ್ತು. ಆದರೆ ಪುನ: ನಿಷೇಧ ಹೇರುವುದು ಇದಕ್ಕೆ ಪರಿಹಾರವಲ್ಲ. ಅಗತ್ಯ ಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿ ಮಾಡಿದ್ದರೆ ಪರಿಸ್ಥಿತಿಯನ್ನು ಸೋಂಕು ಪೀಡಿತ ರಾಷ್ಟ್ರಗಳು ನಿಯಂತ್ರಣ ಮಾಡಬಹುದು ಎಂದು ಟೆಡ್ರೊಸ್‌ ಅಭಿಪ್ರಾಯಪಟ್ಟಿದ್ದಾರೆ.

ತ್ವರಿತವಾಗಿ ಸೋಂಕು ಮೂಲವನ್ನು ಪತ್ತೆ ಹಚ್ಚಿ ಪರೀಕ್ಷೆ ಒಳಪಡಿಸುವ ಮೂಲಕ ಸೋಂಕು ಪ್ರಸರಣಕ್ಕೆ ಕಡಿವಾಣ ಹಾಕಬಹುದಾಗಿದ್ದು, ಐಸೋಲೇಶನ್‌, ಕ್ವಾರಂಟೈನ್‌ಕ್ಕೆ ಸಂಬಂಧಪಟ್ಟಂತೆ ಆರೋಗ್ಯ ಕಾರ್ಯಕರ್ತರಿಗೆ ಸೂಕ್ತ ತರಬೇತಿ ನೀಡಬೇಕಿದೆ. ಜತೆಗೆ ಸಮುದಾಯ ಮಟ್ಟಗಳಲ್ಲಿ ಸೋಂಕು ಹರಡುವಿಕೆ ಸಂಬಂಧಪಟ್ಟಂತೆ ಮತ್ತಷ್ಟು ಜಾಗೃತಿವಹಿಸುವ ಅನಿವಾರ್ಯವಿದೆ. ಆದರೆ ಕೆಲವೊಂದು ದೇಶಗಳು ತಮ್ಮದೇ ಆದ ಕ್ರಮಗಳನ್ನು ಪಾಲಿಸುತ್ತಿದ್ದು, ಆದ್ದರಿಂದ ಸಮಸ್ಯೆ ಮತ್ತಷ್ಟು ಉಲ್ಬಣಗೊಳ್ಳಲಿದೆ. ಈ ನಿಟ್ಟಿನಲ್ಲಿ ಎಲ್ಲ ದೇಶಗಳ ಸರಕಾರವೂ ಕಾರ್ಯನಿರ್ವಹಿಸಬೇಕಿದೆ ಎಂದು ಟೆಡ್ರೊಸ್‌ ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.