ಆಕ್ಸಿಜನ್ ಸಿಲಿಂಡರ್ ಕೊರತೆ ಹಿನ್ನಲೆ: KIMSನಿಂದ 50ಕ್ಕೂ ಹೆಚ್ಚು ಕೋವಿಡ್ ರೋಗಿಗಳ ವರ್ಗಾವಣೆ

Team Udayavani, Aug 17, 2020, 11:47 PM IST

ಆಕ್ಸಿಜನ್ ಸಿಲಿಂಡರ್ ಕೊರತೆ ಹಿನ್ನಲೆ: ಕಿಮ್ಸ್ ನಿಂದ 50ಕ್ಕೂ ಹೆಚ್ಚು ಕೋವಿಡ್ ರೋಗಿಗಳ ವರ್ಗಾವಣೆ

ಬೆಂಗಳೂರು: ಆಕ್ಸಿಜನ್ ಸಿಲಿಂಡರ್ ಕೊರತೆ ಹಿನ್ನೆಲೆಯಲ್ಲಿ ನಗರದ ಕೆಂಪೇಗೌಡ ವೈದ್ಯಕೀಯ ಮಹಾವಿದ್ಯಾಲಯದಲ್ಲಿ (ಕಿಮ್ಸ್) ಚಿಕಿತ್ಸೆ ಪಡೆಯುತ್ತಿದ್ದ 50ಕ್ಕೂ ಹೆಚ್ಚು ಕೋವಿಡ್ 19 ಸೋಂಕುಪೀಡಿತರನ್ನು ಹಾಗೂ ಇತರೆ ರೋಗಿಗಳನ್ನು ಸಮೀಪದ ವಿವಿಧ ಆಸ್ಪತ್ರೆಗಳಿಗೆ ವರ್ಗಾಯಿಸಲಾಗಿದೆ.

ಆಸ್ಪತ್ರೆಯಲ್ಲಿ 210 ಕೋವಿಡ್ 19 ಸೋಂಕಿತರು ಸೇರಿದಂತೆ ಒಟ್ಟು 350 ಮಂದಿ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದರು.

ಕಳೆದ ಎರಡು ದಿನಗಳಿಂದ ಆಸ್ಪತ್ರೆಗೆ ಆಕ್ಸಿಜನ್ ಸಿಲಿಡರ್ ಸರಬರಾಜಾಗಿರಲಿಲ್ಲ. ಸರಬರಾಜುದಾರರು ಸೋಮವಾರ ರಾತ್ರಿ ಸಿಲಿಡರ್ ಸರಬರಾಜು ಮಾಡುವುದಾಗಿ ಹೇಳಿದ್ದರಾದರೂ ಸಮಯಕ್ಕೆ ಸರಿಯಾಗಿ ಪೂರೈಕೆ ಮಾಡದ ಹಿನ್ನಲೆಯಲ್ಲಿ ಸಮಸ್ಯೆ ಎದುರಾಗಿದೆ.

ಇದರಲ್ಲಿ 27 ಮಕ್ಕಳು, 19 ಜನ ಗಂಭೀರ ಸಮಸ್ಯೆಯ ರೋಗಿಗಳಿದ್ದು, ತಕ್ಷಣ ರೋಗಿಗಳನ್ನು ಆ್ಯಂಬುಲೆನ್ಸ್ ಗಳ ಮೂಲಕ ವಿಕ್ಟೋರಿಯಾ, ಬೌರಿಂಗ್ ಹಾಗೂ ರಾಜೀವ್ ಗಾಂಧಿ ಎದೆರೋಗ ಆಸ್ಪತ್ರೆಗಳಿಗೆ ವರ್ಗಾಯಿಸಿಸಲಾಗಿದೆ ಮತ್ತು ಎಲ್ಲಾ ರೋಗಿಗಳಿಗೆ ಈ ಆಸ್ಪತ್ರೆಗಳಲ್ಲಿ ಚಿಕಿತ್ಸೆಯನ್ನು ಮುಂದುವರೆಸಲಾಗಿದೆ.

ಕಿಮ್ಸ್ ಆಸ್ಪತ್ರೆಯ ಆಡಳಿತ ಮಂಡಳಿ ಸಕಾಲದಲ್ಲಿ ಎಚ್ಚೆತ್ತು ರೋಗಿಗಳನ್ನು ಬೇರೆ ಬೇರೆ ಆಸ್ಪತ್ರೆಗಳಿಗೆ ವರ್ಗಾಯಿಸಿದ್ದರಿಂದ ಅನಾಹುತ ತಪ್ಪಿದಂತಾಗಿದೆ.

ಈ ಕುರಿತು ಟ್ವಿಟ್ ಮೂಲಕ ಪ್ರತಿಕ್ರಿಯಿಸಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಕಿಮ್ಸ್ ಖಾಸಗಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಎಂಬ ವಿಚಾರ ನನ್ನ ಗಮನಕ್ಕೆ ಬಂದ ಕೂಡಲೇ 40ಕ್ಕೂ ಹೆಚ್ಚು ರೋಗಿಗಳನ್ನು ವಿಕ್ಟೋರಿಯಾ, ಬೌರಿಂಗ್ ಮತ್ತು ರಾಜೀವ್ ಗಾಂಧಿ ಆಸ್ಪತ್ರೆಗೆ ರವಾನಿಸಲು ಆಂಬುಲೆನ್ಸ್ ವ್ಯವಸ್ಥೆ ಮಾಡಲಾಗಿದೆ.

ಗಂಭೀರ ಸ್ಥಿತಿಯಲ್ಲಿರುವ ರೋಗಿಗಳ ಚಿಕಿತ್ಸೆಗೆ 20 ದೊಡ್ಡ ಗಾತ್ರದ ಆಕ್ಸಿಜನ್ ಸಿಲಿಂಡರ್‌ಗಳನ್ನು ಕಿಮ್ಸ್ ಗೆ ಕಳುಹಿಸಲಾಗಿದೆ ಮಾತ್ರವಲ್ಲದೇ ಮುಂಜಾಗರೂಕತಾ ಕ್ರಮವಾಗಿ ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ 40 ಹಾಸಿಗೆಗಳನ್ನು ಸಿದ್ಧಪಡೆಸಲಾಗಿದೆ ಎಂದು ತಿಳಿಸಿದ್ದಾರೆ.

ಲಿಕ್ವಿಡ್ ಆಕ್ಸಿಜನ್ ತಯಾರಿಕಾ ಕಂಪನಿಯಿಂದ ಆಸ್ಪತ್ರೆಗೆ ಆಕ್ಸಿಜನ್ ಪೂರೈಕೆಯಲ್ಲಿ ವ್ಯತ್ಯಯವಾಗಿದೆ, ಇದರಿಂದ ಆಕ್ಸಿಜನ್ ಬೆಂಬಲದೊಂದಿಗೆ ಚಿಕಿತ್ಸೆಯಲ್ಲಿದ್ದ ರೋಗಿಗಳಿಗೆ ಕೊರತೆ ಉಂಟಾಗಿದೆ. ಕೂಡಲೇ ಸರ್ಕಾರಿ ಅಧಿಕಾರಿಗಳ ನೆರವು ಪಡೆದು ಕೃತಕ ಉಸಿರಾಟ ವ್ಯವಸ್ಥೆಯ ನಿಗಾದಲ್ಲಿದ್ದ ರೋಗಿಗಳನ್ನು ಇತರೆ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ವರ್ಗಾಹಿಸಲಾಗಿದೆ. ಸರ್ಕಾರವು ಅಗತ್ಯ ಆಕ್ಸಿಜನ್ ಪೂರೈಸಿದೆ, ಇದರಿಂದ ಸಂಭಾವ್ಯ ಅನಾಹುತ ತಪ್ಪಿದ್ದು ಸಕಾಲದಲ್ಲಿ ನೆರವು ನೀಡಿದಕ್ಕೆ ಋಣಿಯಾಗಿದ್ದೇವೆ ಎಂದು ಕಿಮ್ಸ್ ಆಡಳಿತ ಮಂಡಳಿ ತಿಳಿಸಿದೆ.

ತಪ್ಪಿತಸ್ಥರ ವಿರುದ್ಧ ಕ್ರಮ
ಘಟನೆ ಕುರಿತು ಟ್ವಿಟ್ ನಲ್ಲಿ ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ಶ್ರೀರಾಮುಲು, ಕಿಮ್ಸ್ ಆಸ್ಪತ್ರೆಯಲ್ಲಿ ಆ್ಯಕ್ಸಿಜನ್ ಸಮಸ್ಯೆಯಿಂದ ಕೋವಿಡ್ ಸೋಂಕಿತರೂ ಸೇರಿದಂತೆ ಅನೇಕ ರೋಗಿಗಳು ಪರದಾಡುತ್ತಿರುವ ಸುದ್ದಿ ಗಮನಕ್ಕೆ ಬಂದಿದೆ. ಈ ಸಂಬಂಧ, ಈಗಾಗಲೇ ಆರೋಗ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದು ರೋಗಿಗಳನ್ನು ಅಕ್ಸಿಜನ್ ಲಭ್ಯವಿರುವ ಆಸ್ಪತ್ರೆಗಳಿಗೆ ‌ರವಾನಿಸಲು ಸೂಚಿಸಲಾಗಿದೆ. ಕೆಲವರನ್ನು ವಿಕ್ಟೋರಿಯಾ, ಬೌರಿಂಗ್ ಮತ್ತು ರಾಜೀವ್ ಗಾಂಧಿ ಆಸ್ಪತ್ರೆಗಳಿಗೆ ರವಾನಿಸಿ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ಆಮ್ಲಜನಕ ಕೊರತೆ ವಿಷಯದಲ್ಲಿ ನಿರ್ಲಕ್ಷ್ಯ ವಹಿಸಿರುವ ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು

Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್‌ಗೆ ಕಳುಹಿಸಿ: B.Y. ರಾಘವೇಂದ್ರ

ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್‌ಗೆ ಕಳುಹಿಸಿ: B.Y. ರಾಘವೇಂದ್ರ

Lok Sabha Election: ಗೆಲುವು ಸಾಧಿಸಿ ಮೋದಿ ಕೈ ಬಲಪಡಿಸುವೆ: ಗಾಯತ್ರಿ ಸಿದ್ದೇಶ್ವರ

Lok Sabha Election: ಗೆಲುವು ಸಾಧಿಸಿ ಮೋದಿ ಕೈ ಬಲಪಡಿಸುವೆ: ಗಾಯತ್ರಿ ಸಿದ್ದೇಶ್ವರ

Tragedy: ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು…

Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

ಅರವಿಂದ್‌ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು

ಅರವಿಂದ್‌ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.