ಮಿತಿಮೀರಿ ಹೆಚ್ಚಳವಾಗುತ್ತಿರುವ ಕೋವಿಡ್: ಪರಿಸ್ಥಿತಿ ನಿಭಾಯಿಸಲು ಸಭೆ ಕರೆದ ಪ್ರಧಾನಿ ಮೋದಿ
ತಮ್ಮ ಲೋಕಸಭಾ ಕ್ಷೇತ್ರವಾದ ವಾರಣಾಸಿಯಲ್ಲಿ ಕೋವಿಡ್ ಪರಿಸ್ಥಿತಿಯ ಬಗ್ಗೆ ಪರಿಶೀಲನೆ ನಡೆಸಿದರು.
Team Udayavani, Apr 19, 2021, 11:42 AM IST
ನವದೆಹಲಿ:ದೇಶದಲ್ಲಿ ಕೋವಿಡ್ ಎರಡನೇ ಅಲೆ ಕ್ಷಿಪ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿಯ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ(ಏಪ್ರಿಲ್ 19) ಮುಖ್ಯ ಸಭೆಯನ್ನು ಕರೆದಿದ್ದು, ಚರ್ಚೆ ನಡೆಸುತ್ತಿರುವುದಾಗಿ ವರದಿ ತಿಳಿಸಿದೆ.
ಕಳೆದ ವರ್ಷ ಕೋವಿಡ್ ಸೋಂಕು ಆರಂಭಗೊಂಡ ನಂತರ ಇದೀಗ ಭಾರತದಲ್ಲಿ ಎರಡನೇ ಅಲೆ ಕಾಣಿಸಿಕೊಂಡಿದ್ದು, ಕಳೆದ ನಾಲ್ಕೈದು ದಿನಗಳಿಂದ 2 ಲಕ್ಷಕ್ಕೂ ಅಧಿಕ ಸೋಂಕು ಪ್ರಕರಣ ಪತ್ತೆಯಾಗುತ್ತಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಪ್ರಧಾನಿ 11.30ಕ್ಕೆ ತುರ್ತು ಸಭೆ ಕರೆದಿದ್ದು, ಚರ್ಚೆ ನಡೆಸುತ್ತಿದ್ದಾರೆ.
ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಲೋಕಸಭಾ ಕ್ಷೇತ್ರವಾದ ವಾರಣಾಸಿಯಲ್ಲಿ ಕೋವಿಡ್ ಪರಿಸ್ಥಿತಿಯ ಬಗ್ಗೆ ಪರಿಶೀಲನೆ ನಡೆಸಿದರು. ಅಲ್ಲದೇ 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಲಸಿಕೆ ಅಗತ್ಯವಿದೆ ಎಂದು ಈ ಸಂದರ್ಭದಲ್ಲಿ ತಿಳಿಸಿದ್ದರು.
ಪ್ರಧಾನಿ ಮೋದಿ ಅವರು ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ, ದೇಶಾದ್ಯಂತ ಕೋವಿಡ್ ಸೋಂಕು ತಡೆಗಟ್ಟಲು ಟ್ರ್ಯಾಕಿಂಗ್ (ಜಾಡು ಹಿಡಿ), ಟ್ರೇಸಿಂಗ್ (ಪತ್ತೆ ಹಚ್ಚಿ) ಮತ್ತು ಟೆಸ್ಟಿಂಗ್(ಪರೀಕ್ಷೆಗೊಳಪಡಿಸಿ) ಗೆ ಹೆಚ್ಚು ಒತ್ತು ಕೊಟ್ಟು ಜಾರಿಗೊಳಿಸುವಂತೆ ತಿಳಿಸಿದ್ದರು. ಮುಂಜಾಗ್ರತಾ ಕ್ರಮವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮತ್ತು ಮಾಸ್ಕ್ ಕಡ್ಡಾಯಗೊಳಿಸುವಂತೆ ಪ್ರಧಾನಿ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್