ಇದೊಂದು ದೀರ್ಘ ಹೋರಾಟ, ಲಾಕ್ ಡೌನ್ ಸಡಿಲಗೊಂಡರೂ ಎಚ್ಚರಿಕೆ ಅಗತ್ಯ: ಮೋದಿ
ಕಳೆದ ಬಾರಿ ಮನ್ ಕೀ ಬಾತ್ ನಲ್ಲಿ ಮಾತನಾಡುತ್ತಿದ್ದ ವೇಳೆಯಲ್ಲಿ ಬಸ್, ವಿಮಾನ ಸೇವೆ ಸ್ಥಗಿತಗೊಂಡಿತ್ತು.
Team Udayavani, May 31, 2020, 3:01 PM IST
ನವದೆಹಲಿ:ಕೋವಿಡ್ 19ನಂತಹ ಬಿಕ್ಕಟ್ಟಿನ ಸಂದರ್ಭದಲ್ಲಿಯೂ ಹಲವಾರು ಹೊಸ ಆವಿಷ್ಕಾರಗಳು ನಡೆದಿದೆ. ಹಳ್ಳಿಗಳು, ನಗರಗಳಲ್ಲಿ ಕೋವಿಡ್ ವಿರುದ್ಧ ಹೋರಾಡಲು ಹೊಸ ಮಾರ್ಗಗಳನ್ನು ಕಂಡುಕೊಂಡಿದ್ದಾರೆ. ಆದರೂ ದೇಶದಲ್ಲಿ ಲಾಕ್ ಡೌನ್ ನಿರ್ಬಂಧ ಸಡಿಲಗೊಳಿಸಿದ್ದರೂ ಕೂಡಾ ಜನರು ಇನ್ನಷ್ಟು ಎಚ್ಚರಿಕೆಯಿಂದ ಇರಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ನಾಲ್ಕನೇ ಹಂತದ ಲಾಕ್ ಡೌನ್ ನ ಕೊನೆಯ ದಿನವಾದ ಭಾನುವಾರ ದೇಶದ ಜನರನ್ನು ಉದ್ದೇಶಿಸಿ ಮನ್ ಕೀ ಬಾತ್ ನಲ್ಲಿ ಮಾತನಾಡಿದರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿ ಎ ಸರ್ಕಾರ ಒಂದು ವರ್ಷವನ್ನು ಪೂರೈಸಿ ಎರಡನೇ ವರ್ಷಕ್ಕೆ ಕಾಲಿರಿಸುತ್ತಿರುವ ವೇಳೆಯಲ್ಲಿ ಮನ್ ಕೀ ಬಾತ್ ಮೂಲಕ ಹಲವಾರು ವಿಷಯಗಳನ್ನು ಹಂಚಿಕೊಂಡರು.
ಕಳೆದ ಬಾರಿ ಮನ್ ಕೀ ಬಾತ್ ನಲ್ಲಿ ಮಾತನಾಡುತ್ತಿದ್ದ ವೇಳೆಯಲ್ಲಿ ಬಸ್, ವಿಮಾನ ಸೇವೆ ಸ್ಥಗಿತಗೊಂಡಿತ್ತು. ಆದರೆ ಈ ಬಾರಿ ಶ್ರಮಿಕ್ ವಿಶೇಷ ರೈಲು ಸಂಚರಿಸುತ್ತಿದೆ. ವಿಮಾನಗಳು ಪುನರಾರಂಭಗೊಂಡಿದೆ. ಕೈಗಾರಿಕೆಗಳು ಸೇರಿದಂತೆ ಬಹುತೇಕ ಆರ್ಥಿಕ ಚಟುವಟಿಕೆ ಎಂದಿನಂತೆ ಕಾರ್ಯನಿರ್ವಹಿಸತೊಡಗಿವೆ. ಈ ಪರಿಸ್ಥಿತಿಯಲ್ಲಿ ನಾವು ಇನ್ನಷ್ಟು ಎಚ್ಚರಿಕೆ ಹಾಗೂ ಜಾಗ್ರತೆಯಿಂದ ಇರಬೇಕಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಭಿವೃದ್ಧಿ ವೇಳೆ ಪರಿಸರಕ್ಕೆ ಧಕ್ಕೆ ಮಾಡುವುದಿಲ್ಲ: ಗೋವಾ ಸಿಎಂ ಸಾವಂತ್
ಮುಂಬೈ-ಪುಣೆ ಎಕ್ಸ್ಪ್ರೆಸ್ವೇ: ಬಸ್ಗೆ ಕಾರು ಢಿಕ್ಕಿ; ಎನ್ಸಿಪಿ ಶಾಸಕ ಸಂಗ್ರಾಮ್ ಪಾರು
ಅಮರನಾಥ ಯಾತ್ರೆ ಭದ್ರತಾ ವ್ಯವಸ್ಥೆ: 2 ಮಹತ್ವದ ಸಭೆ ನಡೆಸಿದ ಅಮಿತ್ ಶಾ
2ಜಿ ಯುಗ ಭ್ರಷ್ಟಾಚಾರದ ಸಂಕೇತವಾಗಿತ್ತು, ಈಗ ಪಾರದರ್ಶಕತೆ ಇದೆ: ಪ್ರಧಾನಿ
ಜ್ಞಾನವಾಪಿ ಮಸೀದಿಯಲ್ಲಿ ಸಿಕ್ಕಿದ್ದು ಶಿವಲಿಂಗವಲ್ಲ; ಅದು ಫೌಂಟನ್: ಮಸೀದಿಯ ಆಡಳಿತ ಮಂಡಳಿ ವಾದ