ಕೋವಿಡ್ 19 ವೈರಸ್: ತಮಿಳುನಾಡಿನಲ್ಲಿ 1683 ಪ್ರಕರಣ ಪತ್ತೆ, ಸಾವಿನ ಸಂಖ್ಯೆ 20ಕ್ಕೆ ಏರಿಕೆ
6025 ವ್ಯಕ್ತಿಗಳ ಸ್ಯಾಂಪಲ್ಸ್ ಅನ್ನು ಮರು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ವರದಿ ವಿವರಿಸಿದೆ.
Team Udayavani, Apr 24, 2020, 12:54 PM IST
Representative Image
ಚೆನ್ನೈ: ತಮಿಳುನಾಡಿನಲ್ಲಿ ಮತ್ತೆ 54 ಕೋವಿಡ್ 19 ವೈರಸ್ ಸೋಂಕಿತರು ಪತ್ತೆಯಾಗುವ ಮೂಲಕ ರಾಜ್ಯದಲ್ಲಿ ಒಟ್ಟು 1,683 ಪ್ರಕರಣ ದಾಖಲಾಗಿದೆ. 20 ಜನರು ಸಾವನ್ನಪ್ಪಿರುವುದಾಗಿ ಆರೋಗ್ಯ ಇಲಾಖೆ ತಿಳಿಸಿದೆ.
ಗುರುವಾರ ರಾಜ್ಯದಲ್ಲಿ ಮಹಿಳೆಯೊಬ್ಬರು ಸೇರಿದಂತೆ ಇಬ್ಬರು ಹಿರಿಯ ವ್ಯಕ್ತಿಗಳು ಸಾವನ್ನಪ್ಪಿದ್ದಾರೆ. ಒಂದೇ ದಿನ ಕೋವಿಡ್ 19 ಸೋಂಕಿತ ಸುಮಾರು 90 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ ಚಾರ್ಜ್ ಆಗಿದ್ದಾರೆ. ಒಟ್ಟಾರೆಯಾಗಿ ಈವರೆಗೆ 752 ಮಂದಿ ಕೋವಿಡ್ 19 ಸೋಂಕಿತರು ಚೇತರಿಸಿಕೊಂಡಿರುವುದಾಗಿ ವರದಿ ಹೇಳಿದೆ.
ಕೋವಿಡ್ 19 ಪರೀಕ್ಷೆಯನ್ನು ನಡೆಸುತ್ತಿದ್ದು, ಗುರುವಾರ 6954 ಸ್ಯಾಂಪಲ್ಸ್ ಪರೀಕ್ಷೆ ನಡೆಸಲಾಗಿದೆ. ಈವರೆಗೆ 65,997 ಮಾದರಿಗಳನ್ನು ಪರಿಶೀಲಿಸಲಾಗಿದೆ. ಇದರಲ್ಲಿ 1,433 ಸ್ಯಾಂಪಲ್ಸ್ ಗಳ ಪರೀಕ್ಷೆ ಪ್ರಕ್ರಿಯೆಯಲ್ಲಿದೆ. 6025 ವ್ಯಕ್ತಿಗಳ ಸ್ಯಾಂಪಲ್ಸ್ ಅನ್ನು ಮರು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ವರದಿ ವಿವರಿಸಿದೆ.
ಮೂರು ವರ್ಷದ ಮಗು ಸೇರಿದಂತೆ 54 ಮಂದಿಗೆ ಕೋವಿಡ್ 19 ಸೋಂಕು ಪತ್ತೆಯಾಗಿದ್ದು, ಇದರೊಂದಿಗೆ ರಾಜ್ಯದಲ್ಲಿ ಕೋವಿಡ್ 19 ವೈರಸ್ ಪೀಡಿತರ ಸಂಖ್ಯೆ 1,683ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದೆ.