ಕೋವಿಡ್ ಕಳವಳ – ಜು.15 : 3176 ಸೋಂಕು ಪ್ರಕರಣ ದಾಖಲು ; 1076 ಮಂದಿ ಚೇತರಿಕೆ ; 87 ಸಾವು

ಬೆಂಗಳೂರು ನಗರ 1975, ಧಾರವಾಡ 139, ಬಳ್ಳಾರಿ 136, ಮೈಸೂರು 99, ದಕ್ಷಿಣ ಕನ್ನಡ 76, ಮತ್ತು ಉಡುಪಿ 52 ಸೋಂಕು ಪ್ರಕರಣಗಳು

Team Udayavani, Jul 15, 2020, 8:20 PM IST

ಕೋವಿಡ್ ಕಳವಳ – ಜು.15 : 3176 ಸೋಂಕು ಪ್ರಕರಣ ದಾಖಲು ; 1076 ಮಂದಿ ಚೇತರಿಕೆ ; 87 ಸಾವು

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೆಂಗಳೂರು: ಮಂಗಳವಾರ ಸಾಯಂಕಾಲದಿಂದ ಬುಧವಾರ ಸಾಯಂಕಾಲದವರೆಗಿನ ಕೋವಿಡ್ 19 ಪ್ರಕರಣಗಳ ವರದಿಯ ಪ್ರಕಾರ ರಾಜ್ಯದಲ್ಲಿ ಒಟ್ಟು 3176 ಕೋವಿಡ್ 19 ಸೋಂಕು ಪ್ರಕರಣಗಳು ದಾಖಲಾಗಿವೆ.

ಒಂದೇ ದಿನ ರಾಜ್ಯದಲ್ಲಿ 1076 ಕೋವಿಡ್ 19 ಸೋಂಕಿತರು ಚೇತರಿಸಿಕೊಂಡಿರುವುದು ಒಂದು ಆಶಾದಾಯಕ ವಿಚಾರವಾಗಿದೆ. ಇಂದು ರಾಜ್ಯದಲ್ಲಿ ಕೋವಿಡ್ 19 ಸಂಬಂಧಿತ ಒಟ್ಟು 87 ಸಾವು ಸಂಭವಿಸಿದೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ ಎರಡು ಸಾವಿರಕ್ಕೆ ಸನಿಹದಲ್ಲಿದೆ ಇಂದು ಇಲ್ಲಿ 1975 ಸೋಂಕಿತರು ಪತ್ತೆಯಾಗಿದ್ದಾರೆ. ಆ ಬಳಿಕದ ಸ್ಥಾನದಲ್ಲಿ ಧಾರವಾಡ (139), ಬಳ್ಳಾರಿ (136), ಮೈಸೂರು (99), ವಿಜಯಪುರ (80) ಹಾಗೂ ದಕ್ಷಿಣ ಕನ್ನಡ (76) ಜಿಲ್ಲೆಗಳಿವೆ.

ಇಂದು ರಾಜ್ಯದಲ್ಲಿ ಕೋವಿಡ್ 19 ಸೋಂಕಿಗೆ ಒಟ್ಟು 87 ಜನ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ ಈ ಮಹಾಮಾರಿಗೆ ಬಲಿಯಾದವರ ಒಟ್ಟು ಸಂಖ್ಯೆ 928ಕ್ಕೆ ಏರಿಕೆ ಆಗಿದೆ.

ಇಂದು ರಾಜ್ಯಾದ್ಯಂತ ಒಟ್ಟು 1076 ಕೋವಿಡ್ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ರಾಜ್ಯದಲ್ಲಿ ಇಂದಿನವರೆಗೆ ಒಟ್ಟು 47253 ಕೋವಿಡ್ 19 ಸೋಂಕು ಪ್ರಕರಣಗಳು ದಾಖಲುಗೊಂಡಿದೆ. ಮತ್ತು ಇವರಲ್ಲಿ 18466 ಸೋಂಕಿತರು ಗುಣಮುಖರಾಗಿದ್ದಾರೆ ಹಾಗೂ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 27853 ಇದೆ.

ಈ ಅವಧಿಯಲ್ಲಿ ಬೆಂಗಳೂರು ನಗರ ಜಿಲ್ಲೆಯೊಂದರಲ್ಲೇ 60 ಸೋಂಕಿತರು ಮೃತಪಟ್ಟಿದ್ದಾರೆ. ಇನ್ನುಳಿದಂತೆ, ಮೈಸೂರು ಜಿಲ್ಲೆಯಲ್ಲಿ 6 ಸೋಂಕಿತರು ಸಾವನ್ನಪ್ಪಿದ್ದರೆ, ಧಾರವಾಡ ಜಿಲ್ಲೆಯಲ್ಲಿ 5 ಸಾವು ಸಂಭವಿಸಿದೆ. ಉತ್ತರ ಕನ್ನಡ, ಬಾಗಲಕೋಟೆ ಜಿಲ್ಲೆಗಳಲ್ಲಿ ತಲಾ ಮೂರು ಸಾವು ಸಂಭವಿಸಿದೆ. ರಾಯಚೂರು ಜಿಲ್ಲೆಯಲ್ಲಿ ಇಬ್ಬರು ಕೋವಿಡ್ 19 ಸೋಂಕಿತರು ಸಾವನ್ನಪ್ಪಿದ್ದಾರೆ. ಇನ್ನುಳಿದಂತೆ, ಮಂಡ್ಯ, ಶಿವಮೊಗ್ಗ, ತುಮಕೂರು, ಚಿಕ್ಕಮಗಳೂರು, ಚಿತ್ರದುರ್ಗ ಮತ್ತು ರಾಮನಗರ ಜಿಲ್ಲೆಗಳಲ್ಲಿ ಕೋವಿಡ್ 19 ಸೋಂಕು ಸಂಬಂಧಿ ತಲಾ ಒಂದೊಂದು ಸಾವು ಸಂಭವಿಸಿದೆ.

ಈ ಮೂಲಕ ರಾಜ್ಯದಲ್ಲಿ ಒಟ್ಟಾರೆಯಾಗಿ ಇದುವರೆಗೆ 928 ಜನ ಕೋವಿಡ್ 19 ಸೋಂಕಿನ ಕಾರಣದಿಂದ ಮೃತಪಟ್ಟಿದ್ದಾರೆ. ಹಾಗೂ 06 ಜನ ಕೋವಿಡ್ 19 ಸೋಂಕಿತರು ಅನ್ಯ ಕಾರಣದಿಂದ ಮೃತಪಟ್ಟಿದ್ದಾರೆ. 597 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ 1975 ಪಾಸಿಟಿವ್ ಪ್ರಕರಣ ಸೇರಿದಂತೆ, ಧಾರವಾಡ – 139, ಬಳ್ಳಾರಿ – 136, ಮೈಸೂರು – 99, ವಿಜಯಪುರ 80, ದಕ್ಷಿಣ ಕನ್ನಡ – 76, ಕಲಬುರಗಿ – 67, ಉಡುಪಿ – 52, ಯಾದಗಿರಿ – 49, ಉತ್ತರ ಕನ್ನಡ – 48, ಬೆಳಗಾವಿ – 41, ಗದಗ – 39, ಬೀದರ್ – 35, ದಾವಣಗೆರೆ – 35, ಬಾಗಲಕೋಟೆ – 34, ಚಿಕ್ಕಬಳ್ಳಾಪುರ – 32, ಮಂಡ್ಯ – 31, ಶಿವಮೊಗ್ಗ – 29, ರಾಯಚೂರು – 26, ಹಾಸನ – 25, ತುಮಕೂರು – 24, ಕೊಡಗು – 23, ಕೋಲಾರ – 15, ಕೊಪ್ಪಳ – 14, ಚಿಕ್ಕಮಗಳೂರು – 13, ಚಿತ್ರದುರ್ಗ – 12, ಬೆಂಗಳೂರು ಗ್ರಾಮಾಂತರ – 10 ಸೇರಿದಂತೆ ರಾಜ್ಯದ ಒಟ್ಟು 27 ಜಿಲ್ಲೆಗಳಲ್ಲಿ ಇಂದು ಎರಡಂಕೆಯ ಕೋವಿಡ್ 19 ಸೋಂಕಿನ ಪ್ರಕರಣಗಳು ವರದಿಯಾಗಿವೆ.

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.