ಕೈ ಟಿಕೆಟ್‌ ಗೊಂದಲದ ಮಧ್ಯೆಯೂ ಉಮೇದುವಾರಿಕೆಗೆ ಉಭಯರ ಸಿದ್ಧತೆ

Team Udayavani, Apr 3, 2019, 5:11 PM IST

Udayavani Kannada Newspaper

ದಾವಣಗೆರೆ: ಲೋಕಸಭಾ ಸಾರ್ವತ್ರಿಕ 2ನೇ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೇವಲ 2 ದಿನ ಬಾಕಿ ಇದ್ದರೂ ದಾವಣಗೆರೆ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಯಾರೆಂದು ಸ್ಪಷ್ಟವಾಗದೇ ಕೈ ಪಾಳಯದಲ್ಲಿ ನೀರವ ವಾತಾವರಣ ಸೃಷ್ಟಿಯಾಗಿದೆ.

ಕಾಂಗ್ರೆಸ್‌ ಪಕ್ಷದಲ್ಲಿ ಲೋಕಸಭಾ ಚುನಾವಣಾ ವೇಳಾ ಪಟ್ಟಿ ಘೋಷಣೆಗೂ ಮುನ್ನ ಇದ್ದ ಹುಮ್ಮಸ್ಸು ಈಗ ಕಾಣುತ್ತಿಲ್ಲ. ಮಾಜಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಚುನಾವಣೆಯಲ್ಲಿ ಸ್ಪರ್ಧಿಸಲು ನಿರಾಸಕ್ತಿ ತೋರಿದರೋ ಆಗಲೇ ಆ ಪಕ್ಷದ ಕಾರ್ಯಕರ್ತರು, ಮುಖಂಡರ ಉತ್ಸಾಹ ಕುಗ್ಗಿತ್ತು. ಜತೆಗೆ ಶಾಸಕ ಶಾಮನೂರು ಶಿವಶಂಕರಪ್ಪ ಹೈಕಮಾಂಡ್‌ ನೀಡಿದ ಟಿಕೆಟ್‌ ನಿರಾಕರಿಸಿದ ಮೇಲಂತೂ ಕೈ ಪಾಳಯದಲ್ಲಿ ನಿರುತ್ಸಾಹ ಮನೆ ಮಾಡಿತು. ಈಗ ಪರ್ಯಾಯ ಅಭ್ಯರ್ಥಿ ಘೋಷಣೆಯೂ ವಿಳಂಬವಾಗುತ್ತಿರುವುದರಿಂದ ಕಾಂಗ್ರೆಸ್‌ ಪಡೆ ಒಂದು ರೀತಿ ಪರಿತಪಿಸುವಂತಾಗಿದೆ.

ಮಾಜಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಸೋಮವಾರ ಎಲ್ಲಾ ಗೊಂದಲಕ್ಕೆ ತೆರೆ ಬೀಳಲಿದೆ ಎಂಬುದಾಗಿ ಹೇಳಿದ್ದರು. ಆದರೆ, ಮಂಗಳವಾರ ಕಳೆದರೂ ಅಭ್ಯರ್ಥಿ ಆಯ್ಕೆ ತೆರೆಮರೆ ಕಸರತ್ತು ಮುಗಿದಂತಿಲ್ಲ. ಈ ಮಧ್ಯೆ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಎಚ್‌.ಬಿ. ಮಂಜಪ್ಪ ಅಭ್ಯರ್ಥಿಯಾಗಲಿದ್ದಾರೆ ಎಂಬ ಸುದ್ದಿ ಕೈ ಪಾಳಯದ ಮೂಲಗಳಿಂದ ತಿಳಿದು ಬಂದಿದೆ. ಅವರು ನಾಮಪತ್ರ ಸಲ್ಲಿಸಲು ಅಗತ್ಯ ಇರುವ ದಾಖಲೆಗಳ ಸಿದ್ಧತೆಯಲ್ಲಿ ತೊಡಗಿದ್ದಾರೆ. ಪರ್ಯಾಯ ಅಭ್ಯರ್ಥಿ ಹುಡುಕಾಟದಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಬೆಂಗಳೂರಿಗೆ ಕರೆಯಿಸಿಕೊಂಡು ಚರ್ಚೆ ನಡೆಸಿದ್ದ ಜಿಲ್ಲಾ ಪಂಚಾಯಿತಿ ಪಕ್ಷೇತರ ಸದಸ್ಯ ತೇಜಸ್ವಿ ವಿ.ಪಟೇಲ್‌ಗ‌ೂ ಸಹ ನಾಮಪತ್ರ ಸಲ್ಲಿಸಲು ದಾಖಲೆ ಸಿದ್ಧಪಡಿಸಿಕೊಳ್ಳುವಂತೆ ಜಿಲ್ಲಾ ಕಾಂಗ್ರೆಸ್‌ ಮುಖಂಡರು ದೂರವಾಣಿ ಮೂಲಕ ತಿಳಿಸಿದ್ದಾರಂತೆ. ಹಾಗಾಗಿ ಇಬ್ಬರೂ ನಾಮಪತ್ರ ಸಲ್ಲಿಸಲು ತಯಾರಿ ನಡೆಸಿದ್ದಾರೆ.

ಇಬ್ಬರೂ ನಾಮಪತ್ರ ಸಲ್ಲಿಸಿದರೆ ಕೊನೆಗೆ ಕಣದಲ್ಲಿ ಉಳಿಯುವ ಅಭ್ಯರ್ಥಿ ಯಾರು ಎಂಬ ಪ್ರಶ್ನೆ ಈಗ ಉದ್ಭವಿಸಿದೆ. ಅಭ್ಯರ್ಥಿಯಾಗಿ ಕಣಕ್ಕಿಳಿಯಬೇಕಿದ್ದ ಮಾಜಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಈಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಉಸ್ತುವಾರಿಯಾಗಿ ನೇಮಕಗೊಂಡಿದ್ದಾರೆ. ಹಾಗಾಗಿ ಈ ಚುನಾವಣೆಯಲ್ಲಿ ಅವರ ಜವಾಬ್ದಾರಿ ಹೆಚ್ಚಿದೆ. ಇನ್ನು ಕಾಂಗ್ರೆಸ್‌ನ ಜಿಲ್ಲಾಧ್ಯಕ್ಷ ಎಚ್‌.ಬಿ.ಮಂಜಪ್ಪ ಅಭ್ಯರ್ಥಿಯಾದಲ್ಲಿ ಮಲ್ಲಿಕಾರ್ಜುನರೇ ಹುರಿಯಾಳಾದಂತೆ.

ಇನ್ನು ತೇಜಸ್ವಿ ವಿ.ಪಟೇಲರಿಗೂ ನಾಮಪತ್ರ ಸಲ್ಲಿಕೆಗೆ ಸಿದ್ಧತೆ ಮಾಡಿಕೊಳ್ಳುವಂತೆ ತಿಳಿಸಿರುವುದು ಒಂದಿಷ್ಟು ಕುತೂಹಲ ಮೂಡಿಸಿದೆ. ಕೊನೆಗಳಿಗೆಯಲ್ಲಿ ಏನಾದರೂ ಯಡವಟ್ಟಾದಲ್ಲಿ ಮತ್ತೊಬ್ಬರು ನಾಮಪತ್ರ ಸಲ್ಲಿಸಲಿ ಎಂಬ ಮುಂಜಾಗ್ರತ ದೃಷ್ಟಿಯಿಂದಲೋ ಅಥವಾ ಹೈಕಮಾಂಡ್‌ ಸೂಚನೆಯೋ ಸ್ಪಷ್ಟವಾಗಿ ತಿಳಿದಿಲ್ಲ. ಆದ್ದರಿಂದ ಇಬ್ಬರೂ ನಾಮಪತ್ರ ಸಲ್ಲಿಕೆಗೆ ದಾಖಲೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಬಹುಶಃ ಉಭಯರೂ ಉಮೇದುವಾರಿಕೆಗೆ ನಾಮಪತ್ರ ಸಲ್ಲಿಸಬಹುದು. ನಾಮಪತ್ರ ಸಲ್ಲಿಸಲು ಎರಡು ದಿನ ಕಾಲವಾಕಾಶ ಇರುವುದರಿಂದ ಕೊನೇ ಗಳಿಗೆಯಲ್ಲಿ ಮತ್ತೇನಾದರೂ ಬೆಳವಣಿಗೆಯಾದರೂ ಆಶ್ಚರ್ಯಪಡಬೇಕಿಲ್ಲ. ಅದು ಮೊದಲಿನಿಂದಲೂ ಕಾಂಗ್ರೆಸ್‌ ಟಿಕೆಟ್‌ ಹಂಚಿಕೆ ವಿಧಾನವೇ ಹಾಗೆ. ಯಾವುದೇ ಬೆಳವಣಿಗೆಯಾಗದಿದ್ದಲ್ಲಿ ಎಚ್‌.ಬಿ.ಮಂಜಪ್ಪ ಇಲ್ಲವೇ ತೇಜಸ್ವಿ ವಿ. ಪಟೇಲ್‌ ಇಬ್ಬರಲ್ಲಿ ಒಬ್ಬರು ಮೈತ್ರಿ ಅಭ್ಯರ್ಥಿಯಾಗಿ ಈ ಚುನಾವಣೆ ಎದುರಿಸುವ ಸಾಧ್ಯತೆ ಇದೆ.

ಎನ್‌.ಆರ್‌.ನಟರಾಜ್‌

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.