ಜಾಲತಾಣದಲ್ಲಿ ಪ್ರೇಯಸಿ ಚಿತ್ರ ಬಿಡುಗಡೆ: ಆರೋಪಿ ಸೆರೆ

Team Udayavani, Mar 24, 2019, 12:37 PM IST

jalatana

ಬೆಂಗಳೂರು: ಪ್ರೀತಿಗೆ ನಿರಾಕರಿಸಿದ ಪ್ರೇಯಸಿಯ ಖಾಸಗಿ ಫೋಟೋ ಮತ್ತು ಮೊಬೈಲ್‌ ನಂಬರ್‌ನ್ನು ಅಶ್ಲೀಲ ವೆಬ್‌ಸೈಟ್‌ನಲ್ಲಿ ಹಾಕಿದ್ದ ಮಾಜಿ ಪ್ರಿಯಕರನನ್ನು ಯಶವಂತಪುರ ಪೊಲೀಸರು ಬಂಧಿಸಿದ್ದಾರೆ.

ಕುರುಬರಹಳ್ಳಿಯ ನಿವಾಸಿ ರೋಹಿತ್‌ ಕುಮಾರ್‌ (23) ಬಂಧಿತ. ಕೆಲ ತಿಂಗಳ ಹಿಂದೆ ಆರೋಪಿ ಯಶವಂತಪುರ ನಿವಾಸಿ 27 ವರ್ಷದ ಯುವತಿಯನ್ನು ಪ್ರೀತಿಸುತ್ತಿದ್ದ. ಈ ವೇಳೆ ಆಕೆಯ ಖಾಸಗಿ ಫೋಟೋಗಳನ್ನು ಸೆರೆಹಿಡಿದಿದ್ದ.

ಇತ್ತೀಚೆಗೆ ಸಣ್ಣ-ಪುಟ್ಟ ವಿಚಾರಕ್ಕೆ ಇಬ್ಬರ ನಡುವೆ ಜಗಳ ನಡೆದು ಬೇರೆಯಾಗಿದ್ದರು. ಫೆ.27ರಂದು ಬೆಳಗ್ಗೆ 9 ಗಂಟೆಗೆ ಆರೋಪಿ ರೋಹಿತ್‌ ಕುಮಾರ್‌, ಸಂತ್ರಸ್ತೆ ಕೊಠಡಿಗೆ ಹೋಗಿ ಆಕೆ ಜತೆ ಜಗಳ ಮಾಡಿದ್ದಾನೆ. ಸಂತ್ರಸ್ತೆಯ ಖಾಸಗಿ ಫೋಟೊಗಳನ್ನು ಆಕೆಯ ಪೋಷಕರಿಗೂ ಕಳುಹಿಸಿದ್ದ.

ಅಲ್ಲದೆ, ಆಕೆಯ ವಿರುದ್ಧ ಸೇಡು ತೀರಿಸಿಕೊಳ್ಳಲು ಲೊಕಾಂಟೋ ವೆಬ್‌ಸೈಟ್‌ಗೆ ಆಕೆಯ ಖಾಸಗಿ ಫೋಟೋಗಳನ್ನು ಅಪ್‌ಲೋಡ್‌ ಮಾಡಿ, ಮೊಬೈಲ್‌ ನಂಬರ್‌ ಕೂಡ ನಮೂದಿಸಿದ್ದ. ಹೀಗಾಗಿ ಕೆಲ ದಿನಗಳಿಂದ ಸಂತ್ರಸ್ತೆ ಮೊಬೈಲ್‌ಗೆ ಅಪರಿಚಿತರು ಕರೆ ಮಾಡಿ ಅಶ್ಲೀಲವಾಗಿ ಮಾತನಾಡುತ್ತಿದ್ದರು.

ಈ ಬಗ್ಗೆ ಪರಿಶೀಲಿಸಿದಾಗ ಆರೋಪಿಯು ಅಶ್ಲೀಲ ವೆಬ್‌ಸೈಟ್‌ನಲ್ಲಿ ಸಂತ್ರಸ್ತೆಯ ಖಾಸಗಿ ಕ್ಷಣದ ಫೋಟೋ ಮತ್ತು ಮೊಬೈಲ್‌ ನಂಬರ್‌ ಹಾಕಿರುವುದು ಬೆಳಕಿಗೆ ಬಂದಿತ್ತು. ಈ ಬಗ್ಗೆ ಯಶವಂತಪುರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರಿನ ಆಧಾರದ ಮೇಲೆ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಜಾಲತಾಣ, ಪ್ರೇಯಸಿ ಚಿತ್ರ, ಬಿಡುಗಡೆ, ಆರೋಪಿ ಸೆರೆ, Lover photo, released, website, Accused arrested

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.