ಮಳೆ ಬರದಿದ್ದರೆ ಭಾಗ್ಯವಂತಿ ದೇವಿ ಪೂಜೆಗೂ ನೀರಿಲ್ಲ!

ಭೀಮಾ ನದಿ ಖಾಲಿಯಾಗಿದ್ದರಿಂದ ಎದುರಾಗಿದೆ ಸಮಸ್ಯೆ

Team Udayavani, May 23, 2019, 9:54 AM IST

23-May-1

ಅಫಜಲಪುರ: ಘತ್ತರಗಿಯಲ್ಲಿ ಭೀಮಾ ನದಿ ನೀರಿಲ್ಲದೆ ಒಣಗಿ ಹೋಗಿರುವುದು.

ಅಫಜಲಪುರ: ಇನ್ನೂ ಹದಿನೈದು ದಿನದಲ್ಲಿ ಮಳೆಯಾಗದಿದ್ದರೆ ಭಾಗ್ಯವಂತಿ ದೇವಿ ಪೂಜೆಗೂ ನೀರು ಸಿಗದ ಪರಿಸ್ಥಿತಿ ನಿರ್ಮಾಣವಾಗಲಿದೆ.

ತಾಲೂಕಿನ ಘತ್ತರಗಿಯಲ್ಲಿರುವ ಪುಣ್ಯಕ್ಷೇತ್ರ ಭಾಗ್ಯವಂತಿ ದೇವಿ ದೇವಸ್ಥಾನಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸುವ ಭಕ್ತರು ಭೀಮಾ ನದಿಯಲ್ಲಿ ಪುಣ್ಯಸ್ನಾನ ಮಾಡುತ್ತಾರೆ. ಆದರೆ ನದಿಯಲ್ಲಿ ನೀರಿಲ್ಲದೆ ಬತ್ತಿ ಹೋಗಿದ್ದರಿಂದ ಪುಣ್ಯಸ್ನಾನ ಮಾತ್ರವಲ್ಲ ಕುಡಿಯಲು ಸಹ ನೀರು ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ. ಭಾಗ್ಯವಂತಿ ದೇವಿಗೂ ಸಹ ನದಿ ನೀರಿನಿಂದಲೇ ಪವಿತ್ರ ಪೂಜೆ ಮಾಡಲಾಗುತ್ತದೆ. ಆದರೆ ನದಿಯಲ್ಲಿ ನೀರಿಲ್ಲದ್ದರಿಂದ ಪೂಜೆಗೂ ಕಷ್ಟ ಪಡುವಂತಾಗಿದೆ. ಹೀಗಾಗಿ ಹದಿನೈದು ದಿನದಲ್ಲಿ ಮಳೆಯಾಗದಿದ್ದರೆ ಭಾಗ್ಯವಂತಿಯ ಪೂಜೆಗೂ ನೀರಿಲ್ಲದಂತಾಗಲಿದೆ.

ಘತ್ತರಗಿ ಭಾಗ್ಯವಂತಿ ದೇವಸ್ಥಾನ ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟಿದೆ. ದೇವಸ್ಥಾನದಲ್ಲಿ ದೇವಿ ಪೂಜೆಗೂ ನೀರಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ಧಾರ್ಮಿಕ ದತ್ತಿ ಇಲಾಖೆ ಯಾವ ಕ್ರಮ ಕೈಗೊಳ್ಳುತ್ತದೆ. ಪೂಜೆಗೆ ಹಾಗೂ ಇಲ್ಲಿಗೆ ಬರುವ ಭಕ್ತರಿಗೆ ನೀರಿನ ವ್ಯವಸ್ಥೆ ಹೇಗೆ ಮಾಡುತ್ತದೆ ಎಂದು ಭಕ್ತರು ಹಾಗೂ ಘತ್ತರಗಿ ಗ್ರಾಮಸ್ಥರು ಎದುರು ನೋಡುತ್ತಿದ್ದಾರೆ.

ಭೀಮಾ ನದಿಯಲ್ಲಿ ಎಷ್ಟು ಆಳಕ್ಕೆ ಅಗೆದರೂ ನೀರು ಬರುತ್ತಿಲ್ಲ. ಅಂತರ್ಜಲ ಮಟ್ಟ ತೀರಾ ಕುಸಿದು ಹೋಗಿದೆ. ಹೀಗಾಗಿ ಘತ್ತರಗಿಯಲ್ಲಿ ನೀರಿಗೆ ಬರ ಬಂದಿದೆ. ಸದ್ಯ ಭಾಗ್ಯವಂತಿ ದೇವಸ್ಥಾನದ ದಾಸೋಹ ಮಂದಿರ ಹೊರತುಪಡಿಸಿ ಉಳಿದೆಲ್ಲೆಡೆ ನೀರಿನ ಸಮಸ್ಯೆ ತಲೆದೋರಿದೆ. ಭೀಮೆಗೆ ಪ್ರತಿ ವರ್ಷ ನೀರಿನ ಕೊರತೆ ಕಾಡುತ್ತಿದೆ. ಘತ್ತರಗಿಯಲ್ಲಿ ನಿರ್ಮಿಸಲಾಗಿರುವ ಬ್ರೀಜ್‌ ಕಂ ಬ್ಯಾರೇಜ್‌ನ ಗೇಟ್‌ಗಳು ಸರಿಯಾಗಿ ದುರಸ್ತಿ ಮಾಡಿಸಿ ನೀರು ಹಿಡಿದಿಟ್ಟರೆ ಬೇಸಿಗೆಯಲ್ಲಿ ಯಾವ ಸಮಸ್ಯೆಯೂ ಆಗುತ್ತಿರಲಿಲ್ಲ. ಧಾರ್ಮಿಕ ದತ್ತಿ ಇಲಾಖೆ, ಜಿಲ್ಲಾಡಳಿತ, ತಾಲೂಕು ಆಡಳಿತ, ಶಾಸಕರು, ಗ್ರಾಪಂ ಹಾಗೂ ಜನಪ್ರತಿನಿಧಿಗಳು ಯಾವ ರೀತಿಯ ಕ್ರಮ ಕೈಗೊಂಡು ನೀರಿನ ವ್ಯವಸ್ಥೆ ಕಲ್ಪಿಸುತ್ತಾರೋ ಕಾದು ನೋಡಬೇಕಾಗಿದೆ.

ನಾವು ದೂರದ ಊರುಗಳಿಂದ ಸುಡು ಬಿಸಿಲಲ್ಲಿ ಭಾಗ್ಯವಂತಿ ದರ್ಶನಕ್ಕೆ ಬಂದರೆ ಇಲ್ಲಿ ಕುಡಿಯಲು ನೀರಿನ ಸಮಸ್ಯೆ ಇದೆ. ನಾವು ಹಣ ಕೊಟ್ಟು ಬಾಟಲ್ ನೀರು ಕುಡಿಯಬೇಕಾದ ಪರಿಸ್ಥಿತಿ ಇದೆ. ಸಂಬಂಧ ಪಟ್ಟವರು ಕೂಡಲೇ ಕುಡಿಯುವ ನೀರಿನ ಸೌಕರ್ಯ ಕಲ್ಪಿಸಬೇಕು ಎಂದು ಭಕ್ತರು ಆಗ್ರಹಿಸಿದ್ದಾರೆ.

ಭಾಗ್ಯವಂತಿ ದೇವಸ್ಥಾನದ ನೀರಿನ ಸಮಸ್ಯೆ ಬಗ್ಗೆ ಅಲ್ಲಿನ ಅಧಿಕಾರಿಗಳು ಗಮನಕ್ಕೆ ತಂದಿದ್ದಾರೆ. ಮೇ 23ರಿಂದಲೇ ಒಂದು ಟ್ಯಾಂಕರ್‌ ನೀರಿನ ವ್ಯವಸ್ಥೆ ಕಲ್ಪಿಸಲಾಗುವುದು.
ಮಧುರಾಜ್‌ ಕೂಡಲಗಿ,
ತಹಶೀಲ್ದಾರ್‌ ಅಫಜಲಪುರ

ಶುಕ್ರವಾರಕ್ಕೊಮ್ಮೆ ದೇವಿ ವಿಶೇಷ ದಿನ ಇರುವುದರಿಂದ ಹೆಚ್ಚಿನ ಭಕ್ತರು ಆಗಮಿಸುತ್ತಾರೆ. ಶುಕ್ರವಾರಕ್ಕೊಮ್ಮೆ ಎರಡು ಟ್ಯಾಂಕರ್‌ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ದಿನಾಲು ಒಂದು ಟ್ಯಾಂಕರ್‌ ನೀರಿನ ಅವಶ್ಯಕತೆ ಇದೆ. ಒಂದು ಟ್ಯಾಂಕರ್‌ ನೀರು ತಂದರೆ ಸಮಸ್ಯೆ ಇರುವುದಿಲ್ಲ. ಇದರ ಬಗ್ಗೆ ಜಿಲ್ಲಾಧಿಕಾರಿಗಳು ಹಾಗೂ ತಹಶೀಲ್ದಾರ್‌ಗೆ ಮನವಿ ಮಾಡಿದ್ದೇನೆ.
•ಕೆ.ಜಿ. ಬಿರಾದಾರ,
ದೇವಸ್ಥಾನದ ಆಡಳಿತಾಕಾರಿ ಘತ್ತರಗಾ

ಮಲ್ಲಿಕಾರ್ಜುನ ಹಿರೇಮಠ

ಟಾಪ್ ನ್ಯೂಸ್

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.