ಆಲಮಟ್ಟಿ ಜಲಾಶಯ ಭರ್ತಿಗೆ ದಿನಗಣನೆ

Team Udayavani, Jul 10, 2019, 3:07 PM IST

ಆಲಮಟ್ಟಿ ಜಲಾಶಯ ಹಿನ್ನೀರಿನ ದೃಶ್ಯ.

ಆಲಮಟ್ಟಿ: ಮಹಾರಾಷ್ಟ್ರದ ಮಹಾಬಳೇಶ್ವರ ಹಾಗೂ ಕೃಷ್ಣೆಯ ಅಚ್ಚುಕಟ್ಟು ಪ್ರದೇಶದಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವುದರಿಂದ ಲಾಲ್ ಬಹಾದ್ದೂರ್‌ ಶಾಸ್ತ್ರಿ ಜಲಾಶಯಕ್ಕೆ ಒಳ ಹರಿವು ಹೆಚ್ಚುತ್ತಿದ್ದು, ಜಲಾಶಯ ಭರ್ತಿಯಾಗಲು ದಿನಗಣನೆ ಆರಂಭವಾಗಿದೆ.

519.60ಮೀ. ಎತ್ತರದ ಜಲಾಶಯದಲ್ಲಿ ಗರಿಷ್ಠ 123.081 ಟಿಎಂಸಿ ಅಡಿ ಸಂಗ್ರಹ ಸಾಮರ್ಥ್ಯ ಇದ್ದು, ಮಂಗಳವಾರ 513.200ಮೀ. ಎತ್ತರದಲ್ಲಿ 84 ಸಾವಿರ ಕ್ಯೂಸೆಕ್‌ ನೀರು ಜಲಾಶಯಕ್ಕೆ ಹರಿದು ಬರುತ್ತಿದೆ.

ಜು. 2ರಂದು ಜಲಾಶಯದಲ್ಲಿ 507.910 ಮೀ. ಎತ್ತರದಲ್ಲಿ 21.080 ಟಿಎಂಸಿ ಅಡಿ ನೀರು ಸಂಗ್ರಹವಾಗಿ ರಾತ್ರಿ 18,675 ಕ್ಯೂಸೆಕ್‌ ಒಳಹರಿವು ಆರಂಭವಾಗಿತ್ತು. ಅದರಲ್ಲಿ 405 ಕ್ಯೂಸೆಕ್‌ ನೀರನ್ನು ವಿವಿಧ ಕುಡಿಯುವ ನೀರಿಗಾಗಿ ಬಿಡಲಾಗಿತ್ತು. ಆದರೆ ಮಂಗಳವಾರ 513.200 ಮೀ.ದಲ್ಲಿ ನೀರು ಸಂಗ್ರಹವಾಗಿ 84 ಸಾವಿರ ಕ್ಯೂಸೆಕ್‌ ನೀರು ಹರಿದು ಬರುತ್ತಿದೆ. ಕೇವಲ 7 ದಿನಗಳಲ್ಲಿ 6 ಮೀ.ನಷ್ಟು ಎತ್ತರದಲ್ಲಿ 48.50 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಕುಂದಾಪುರ: ರಾಜ್ಯದ ನಿರ್ವಸಿತ ಮೀನುಗಾರರಿಗೆ ಆಶ್ರಯ ಕಲ್ಪಿಸುವ ಮತ್ಸ್ಯಾಶ್ರಯ ಯೋಜನೆಯನ್ನು ಮೀನುಗಾರರ ಬೇಡಿಕೆಯಂತೆ ರಾಜೀವ್‌ ಗಾಂಧಿ ವಸತಿ ನಿಗಮದ ಬದಲು ಮತ್ತೆ...

  • ಮುಖ್ಯವಾಹಿನಿ ರಾಜಕೀಯ ಪಕ್ಷಗಳಿಗೆ ಆಟದ ಮೈದಾನವಾಗುತ್ತಿರುವ ವಿದ್ಯಾರ್ಥಿಒಕ್ಕೂಟಗಳನ್ನು ಮುಂದಿನ 10 ವರ್ಷಗಳವರೆಗೆ ನಿಷೇಧಿಸಬೇಕು. ಈ ವಿದ್ಯಾರ್ಥಿ ಒಕ್ಕೂಟಗಳಿಂದಾಗಿ...

  • ನಗದು ರಹಿತ ವಹಿವಾಟುಗಳಲ್ಲಿ ತೊಡಗಿಸಿಕೊಳ್ಳುವರ ಪ್ರಮಾಣ ಹೆಚ್ಚುತ್ತಿದ್ದು,ಹಣ ವರ್ಗಾವಣೆ, ಬಿಲ್‌ ಪಾವತಿ ಗಳನ್ನು ಕಾರ್ಡ್‌ ಅಥವಾ ಆ್ಯಪ್‌ಗ್ಳ ಮೂಲಕ ಮಾಡುತ್ತಿದ್ದಾರೆ....

  • ಯಾವುದೇ ಚಿತ್ರರಂಗವಿರಲಿ, ಸಾಮಾನ್ಯವಾಗಿ ಸ್ಟಾರ್‌ ನಟರು ಅಲ್ಲಿನ ಹಿರಿಯ ನಿರ್ದೇಶಕರು, ಅದರಲ್ಲೂ ಸಾಕಷ್ಟು ಹಿಟ್‌ ಚಿತ್ರಗಳನ್ನು ನಿರ್ದೇಶಿಸಿ ಜನಪ್ರಿಯವಾದ...

  • ದರ್ಶನ್‌ ನಾಯಕರಾಗಿ ನಟಿಸಿರುವ "ಒಡೆಯ' ಚಿತ್ರದ ಹಾಡು, ಟ್ರೇಲರ್‌ ಈಗಾಗಲೇ ಬಿಡುಗಡೆಯಾಗಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಬಿಡುಗಡೆಯ ಹಂತದಲ್ಲಿರುವ "ಒಡೆಯ' ಬಗ್ಗೆ...