ಆಲಮಟ್ಟಿ ಜಲಾಶಯ ಪೂರ್ಣ ಭರ್ತಿಗೆ ಸನಿಹ‌

Team Udayavani, Jul 29, 2019, 10:34 AM IST

29-July-8

ಶಂಕರ ಜಲ್ಲಿ
ಆಲಮಟ್ಟಿ:
ಕೃಷ್ಣೆ ಉಗಮ ಸ್ಥಾನ ಹಾಗೂ ಮಹಾರಾಷ್ಟ್ರ ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಆಲಮಟ್ಟಿ ಲಾಲ್ ಬಹಾದ್ದೂರ್‌ ಶಾಸ್ತ್ರಿ ಜಲಾಶಯಕ್ಕೆ ಭಾರೀ ಪ್ರಮಾಣದ ನೀರು ಬರುತ್ತಿರುವುದರಿಂದ ಬಹುತೇಕ ಭರ್ತಿಗೊಂಡಿದೆ.

ಮುಂಜಾಗ್ರತಾ ಕ್ರಮವಾಗಿ ಜಲಾಶಯದ 12 ಗೇಟುಗಳಿಂದ ಹಾಗೂ ವಿದ್ಯುದ್ದಾಗಾರಗಳಿಂದ ಬಸವಸಾಗರ ಜಲಾಶಯಕ್ಕೆ ನದಿ ಮೂಲಕ ನೀರು ಬಿಡಲಾಗುತ್ತಿದೆ.

2019ನೇ ಸಾಲಿನಲ್ಲಿ ಇದೇ ಪ್ರಥಮ ಬಾರಿಗೆ ಜಲಾಶಯ ಸಂಪೂರ್ಣ ತುಂಬಿದ್ದರಿಂದ ರವಿವಾರ ಬೆಳಗ್ಗೆಯಿಂದ 6 ಗೇಟ್ ಮತ್ತು ಸಂಜೆ 12 ಗೇಟ್ ಹಾಗೂ ಕೆಪಿಸಿಎಲ್ಗಳಿಂದ ನದಿ ಪಾತ್ರಕ್ಕೆ ನೀರು ಹರಿಸಲಾಗುತ್ತಿದೆ.

ಗರಿಷ್ಠ 519.60 ಮೀ ಎತ್ತರದ ಜಲಾಶಯ ಗರಿಷ್ಠ 123.81 ಟಿಎಂಸಿ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ರವಿವಾರ ಬೆಳಗ್ಗೆ 519.350 ಮೀ. ಎತ್ತರದಲ್ಲಿ 118.727 ಟಿಎಂಸಿ ಅಡಿ ನೀರು ಸಂಗ್ರಹವಾಗಿತ್ತು.

ರವಿವಾರ ಜಲಾಶಯಕ್ಕೆ 80 ಸಾವಿರ ಕ್ಯೂಸೆಕ್‌ ನೀರು ಹರಿದು ಬರುತ್ತಿದ್ದು, ಜಲಾಶಯದ 12 ಗೇಟುಗಳ ಮತ್ತು ಕೆಪಿಸಿಎಲ್ ಹಾಗೂ ಎಲ್ಲ ಕುಡಿಯುವ ನೀರಿನ ಘಟಕ ಮತ್ತು ಆಲಮಟ್ಟಿ ಎಡದಂಡೆ ಶಾಖಾ ಕಾಲುವೆ ಮತ್ತು ಚಿಮ್ಮಲಗಿ ಏತ ನೀರಾವರಿ ಯೋಜನೆಗಳಿಗೆ 297 ಕ್ಯೂಸೆಕ್‌, ಆಲಮಟ್ಟಿ ಬಲದಂಡೆ ಶಾಖಾ ಕಾಲುವೆ ಹಾಗೂ ತಿಮ್ಮಾಪುರ ಏತ ನೀರಾವರಿ ಯೋಜನೆಯ ಡಿಸಿ-1 ಮತ್ತು 2ಗಳಿಗೆ 103 ಕ್ಯೂಸೆಕ್‌, ಮುಳವಾಡ ಏತ ನೀರಾವರಿ ಯೋಜನೆಯ ಪೂರ್ವ ಹಾಗೂ ಪಶ್ಚಿಮ ಕಾಲುವೆಗಳಿಗೆ 258 ಕ್ಯೂಸೆಕ್‌, ಸೊನ್ನ, ರೊಳ್ಳಿಮನ್ನಿಕೇರಿ ಯೋಜನೆಗೆ 20 ಕ್ಯೂಸೆಕ್‌ ಸೇರಿ ಒಟ್ಟು ಕಾಲುವೆಗಳ ಮೂಲಕ 678 ಕ್ಯೂಸೆಕ್‌ ಸೇರಿ ಒಟ್ಟು ಜಲಾಶಯದಿಂದ 1,01,078 ಕ್ಯೂಸೆಕ್‌ ನೀರನ್ನು ಹೊರ ಬಿಡಲಾಗುತ್ತಿದೆ.

ಈಗ ಅ.ಸಂಖ್ಯೆ-1ರಿಂದ 6ವರೆಗಿನ ಗೇಟುಗಳನ್ನು ಬಂದ್‌ ಮಾಡಿ 7ರಿಂದ 18 ಗೇಟ್‌ಗಳನ್ನು ಒಂದು ಮೀಟರ್‌ವರೆಗೆ ಎತ್ತರಿಸಿ ನೀರು ಹರಿಸುತ್ತಿದ್ದು ಇನ್ನುಳಿದ 8 ಗೇಟ್‌ಗಳನ್ನು ಬಂದ್‌ ಮಾಡಲಾಗಿದೆ. ಜಲಾಶಯದ ಬಲಭಾಗದ ಆಲಮಟ್ಟಿ ವಿದ್ಯುತ್‌ ಉತ್ಪಾದನಾ ಕೇಂದ್ರದ ಮೂಲಕ 42,000 ಕ್ಯೂಸೆಕ್‌ ನೀರನ್ನು ಬಿಡುತ್ತಿರುವುದರಿಂದ ಅಲ್ಲಿನ ಎಲ್ಲ ಆರು ಘಟಕಗಳಿಂದ 270 ಮೆಗಾವ್ಯಾಟ್ ವಿದ್ಯುತ್‌ ಉತ್ಪಾದಿಸಲಾಗುತ್ತಿದೆ. ನಾಳೆ ಒಳಗೆ ಒಳಹರಿವು ಇನ್ನಷ್ಟು ಹೆಚ್ಚಿದರೆ ಜಲಾಶಯದ ಗೇಟ್‌ಗಳ ಎತ್ತರ ಇನ್ನಷ್ಟು ಹೆಚ್ಚಿಸಿ ಹೊರಹರಿವು ಹೆಚ್ಚಿಸಲಾಗುವುದು ಎಂದು ಕೃಷ್ಣಾ ಭಾಗ್ಯ ಜಲ ನಿಗಮದ ಮೂಲಗಳು ತಿಳಿಸಿವೆ.

ಆಲಮಟ್ಟಿ ಲಾಲ್ ಬಹಾದ್ದೂರ್‌ ಶಾಸ್ತ್ರಿ ಜಲಾಶಯದಿಂದ ನಾರಾಯಣಪುರ ಬಸವಸಾಗರ ಜಲಾಶಯಕ್ಕೆ ನೀರು ಹರಿ ಬಿಡುತ್ತಿರುವುದರಿಂದ ನಾರಾಯಣಪುರ ಬಸವಸಾಗರ ಹಿನ್ನೀರಿನಿಂದ ಬಾಧಿತಗೊಳ್ಳುತ್ತಿದ್ದ ಗ್ರಾಮಗಳ ಜಮೀನುಗಳ ರೈತರ ಜಮೀನುಗಳಲ್ಲಿ ನೀರು ನುಗ್ಗುವ ಆತಂಕ ಮೂಡುವಂತಾಗಿದೆ. ಕಳೆದ ಬಾರಿ ಇದೇ ದಿನ ಜಲಾಶಯದಲ್ಲಿ 519.03 ಮೀ. ಎತ್ತರದಲ್ಲಿ 95.812 ಟಿಎಂಸಿ ಅಡಿ ಸಂಗ್ರಹವಾಗಿ ಒಳ ಹರಿವು 92,657 ಕ್ಯೂಸೆಕ್‌ ಜಲಾಶಯದಿಂದ 53,708 ಕ್ಯೂಸೆಕ್‌ ನೀರು ಹೊರ ಬಿಡಲಾಗುತ್ತಿತ್ತು.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.