ಕೆಬಿಜೆಎನ್‌ಎಲ್‌ ಕಚೇರಿ ಜಪ್ತಿ ಪ್ರಕ್ರಿಯೆ ಮೊಟಕು

ಪರಿಹಾರ ನೀಡದಿರುವುದಕ್ಕೆ ಕೋರ್ಟ್‌ನಿಂದ ಆದೇಶಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ಅಧಿಕಾರಿಗಳು

Team Udayavani, Nov 29, 2019, 1:12 PM IST

29-November-14

ಆಲಮಟ್ಟಿ: ಕೃಷ್ಣಾ ಮೇಲ್ದಂಡೆ ಯೋಜನೆಯ ಅನುಷ್ಠಾನಕ್ಕಾಗಿ ಸ್ವಾಧೀನ ಪಡಿಸಿಕೊಂಡ ಜಮೀನಿಗೆ ಪರಿಹಾರ ನೀಡದಿರುವುದಕ್ಕೆ ಆಲಮಟ್ಟಿಯಲ್ಲಿರುವ ಕೃ.ಮೇ.ಯೋ ವಿಶೇಷ ಭೂಸ್ವಾಧೀನಾಧಿ ಕಾರಿಗಳ ಕಚೇರಿ ಜಪ್ತಿ ಪ್ರಕ್ರಿಯೆ ಅರ್ಧಕ್ಕೆ ಮೊಟಕುಗೊಳಿಸಿದ ಘಟನೆ ಗುರುವಾರ ನಡೆಯಿತು.

ಬಸವನಬಾಗೇವಾಡಿ ತಾಲೂಕಿನ ಕವಲಗಿ ಗ್ರಾಮದ ಯಲಗೂರದಪ್ಪ ಚನ್ನರುದ್ರಪ್ಪ ಈರಗಾರ ಅವರಿಗೆ ಸೇರಿದ 2 ಎಕರೆ 3 ಗುಂಟೆ ಜಮೀನನ್ನು 1999ರಲ್ಲಿಯೇ ಕೃಷ್ಣಾ ಮೇಲ್ದಂಡೆ ಯೋಜನೆಯ ವಿವಿಧ ಯೋಜನೆಗಳಿಗೆ ಭೂಸ್ವಾಧೀನ ಮಾಡಿಕೊಳ್ಳಲಾಗಿತ್ತು. ವಶಪಡಿಸಿಕೊಂಡ ಜಮೀನಿಗೆ ಯೋಗ್ಯ ಪರಿಹಾರ ನೀಡಬೇಕೆಂದು ರೈತರು ಹಲವಾರು ಬಾರಿ ಕಚೇರಿಗೆ ಅಲೆದಾಡಿದರೂ ಪ್ರಯೋಜನವಾಗದೇ ಇರುವುದರಿಂದ ಜಮೀನಿಗೆ ಸಮರ್ಪಕ ಪರಿಹಾರಕ್ಕಾಗಿ ಬಸವನ ಬಾಗೇವಾಡಿಯ ಜೆಎಂಎಫ್‌ಸಿ ನ್ಯಾಯಾಲಯದ ಮೊರೆ ಹೋಗಿದ್ದರು.

ನ್ಯಾಯಾಲಯವು ಆಲಮಟ್ಟಿಯಲ್ಲಿರುವ ಕೃಷ್ಣಾ ಮೇಲ್ದಂಡೆ ಯೋಜನೆಯ ವಿಶೇಷ ಭೂಸ್ವಾಧೀನ ಕಚೇರಿ ಜಪ್ತಿಗೆ ಆದೇಶಿಸಿತ್ತು. ಸಂತ್ರಸ್ತ ರೈತ ಪರ ವಕೀಲರು ಹಾಗೂ ನ್ಯಾಯಾಲಯದ ಬೇಲಿಪ್‌ ವಿಶೇಷ ಭೂಸ್ವಾಧೀನಾಧಿಕಾರಿಗಳ ಕಚೇರಿ ಜಪ್ತಿಗೆ ಗುರುವಾರ ಆಗಮಿಸಿದ ವೇಳೆ ಕಚೇರಿಯ ಬಹುತೇಕ ಮಹತ್ವದ ಕೊಠಡಿಗಳಿಗೆ ಬೀಗ ಹಾಕಿ ಇನ್ನುಳಿದ ಕೊಠಡಿಗಳನ್ನು ಮಾತ್ರ ತೆರೆದಿಡಲಾಗಿತ್ತು.

ಆದರೆ ವಿಶೇಷ ಭೂ ಸ್ವಾಧೀನಾಧಿಕಾರಿಗಳ ಕಚೇರಿಯ ಸಾಮಗ್ರಿ, ವಾಹನ ಸೇರಿದಂತೆ ಹಲವಾರು ಸಾಮಗ್ರಿ ಜಪ್ತಿಗೆ ಬಸವನಬಾಗೇವಾಡಿ ಸಿವಿಲ್‌ ನ್ಯಾಯಾಲಯ ಆದೇಶಿಸಿತ್ತು. ಜಪ್ತಿಗಾಗಿ ಪೀಠೊಪಕರಣವನ್ನು ಕಚೇರಿ ಆವರಣಕ್ಕೆ ತರಲಾಗಿತ್ತು. ಅಧಿಕಾರಿಗಳ ಅಸಹಕಾರ ಕಾರಣ ಜಪ್ತಿ ನಡೆಯದೇ ಮರಳಿ ಹೋಗಬೇಕಾಯಿತು. 1999ರಲ್ಲಿಯೇ ಭೂಸ್ವಾ ಧೀನಗೊಂಡಿದ್ದ ಈ ಜಮೀನಿಗೆ 20 ವರ್ಷ ಆದರೂ ಪರಿಹಾರ ನೀಡಿರಲಿಲ್ಲ. ಇದಕ್ಕಾಗಿ ರೈತ ಯಲಗೂರದಪ್ಪ ನ್ಯಾಯಾಲಯಕ್ಕೆ ಮೊರೆ ಹೋಗಿದ್ದರಿಂದ ಬಸವನಬಾಗೇವಾಡಿ ಸಿವಿಲ್‌ ನ್ಯಾಯಾಲಯ ಈ ಪ್ರಕರಣದ ಕುರಿತಂತೆ, 2002ರಿಂದ ಇಲ್ಲಿಯವರೆಗೆ ಪರಿಹಾರ ಮೊತ್ತಕ್ಕೆ ಬಡ್ಡಿ ವಿಧಿಸಿ ಪರಿಹಾರ ನೀಡಲು ನ್ಯಾಯಾಲಯ ಆದೇಶಿಸಿತ್ತು.

ಆದರೂ ಆಲಮಟ್ಟಿಯ ವಿಶೇಷ ಭೂಸ್ವಾಧೀನ ಅಧಿಕಾರಿಗಳು ಪರಿಹಾರ ವಿತರಣೆಯಲ್ಲಿ ವಿಳಂಬ ಮಾಡಿದ್ದರು. ಸುಮಾರು 58 ಲಕ್ಷ ರೂ. ಪರಿಹಾರ ನೀಡಲು ನ್ಯಾಯಾಲಯ ಆದೇಶಿಸಿತ್ತು. ನ್ಯಾಯಾಲಯ ಆದೇಶ ಪಾಲನೆ ಮಾಡಿ ಪರಿಹಾರ ನೀಡುವಂತೆ ಸಾಕಷ್ಟು ಬಾರಿ ಆಲಮಟ್ಟಿ ವಿಶೇಷ ಭೂಸ್ವಾಧೀನಾಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಪರಿಹಾರ ನೀಡಿರಲಿಲ್ಲ. ಅದಕ್ಕಾಗಿ ಬಸವನಬಾಗೇವಾಡಿ ಸಿವಿಲ್‌ ನ್ಯಾಯಾಲಯ ಆಲಮಟ್ಟಿಯ ಕಚೇರಿ ಜಪ್ತಿಗೆ ಆದೇಶಿಸಿತ್ತು.

ಅದರಂತೆ ಜಪ್ತಿಗೆ ನ್ಯಾಯಾಲಯದ ಬೇಲಿಪ್‌, ರೈತ ಪರ ನ್ಯಾಯವಾದಿಗಳು ಬಂದರೆ, ಅಧಿಕಾರಿಗಳು ಅಸಹಕಾರ ನೀಡಿದರೆಂದು ರೈತ ಪರ ವಕೀಲ ಎಸ್‌.ಎಂ. ಚಿಂಚೋಳಿ ಹೇಳಿದರು. ನಂತರ ಎಸ್‌ಎಲ್‌ಒ ಅವರು, ಇದೇ 30 ರಂದು ಈ ಬಗ್ಗೆ ನ್ಯಾಯಾಲಯಕ್ಕೆ ಪ್ರಕರಣವಿದ್ದು, ಅಲ್ಲಿ ಹಾಜರಾಗಿ ವಿವರಣೆ ನೀಡಲಾಗುವುದು. ಅಲ್ಲಿಯವರೆಗೆ ಜಪ್ತಿ ಮುಂದೂಡುವಂತೆ ಅಧಿಕಾರಿಗಳು ಮನವಿ ಮಾಡಿದರು.

ಟಾಪ್ ನ್ಯೂಸ್

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.