ಜನ ಧಂಗೆಯೆದ್ದರೆ ಅಧಿಕಾರಿಗಳೇ ಹೊಣೆ

ಮೇವು ಕೇಂದ್ರ-ಟ್ಯಾಂಕರ್‌ ನೀರು ಸರಬರಾಜಿಗೆ ಸೂಚನೆ•ಅನುದಾನ ಕೊರತೆಯಿರುವೆಡೆ ಜಿಪಂನಿಂದ ಹಣ ನೀಡಿ

Team Udayavani, Jun 1, 2019, 12:41 PM IST

1-June-15

ಆಳಂದ: ತಾಪಂ ಕಚೇರಿಯಲ್ಲಿ ಕರೆದ ಅಧಿಕಾರಿಗಳ ಸಭೆಯಲ್ಲಿ ಶಾಸಕ ಸುಭಾಷ ಗುತ್ತೇದಾರ ಮಾತನಾಡಿದರು. ಜಿಪಂ ಅಧ್ಯಕ್ಷೆ ಸುವರ್ಣ ಎಚ್. ಮಲಾಜಿ ಇದ್ದರು.

ಆಳಂದ: ಗ್ರಾಮೀಣ ಭಾಗದಲ್ಲಿ ನೀರಿನ ಭೀಕರ ಸಮಸ್ಯೆ ತಲೆದೋರಿದ್ದು, ಕಾಲಹರಣ ಮಾಡದೆ ಸ್ಥಳಕ್ಕೆ ಭೇಟಿ ನೀಡಿ ಪರಿಹರಿಸಲು ಮುಂದಾಗದೇ ಇದ್ದಲ್ಲಿ ಜನ ಧಂಗೆಯೆದ್ದರೆ ಅಧಿಕಾರಿಗಳೇ ಹೊಣೆಯಾಗಬೇಕಾಗುತ್ತದೆ ಎಂದು ಶಾಸಕ ಸುಭಾಷ ಗುತ್ತೇದಾರ ಎಚ್ಚರಿಸಿದರು.

ಪಟ್ಟಣದ ತಾಪಂ ಕಚೇರಿಯಲ್ಲಿ ಕರೆದ ನೀರು ನಿರ್ವಾಹಣ ಸಮಿತಿ (ಕೆಆರ್‌ಸಿಟಿ) ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಟ್ಯಾಂಕರ್‌ ನೀರು ಪೂರೈಕೆ ಇರುವೆಡೆ ಸಮರ್ಪಕವಾಗಿ ನೀರು ಒದಗಿಸಲು ಕ್ರಮ ಕೈಗೊಳ್ಳಿ. ಅಲ್ಲದೆ, ಅಗತ್ಯವಿರುವ ಹಳ್ಳಿ ಮತ್ತು ತಾಂಡಾಗಳಿಗೆ ಅಧಿಕಾರಿಗಳು ಭೇಟಿ ನೀಡಿ ಟ್ಯಾಂಕರ್‌ ನೀರು ಒದಗಿಸಬೇಕು ಎಂದರು.

ಮಳೆ ಬಾರದಿರುವುದರಿಂದ ಅಂತರ್ಜಲಮಟ್ಟ ಕುಸಿದು ನೀರಿನ ಮೂಲವೇ ಬತ್ತಿಹೋಗಿವೆ. ಇದರಿಂದ ಜನ ಜಾನುವಾರು ನೀರಿಗಾಗಿ ಪರಿತಪಿಸುವಂತ ಪರಿಸ್ಥಿತಿ ಎದುರಾಗಿದೆ. ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಕೇಂದ್ರಸ್ಥಾನ ಬಿಟ್ಟು ಕದಲದೆ ತುರ್ತು ನಿರ್ವಹಣೆ ಕಾರ್ಯ ಹಾಗೂ ಉದ್ಯೋಗ ಖಾತ್ರಿ ಕೆಲಸ ಪ್ರಾರಂಭಿಸಬೇಕು ಎಂದರು.

ಕುಡಿಯುವ ನೀರಿಗಾಗಿ ನಿರಂತರ ವಿದ್ಯುತ್‌ ಪೂರೈಕೆ ಮಾಡಬೇಕು ಎಂದು ಜೆಸ್ಕಾಂ ಅಧಿಕಾರಿಗೆ ಸೂಚಿಸಿದರು. ಈ ಮಧ್ಯೆ ತಹಶೀಲ್ದಾರ್‌ ಎಂ.ಎನ್‌. ಚೋರಗಸ್ತಿ ಅವರು ಖಜೂರಿ ಮತ್ತು ಆಳಂದನಲ್ಲಿ ಮೇವು ಕೇಂದ್ರ ಪ್ರಾರಂಭಿಸಲಾಗಿದೆ ಎಂದು ಸಭೆ ಗಮನಕ್ಕೆ ತಂದರು. ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಶಾಸಕರು ಯಾವಾಗ ಮೇವು ಕೇಂದ್ರ ಪ್ರಾರಂಭಿಸಲಾಗಿದೆ. ಪತ್ರಿಕೆಯಲ್ಲಿ ಈ ಕುರಿತು ಯಾಕೆ ಮಾಹಿತಿ ನೀಡಿಲ್ಲ. ತಾಲೂಕಿನ ಐದು ಹೋಬಳಿಯಲ್ಲೂ ಮೇವು ಕೇಂದ್ರ ಪ್ರಾರಂಭಿಸಿ, ಪಶು ಪಾಲಕರಿಗೆ ಮೇವು ಒದಗಿಸಬೇಕು ಎಂದು ಆದೇಶಿಸಿದರು.

ಗ್ರಾಮೀಣ ನೀರು ಸರಬರಾಜು ಇಲಾಖೆಯ ಎಇಇ ಸಂಗಮೇಶ ಬಿರಾದಾರ ಮಾತನಾಡಿ, ಸಮಸ್ಯೆ ಇರುವ ಕಡೆ ಟ್ಯಾಂಕರ್‌ ಮೂಲಕ ನೀರು ಒದಗಿಸಲಾಗುತ್ತಿದೆ. ಕೆಲವಡೆ ಪೈಪಲೈನ್‌ ಕೈಗೊಳ್ಳಲಾಗಿದೆ. ತೀವ್ರ ಸಮಸ್ಯೆ ಅರಿತು ಅನುಮತಿ ಇಲ್ಲದೆ ಕೆಲವು ಕಡೆ ಗ್ರಾಪಂ ಅಧ್ಯಕ್ಷರು, ಅಭಿವೃದ್ಧಿ ಅಧಿಕಾರಿಗಳು ಸೇರಿ ಟ್ಯಾಂಕರ್‌ ನೀರು ಒದಗಿಸಿದ್ದಾರೆ. ಅನುಮತಿ ಇಲ್ಲದ್ದಕ್ಕೆ ಬಿಲ್ ಪಾವತಿಗೆ ತೊಂದರೆ ಆಗುತ್ತದೆ. ಅನುಮತಿ ಇಲ್ಲದೆ ಟ್ಯಾಂಕರ್‌ ಬಳಸಿದ್ದಲ್ಲಿ ಗ್ರಾಪಂನಿಂದ ಬಿಲ್ ಪಾವತಿಸಲು ಅವಕಾಶವಿದೆ ಎಂದಾಗ ಮಧ್ಯ ಪ್ರವೇಶಿಸಿದ ಶಾಸಕರು ಅನುದಾನ ಕೊರತೆಯಲ್ಲಿರುವ ಗ್ರಾಪಂಗೆ ಟ್ಯಾಂಕರ್‌ ಬಿಲ್ ಪಾವತಿಸುವುದು ಅಸಾಧ್ಯವಾಗಿದೆ. ಜಿಪಂನಿಂದಲೇ ಹಣ ಒದಗಿಸಬೇಕು ಎಂದು ಮೊಬೈಲ್ ಮೂಲಕ ಜಿಪಂ ಅಧಿಕಾರಿಗಳಿಗೆ ಗಮನಕ್ಕೆ ತಂದರು.

ಪಶು ಸಂಗೋಪನಾ ಸಹಾಯಕ ನಿರ್ದೇಶಕ ಡಾ| ಸಂಜಯ ರೆಡ್ಡಿ ಮಾತನಾಡಿ, ಜಾನುವಾರುಗಳಿಗೆ ನೀರು, ಮೇವಿನ ಕುರಿತು ಮತ್ತು ಉದ್ಯೋಗ ಖಾತ್ರಿ ಸಹಾಯಕ ನಿರ್ದೇಶಕ ಮೊಹ್ಮದ್‌ ಸಲೀಂ ಮಾಹಿತಿ ನೀಡಿದರು.

ಜಿಪಂ ಅಧ್ಯಕ್ಷೆ ಸುವರ್ಣ ಎಚ್. ಮಲಾಜಿ, ಸದಸ್ಯರಾದ ಹರ್ಷಾನಂದ ಗುತ್ತೇದಾರ, ಸಿದ್ಧರಾಮ ಪ್ಯಾಟಿ, ಗುರುಶಾಂತ ಪಾಟೀಲ, ಶರಣಗೌಡ ಪಾಟೀಲ, ವಿಜಯಲಕ್ಷ್ಮೀ ರಾಗಿ, ತೈನಿನ ಬೇಗಂ, ಮುಖಂಡ ಮಲ್ಲಣ್ಣಾ ನಾಗೂರೆ ತಮ್ಮ ಕ್ಷೇತ್ರಗಳಲ್ಲಿನ ನೀರಿನ ಸಮಸ್ಯೆಗೆ ಅಗತ್ಯ ಕ್ರಮಕ್ಕೆ ಕೋರಿದರು.

ತಾಪಂ ಇಒ ಅನಿತಾ ಕೊಂಡಾಪುರ, ಮಾದನಹಿಪ್ಪರಗಾ ಪಿಡಿಒ ಬಾಬುಗೌಡ ಪಾಟೀಲ, ಶಿವಶಣಪ್ಪ ಬೋಟೆ, ಮಂಜುರ ಪಟೇಲ, ಗ್ರಾಪಂ ಅಧ್ಯಕ್ಷ ಸಿದ್ಧಾರೂಢ ಬುಜುರ್ಕೆ, ಭೀಮಾಶಂಕರ ಖಂಡಾಳೆ ಹಾಗೂ ಗ್ರಾಪಂ ಅಭಿವೃದ್ಧಿ ಅಧಿಕಾರಿ ಮತ್ತು ಆಯ್ದ ಅಧ್ಯಕ್ಷರು ಹಾಜರಿದ್ದರು.

ಟಾಪ್ ನ್ಯೂಸ್

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.