ಪ್ರವಾಹಕ್ಕೆ ಚಿತ್ತರಗಿ ತಲ್ಲಣ

ವಿಜಯ ಮಹಾಂತೇಶ್ವರ ಮೂಲ ಮಠ, ಗ್ರಾಪಂ ಕಟ್ಟಡ ಜಲಾವೃತ

Team Udayavani, Oct 24, 2019, 3:27 PM IST

24-October-17

ಅಮೀನಗಡ: ಮಲಪ್ರಭಾ ನದಿ ಪ್ರವಾಹಕ್ಕೆ ಸಮೀಪದ ಚಿತ್ತರಗಿ ಗ್ರಾಮದ ಜನ ಅಕ್ಷರಶಃ ನಲುಗಿ ಹೋಗಿದ್ದಾರೆ. ಕಳೆದ ಆಗಸ್ಟ್‌ ತಿಂಗಳಲ್ಲಿ ಮಲಪ್ರಭಾ ನದಿ ಭೀಕರ ಪ್ರವಾಹದಿಂದ ತಲ್ಲಣಗೊಂಡಿದ್ದ ಚಿತ್ತರಗಿ ಗ್ರಾಮದ ಜನ ಈಗ ಮತ್ತೂಮ್ಮೆ ಗ್ರಾಮಕ್ಕೆ ಪ್ರವಾಹದ ನೀರು ನುಗ್ಗಿದ್ದರಿಂದ ಭಯಭೀತರಾಗಿದ್ದಾರೆ.

ಮಂಗಳವಾರ ಸಂಜೆವರೆಗೆ ಗ್ರಾಮದಲ್ಲಿ ಕ್ಷಣಕ್ಕೊಮ್ಮೆ ನೀರು ಹೆಚ್ಚಾಗುತ್ತ ಹೋಗಿದೆ. ಆದರೆ ರಾತ್ರಿ ಪ್ರವಾಹ ನೀರು ಬರುವುದಿಲ್ಲ ಎಂದು ತಿಳಿದಿದ್ದ ಗ್ರಾಮಸ್ಥರಿಗೆ ರಾತ್ರಿಯಿಂದಲೇ ಬುಧವಾರ ಬೆಳಗಿನವರೆಗೂ ಬಂದ ಪ್ರವಾಹ ನೀರು ಗ್ರಾಮಕ್ಕೆ ನುಗ್ಗಿದೆ. ಗ್ರಾಪಂ ಕಟ್ಟಡ ಸಂಪೂರ್ಣ ನೀರಿನಲ್ಲಿ ಮುಳುಗಡೆಯಾಗಿದೆ. ವಿವಿಧ ಮಳಿಗೆಗೆಳು, ಬಸ್‌ ನಿಲ್ದಾಣ, ಸರ್ಕಾರಿ ಪ್ರಾಥಮಿಕ
ಆರೋಗ್ಯ ಕೇಂದ್ರ, ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು, ಹಾಸ್ಟೆಲ್‌, ವಿವಿಧ ಬ್ಯಾಂಕುಗಳು ಪ್ರವಾಹ ನೀರಿನಿಂದ ಜಲಾವೃತಗೊಂಡಿದ್ದು, ಆತಂಕದ ವಾತಾವರಣ ಸೃಷ್ಟಿಯಾಗಿದೆ.

ಹಬ್ಬದ ಸಂಭ್ರಮ ಕಸಿದ ಪ್ರವಾಹ: ದೀಪಾವಳಿ ಹಬ್ಬದ ತಯಾರಿಯಲ್ಲಿದ್ದ ಗ್ರಾಮಸ್ಥರಿಗೆ ಮಂಗಳವಾರ ರಾತ್ರಿಯಿಂದ ಬುಧವಾರ ಬೆಳಗಿನವರೆಗೂ ಹರಿದ ಪ್ರವಾಹದ ಭೋರ್ಗರತೆ ನೀರು, ಆಗಸ್ಟ್‌ ತಿಂಗಳಿನಲ್ಲಿ ಬಂದು ಹೋದ ಪ್ರವಾಹದ ಕಹಿ ಘಟನೆ ಮತ್ತೆ ಮರುಕಳಿಸಿದೆ. ಇದರಿಂದ ಗ್ರಾಮದಲ್ಲಿ ಗಂಜಿಕೇಂದ್ರ ಸ್ಥಾಪಿಸಲಾಗಿದ್ದು, ಜನ ಗಂಜಿಕೇಂದ್ರದತ್ತ ಮುಖ ಮಾಡಿದ್ದಾರೆ.

ಈಗಾಗಲೇ 30ಕ್ಕೂ ಹೆಚ್ಚು ಮನೆಗಳಿಗೆ ಪ್ರವಾಹದ ನೀರು ನುಗ್ಗಿದೆ. ನೂರಾರು ಕುಟುಂಬಗಳು ಸುರಕ್ಷಿತ ಸ್ಥಳಗಳಿಗೆ ತೆರಳಿದ್ದಾರೆ. ಸ್ಥಳಕ್ಕೆ ಎಸಿ ಭೇಟಿ: ಬುಧವಾರ ಬೆಳಗ್ಗೆ ಬಾಗಲಕೋಟೆ ಉಪವಿಭಾಗಾಧಿ ಕಾರಿ ಎಂ.ಗಂಗಪ್ಪ, ತಹಶೀಲ್ದಾರ್‌ ಆನಂದ ಕೋಲಾರ ಚಿತ್ತರಗಿ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚನೆ ನೀಡಿದ್ದಾರೆ.

ಸಂಚಾರ ಬಂದ್‌: ಮಂಗಳವಾರ ರಾತ್ರಿಯಿಂದ ಬುಧವಾರ ಬೆಳಗಿನವರೆಗೂ ಹರಿದ ಪ್ರವಾಹದ ನೀರಿನಿಂದ ಚಿತ್ತರಗಿಯಿಂದ ಗಂಗೂರ, ಚಿತ್ತರಗಿಯಿಂದ ಕೂಲಸಂಗಮ ರಸ್ತೆ ಜಲಾವೃತವಾಗಿದ್ದು, ರಸ್ತೆ ಸಂಚಾರ ಸಂಪೂರ್ಣ ಬಂದ್‌ ಆಗಿದೆ. ಹೊರ ವಲಯಗಳಿಗೆ ಸಾರ್ವಜನಿಕರು ಪ್ರಯಾಣಿಸುವ ಎಲ್ಲ ಹೆದ್ದಾರಿ ಬಂದ್‌ ಆಗಿವೆ.

ಟಾಪ್ ನ್ಯೂಸ್

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ದೇಶಪಾಂಡೆ ಸಾವು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ಕೆ.ಎಸ್‌. ದೇಶಪಾಂಡೆ ಸಾವು

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

4-bgl

Theft: ಅಮೀನಗಡದ ದೇವಸ್ಥಾನದಲ್ಲಿ ಕಳ್ಳತನ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.