ಮುಂಗಾರಿಗೆ ನೆರೆ-ಹಿಂಗಾರಿಗೆ ಬರ

ರೈತರಿಗೆ ತಪ್ಪದ ಸಂಕಷ್ಟ•ರೈತರ ಬೆಳೆ ನೀರಿನಲ್ಲಿ ಕೊಚ್ಚಿ ಹೋಗಿ ಬದುಕಿನಲ್ಲಿ ಆವರಿಸಿದೆ ಕತ್ತಲು

Team Udayavani, Aug 12, 2019, 1:27 PM IST

12-Agust-31

ಅಂಕೋಲಾ: ನೆರೆ ಪೀಡಿತ ಕೃಷಿ ಭೂಮಿ.

ಅರುಣ ಶೆಟ್ಟಿ
ಅಂಕೋಲಾ:
ಹಿಂಗಾರು ಬೆಳೆಗೆ ಬರ ಮುಂಗಾರು ಬೆಳೆಗೆ ನೆರೆ ಸಂಕಷ್ಟ ಇದರಿಂದಾಗಿ ರೈತರ ಬೆಳೆ ನೀರಿನಲ್ಲಿ ಕೊಚ್ಚಿ ಹೊಗಿ ಬದುಕಿನಲ್ಲಿ ಕತ್ತಲಾವರಿಸಿದೆ. ತಾಲೂಕಿನಲ್ಲಿ ಸಾವಿರಾರು ಎಕರೆ ಕೃಷಿ ಬೆಳೆ ಹಾನಿಯಾಗಿದೆ.

ಕಳೆದೊಂದು ವಾರದಿಂದ ಅಬ್ಬರಿಸಿದ ಆಶ್ಲೇಷಾ ಮಳೆಗೆ ಜೀವನದಿ ಗಂಗಾವಳಿ ತಟದ ಪ್ರದೇಶ ವಾಸಿಗಳ ಬದುಕು ಹೈರಾಣಾಗಿದೆ. ನರೆ ಇಳಿದಿದೆ. ಆದರೆ ಎಲ್ಲವನ್ನು ತನ್ನೊಡಲಿಗೆ ಸೇರಿಸಿಕೊಂಡಿದೆ. ಹೊಲಗದ್ದೆಯಲ್ಲಿ ಬತ್ತದ ಸಸಿ ಕಾಣುವಲ್ಲಿ ರಾಡಿ ಮಣ್ಣಿನ ರಾಶಿಯೆ ಕಾಣುತ್ತಿದೆ. ಇದರಿಂದಾಗಿ ತಾಲೂಕಿನಲ್ಲಿ ಸುಮಾರು ಶೇ.60 ರಷ್ಟು ಕೃಷಿ ಬೆಳೆ ನಾಶವಾಗಿ ಕೊಟ್ಯಂತರ ರೂ. ಹಾನಿ ಉಂಟಾಗಿದೆ ಎಂದು ಪ್ರಾಥಮಿಕ‌ ವರದಿಯಲ್ಲಿ ತಿಳಿದಿದೆ.

ನೀರು ಪಾಲಾದ ಭತ್ತ: ರೈತನಿಗೆ ಕೃಷಿಯೆ ಜೀವಾಳ. ಮಳೆ ಅಬ್ಬರದಿಂದಾಗಿ ಶ್ರಮಪಟ್ಟು ಬಿತ್ತಿದ ಭತ್ತದ ಸಸಿಗಳು ನೀರು ಪಾಲಾಗಿದೆ. ಕಬ್ಬು ನೆಲಕ್ಕೆ ಹಾಸಿ ಮಲಗಿದೆ. ಅಡಕೆ ಬಾಳೆ ಗಿಡಗಳು ಕೊಚ್ಚಿ ಹೋಗಿದೆ. ಹೀಗೆ ಎಲ್ಲವು ಅನ್ನದಾತನ ಕೈಗೆ ಕೊಡಲಿ ಏಟು ನೀಡಿದ್ದು, ಜೀವನ ನಿರ್ವಹಣೆ ಹೇಗೆ ಎಂಬ ಚಿಂತೆ ಮನೆ ಮಾಡಿದೆ.

ಜೀವನದಿ ಗಂಗಾವಳಿಗೆ ಪ್ರವಾಹ ಅಬ್ಬರಿಸಿದೆ. ಬಡತನದ ನಡುವೆಯೇ ಚಿಕ್ಕ ಸೂರು ಕಟ್ಟಿಕೊಂಡ ಜನತೆಗೆ ವರುಣನ ಆರ್ಭಟ ನಲಗುವಂತೆ ಮಾಡಿದೆ. ತಾಲೂಕಿನಲ್ಲಿ 50ಕ್ಕೂ ಹೆಚ್ಚು ಮನೆಗಳು ನೆಲಕಚ್ಚಿದ್ದು, ಸಂತ್ರಸ್ತರನ್ನು ಅನಾಥರನ್ನಾಗಿಸಿದೆ.

ತುತ್ತು ಅನ್ನಕ್ಕೂ ತತ್ವಾರ: ತಾಲೂಕಾಡಳಿತ ತೆರೆದ ಗಂಜಿ ಕೇಂದ್ರವು, ನೆರೆ ಇಳಿಯವವರೆಗೆ ಅನ್ನ, ಆಶ್ರಯ ನೀಡಲಿದೆ. ನಂತರ ಸಂತ್ರಸ್ತರು ತಾವು ಕಟ್ಟಿಕೊಂಡ ಸೂರಿಗೆ ಹೋಗಲೇಬೇಕು. ಆದರೆ ಇರುವ ಸೂರು ಸಹ ಪಾತಾಳಕ್ಕೆ ಮುಖ ಮಾಡಿದೆ. ಹೋಗುವುದಾದರು ಎಲ್ಲಿಗೆ ಎಂಬ ಚಿಂತೆ ಕಾಡತೊಡಗಿದೆ. ಸರಕಾರ ಸಮಿಕ್ಷೆ ನಡೆಸಿ ವರದಿ ನೀಡಿ ಪರಿಹಾರ ನೀಡುವುದು ತಿಂಗಳು ಕಳೆಯುತ್ತದೆ. ಅಲ್ಲಿವರೆಗೆ ಆಶ್ರಯವಿಲ್ಲದೆ ಪರದಾಡುವ ಪರಿಸ್ಥಿತಿ ಎದುರಾಗಿದೆ. ಇರುವ ಆಹಾರ ಪದಾರ್ಥಗಳು ನೀರಿಗೆ ಕೊಚ್ಚಿ ಹೋಗಿ, ಹೊಟ್ಟೆಯ ಮೇಲೆ ತಣ್ಣೀರು ಪಟ್ಟಿ ಎಂಬ ಗತಿಯಾಗಿದೆ.

ಮನಕಲುಕುವ ಸ್ಥಿತಿ: ನೆರೆ ಪ್ರದೇಶಗಳಿಗೆ ಭೇಟಿ ನೀಡಿದಾಗ, ಅಲ್ಲಿನ ಕರುಣಾಜನಕ ಸ್ಥಿತಿ ಎಂಥವರನ್ನು ಮನಕಲುಕಿಸುವಂತೆ ಮಾಡಿತ್ತು. ಬಿದ್ದ ಮನೆಯ ಆವಾರದಲ್ಲಿ ಗೂಡಿನ ಅಂಚಿನಲ್ಲೆ ಮುದುಡಿಕೊಂಡು, ಪ್ಲಾಸ್ಟಿಕ್‌ ಹೊದಿಕೆಯಲ್ಲೆ ಆಶ್ರಯ ಪಡೆದಿದ್ದು ಮಮ್ಮಲಮರಗುವಂತೆ ಮಾಡುತ್ತದೆ.

ಈ ನೆರೆ ಕರುಳ ಬಳ್ಳಿಯ ಸಂಬಂಧಕ್ಕೂ ಭಂಗ ತಂದಿದೆ. ತಂದೆ- ತಾಯಿ ಒಂದೆಡೆ, ಮಕ್ಕಳು ಯಾರೋ ಸಂಬಂಧಿಕರ ಮನೆಯಲ್ಲಿ ಇರುವುದು ಕಂಡು ಬಂದಿದೆ.

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

1-weqwwqe

Joida Tragedy: ನದಿಗಿಳಿದ ಒಂದೇ ಕುಟುಂಬದ 6 ಮಂದಿ ಮೃತ್ಯು!

shiv Hebbar

BJP ಪರ ಪ್ರಚಾರಕ್ಕೆ ಹೋಗಲ್ಲ: ಶಾಸಕ ಶಿವರಾಮ್‌ ಹೆಬ್ಬಾರ್

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.