ಕೃಷ್ಣಾ-ಘಟಪ್ರಭಾ ಆರ್ಭಟ

ಜಿಲ್ಲೆಯ 131 ಗ್ರಾಮಗಳಲ್ಲಿ ಪ್ರವಾಹ•ಕೃಷ್ಣಾ ನದಿಗೆ ಹರಿದು ಬರುತ್ತಿದೆ 4 ಲಕ್ಷ ಕ್ಯೂಸೆಕ್‌ ನೀರು

Team Udayavani, Aug 8, 2019, 11:43 AM IST

8–Agust-21

ಬಾಗಲಕೋಟೆ: ರೈತರೇ ಕಟ್ಟಿದ ಚಿಕ್ಕಪಡಸಲಗಿ ಬ್ಯಾರೇಜ್‌ ಬಳಿಯ ವಿಜಯಪುರ-ಧಾರವಾಡ ರಾಜ್ಯ ಹೆದ್ದಾರಿ ಹತ್ತಿರ ಕೃಷ್ಣಾ ನದಿ ತುಂಬಿ ಹರಿಯುತ್ತಿರುವುದು

ಶ್ರೀಶೈಲ ಬಿರಾದಾರ
ಬಾಗಲಕೋಟೆ:
ಕಳೆದೊಂದು ವಾರದಿಂದ ಕೃಷ್ಣಾ ನದಿಯಲ್ಲಿ ಮಾತ್ರ ಉಂಟಾಗಿದ್ದ ಪ್ರವಾಹ ಬುಧವಾರದಿಂದ ಮಲಪ್ರಭಾ ಹಾಗೂ ಘಟಪ್ರಭಾ ನದಿಗಳಿಗೂ ವಿಸ್ತರಿಸಿದೆ. ಜಿಲ್ಲೆಯ ಮೂರು ನದಿಗಳಲ್ಲೂ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಆರು ತಾಲೂಕಿನ 131 ಗ್ರಾಮಗಳ ಜನರು ಅತಂತ್ರ ಬದುಕು ಸಾಗಿಸುತ್ತಿದ್ದಾರೆ.

ಕೃಷ್ಣಾ ನದಿಗೆ ಬುಧವಾರ 3,46,567 ಕ್ಯೂಸೆಕ್‌, ಘಟಪ್ರಭಾ ನದಿಗೆ 1.72 ಲಕ್ಷ ಕ್ಯೂಸೆಕ್‌ ನೀರು ಹರಿದು ಬರುತ್ತಿದೆ. ಈ ಎರಡೂ ನದಿಗಳ ನೀರು ಆಲಮಟ್ಟಿ ಜಲಾಶಯ ಸೇರುತ್ತಿದ್ದು, ಆಲಮಟ್ಟಿಯಿಂದ 4 ಲಕ್ಷ ಕ್ಯೂಸೆಕ್‌ ನೀರು ಹೊರ ಬಿಡಲಾಗುತ್ತಿದೆ. ಆಲಮಟ್ಟಿ ಜಲಾಶಯದ ಹಿನ್ನೀರು ಬಾಗಲಕೋಟೆ, ಬೀಳಗಿ, ಜಮಖಂಡಿ ತಾಲೂಕಿನ ಹಲವು ಹಳ್ಳಿಗಳು ಬಾಧಿತಗೊಂಡಿವೆ.

13 ಸೇತುವೆ ಜಲಾವೃತ: ಮಲಪ್ರಭಾ ನದಿಗೆ 45 ಸಾವಿರ ಕ್ಯೂಸೆಕ್‌ ನೀರು ಹರಿದು ಬರುತ್ತಿದ್ದು, ಬಾದಾಮಿ ತಾಲೂಕಿನ 27 ಹಳ್ಳಿಗಳು ಪ್ರವಾಹಕ್ಕೆ ಒಳಗಾಗುವ ತೀವ್ರ ಭೀತಿಯಲ್ಲಿವೆ. ಬುಧವಾರ ಘಟಪ್ರಭಾ ನದಿ ಪಾತ್ರದ ಯಾದವಾಡ-ಮುಧೋಳ ರಾಜ್ಯ ಹೆದ್ದಾರಿಯ ಸೇತುವೆ ಮೇಲೆ ನೀರು ಹರಿಯುತ್ತಿದ್ದು, ಸಂಚಾರ ಬಂದ್‌ ಆಗಿದೆ. ಈ ಸೇತುವೆ ಸಹಿತ ಈವರೆಗೆ ಜಿಲ್ಲೆಯಲ್ಲಿ 13 ಸೇತುವೆಗಳ ಸಂಪರ್ಕ ಕಡಿತಗೊಂಡಿದೆ. ಘಟಪ್ರಭಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿರುವುದರಿಂದ ಮುಧೋಳ ತಾಲೂಕಿನ ಮಳಲಿ, ಮಾಚಕನೂರ, ಇಂಗಳಗಿ, ಜಾಲಿಬೇರಿ, ಉತ್ತೂರ, ಬುದ್ನಿ ಬಿಕೆ, ಮಿರ್ಜಿ, ಚೆನಾಳ, ಒಂಟಗೋಡಿ, ರಂಜಣಗಿ ಗ್ರಾಮಗಳಿಗೆ ಮುಂಭಾಗ ನೀರು ನುಗ್ಗಿದೆ. ಮಿರ್ಜಿ ಗ್ರಾಮ ಸಂಪೂರ್ಣ ಜಲಾವೃತಗೊಂಡಿದ್ದು, ಇಲ್ಲಿನ ನದಿ ಪಾತ್ರದ 250 ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ.

131 ಹಳ್ಳಿಗೆ ಆತಂಕ: ಮೂರು ನದಿಗಳು ಉಕ್ಕಿ ಹರಿಯುತ್ತಿರುವುದರಿಂದ ಜಮಖಂಡಿ 26, ಬೀಳಗಿ 12, ಮುಧೋಳ 21, ಬಾಗಲಕೋಟೆ 12, ಬಾದಾಮಿ 27 ಹಾಗೂ ಹುನಗುಂದ ತಾಲೂಕಿನ 33 ಹಳ್ಳಿಗಳು ಸೇರಿ ಒಟ್ಟು 131 ಹಳ್ಳಿಗಳಿಗೆ ಯಾವುದೇ ಕ್ಷಣದಲ್ಲಿ ನೀರು ನುಗ್ಗುವ ಆತಂಕ ಎದುರಾಗಿದೆ. ಈಗಾಗಲೇ ಮುಧೋಳ ಪಟ್ಟಣದ ಎರಡು ಗಲ್ಲಿಗಳು, ಮಿರ್ಜಿ ಸಹಿತ ಏಳು ಗ್ರಾಮ, ಜಮಖಂಡಿ ತಾಲೂಕಿನ 13 ಗ್ರಾಮಗಳ ಸುತ್ತ ನೀರು ಆವರಿಸಿಕೊಂಡಿದೆ. ಘಟಪ್ರಭಾ ನದಿ ಪಾತ್ರದಲ್ಲಿ 23 ಹಾಗೂ ಮಲಪ್ರಭಾ ನದಿ ಪಾತ್ರದಲ್ಲಿ 18 ಬ್ಯಾರೇಜ್‌ಗಳಿದ್ದು, ಎಲ್ಲಾ ಬ್ಯಾರೇಜ್‌ಗಳ ಮೂಲಕ ನೀರು ಹೊರ ಬಿಡಲಾಗುತ್ತಿದೆ.

ಇಬ್ಬರು ಯುವಕರ ರಕ್ಷಣೆ: ಘಟಪ್ರಭಾ ನದಿ ಪ್ರವಾಹ ಉಂಟಾಗಿದ್ದು, ಮುಧೋಳ ತಾಲೂಕಿನ ನಾಗರಾಳದಲ್ಲಿ ನದಿ ದಟದಲ್ಲಿದ್ದ ವಿದ್ಯುತ್‌ ಪಂಪಸೆಟ್ ತರಲು ಹೋಗಿದ್ದ ಇಬ್ಬರು ಯುವಕರು ಪ್ರವಾಹದಲ್ಲಿ ಸಿಲುಕಿದ್ದರು. ಅವರನ್ನು ಮಹಾಲಿಂಗಪುರ ಪೊಲೀಸರು ರಕ್ಷಣೆ ಮಾಡಿದ್ದಾರೆ. ಆ.8 ಮತ್ತು 9ರಂದು ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಟಾಪ್ ನ್ಯೂಸ್

ಗುಂಡ್ಲುಪೇಟೆ: ಕೊಡಗಾಪುರ ಶಾಲೆಯ ಇಬ್ಬರು ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್

ಗುಂಡ್ಲುಪೇಟೆ: ಕೊಡಗಾಪುರ ಶಾಲೆಯ ಇಬ್ಬರು ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್

ಸಂಸದರ ಅಮಾನತು ಆದೇಶ ಹಿಂಪಡೆಯಲ್ಲ, ನನಗೆ ಪಾಠ ಹೇಳೋದು ಬೇಡ; ಖರ್ಗೆಗೆ ನಾಯ್ದು

ಸಂಸದರ ಅಮಾನತು ಆದೇಶ ಹಿಂಪಡೆಯಲ್ಲ, ನನಗೆ ಪಾಠ ಹೇಳೋದು ಬೇಡ; ಖರ್ಗೆಗೆ ನಾಯ್ದು

Untitled-2

ಪಾದಯಾತ್ರೆಯಿಂದ ಆರಂಭವಾಯಿತು ಲಕ್ಷದೀಪೋತ್ಸವ

say no to lockdown

ಒಮಿಕ್ರಾನ್: “ಬಲಿಷ್ಠರಾಗಿದ್ದೇವೆ, ಲಾಕ್ ಡೌನ್ ಬೇಡ” ಎನ್ನುತ್ತಿರುವ ನೆಟ್ಟಿಗರು

ಈಶ್ವರಪ್ಪ

ಹೈಕಮಾಂಡ್ ನಿಂದ ಸಚಿವರ ರಹಸ್ಯ ವರದಿ ವಿಚಾರ ನನಗೆ ಗೊತ್ತಿಲ್ಲ: ಈಶ್ವರಪ್ಪ

ಕುತೂಹಲ ಮೂಡಿಸಿದ ಪ್ರಧಾನಿ ಮೋದಿ-ದೇವೇಗೌಡರ ಭೇಟಿ

ಕುತೂಹಲ ಮೂಡಿಸಿದ ಪ್ರಧಾನಿ ಮೋದಿ-ದೇವೇಗೌಡರ ಭೇಟಿ

corona-positive

ತುಮಕೂರಿನಲ್ಲಿ ಕೇರಳದಿಂದ ಬಂದ ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ದೃಢಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಜಾಪ್ರಭುತ್ವ ಪರಿಕಲ್ಪನೆ ನೀಡಿದ ಬಸವಣ್ಣವರು

ಪ್ರಜಾಪ್ರಭುತ್ವ ಪರಿಕಲ್ಪನೆ ನೀಡಿದ ಬಸವಣ್ಣವರು

1-nirani

ಮುಖ್ಯಮಂತ್ರಿಯಾಗುತ್ತಾರೆ: ಈಶ್ವರಪ್ಪ ಹೇಳಿಕೆಗೆ ನಾನು ಋಣಿ ಎಂದ ನಿರಾಣಿ

11teaching

ಶಿಕ್ಷಕ ವೃತ್ತಿಯ ಗೌರವ-ಘನತೆ- ಪಾವಿತ್ರ್ಯತೆ ಕಾಪಾಡಿಕೊಳ್ಳಿ

10study

ನಿರಂತರ ಅಧ್ಯಯನದಿಂದ ಯಶಸ್ಸು: ಬಿಡಿಕರ್‌

9boot-polish

ಕರವೇಯಿಂದ ಬೂಟ್‌ ಪಾಲಿಶ್‌ ಅಭಿಯಾನ

MUST WATCH

udayavani youtube

ಈ ನೀರು ಕುಡಿದ್ರೆ ಕೊರೋನಾ, ಓಮಿಕ್ರಾನ್ ಅಲ್ಲ ಇನ್ನೂ ಅಪಾಯಕಾರಿ ರೋಗ ಬರಬಹುದು

udayavani youtube

‘Car’bar with Merwyn Shirva | Episode 1

udayavani youtube

ಭಾರತ – ನ್ಯೂಜಿಲ್ಯಾಂಡ್ ಟೆಸ್ಟ್ ಪಂದ್ಯ ಡ್ರಾ : ಜಯದ ಸನಿಹದಲ್ಲಿದ್ದ ಟೀಂ ಇಂಡಿಯಾಗೆ ನಿರಾಸೆ

udayavani youtube

ಫ್ರೆಂಡ್ ಪೆನ್ಸಿಲ್ ಕದ್ದ ಎಂದು ಪೊಲೀಸ್ ಠಾಣೆಗೆದೂರು ದಾಖಲಿಸಲು ಹೋದ ಪುಟ್ಟ ವಿದ್ಯಾರ್ಥಿಗಳು!

udayavani youtube

ಕಟ್ಟಡ ತೆರವಿಗೆ ಕೂಡಿ ಬರದ ಗಳಿಗೆ : ಅವಘಡ ಸಂಭವಿಸುವ ಮೊದಲು ಎಚ್ಚೆತ್ತುಕೊಳ್ಳಿ

ಹೊಸ ಸೇರ್ಪಡೆ

24teachers

ಶಿಕ್ಷಕರ ವರ್ಗಾವಣೆ ಸಮಸ್ಯೆ-ಪ್ರತಿಭಟನೆ

ಅಮೃತ್‌ ಅಪಾರ್ಟ್‌ಮೆಂಟ್ಸ್‌

‘ಅಮೃತ್‌ ಅಪಾರ್ಟ್‌ಮೆಂಟ್ಸ್‌’ ನಲ್ಲಿ ಗೆಲುವಿನ ನಗೆ

ಗುಂಡ್ಲುಪೇಟೆ: ಕೊಡಗಾಪುರ ಶಾಲೆಯ ಇಬ್ಬರು ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್

ಗುಂಡ್ಲುಪೇಟೆ: ಕೊಡಗಾಪುರ ಶಾಲೆಯ ಇಬ್ಬರು ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್

girls hostel

ಹಾಸ್ಟೆಲ್‌ನಲ್ಲಿ ಓದಲು ಕರೆಂಟಿಲ್ಲ, ಸ್ನಾನ, ಶೌಚಾಲಯಕ್ಕೂ ನೀರಿಲ್ಲ!

oreo kannada movie

ಬಿಸ್ಕೆಟ್‌ ಹೆಸರು ಈಗ ಸಿನಿಮಾ ಟೈಟಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.