ನಿರಾಣಿ-ಚರಂತಿಮಠರಲ್ಲಿ ಯಾರಿಗೆ ಮಣೆ?

ಕಾರಜೋಳರಿಗೆ ಗ್ಯಾರಂಟಿ•ಮತ್ತೂಂದು ಸ್ಥಾನಕ್ಕೆ ಪೈಪೋಟಿ !•ಯಾರಿಗೆ ಧ್ವಜಾರೋಹಣ ಭಾಗ್ಯ?

Team Udayavani, Aug 1, 2019, 12:22 PM IST

Udayavani Kannada Newspaper

ಶ್ರೀಶೈಲ ಕೆ. ಬಿರಾದಾರ
ಬಾಗಲಕೋಟೆ:
ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಜಿಲ್ಲೆಯ ಮುಧೋಳ ಮೀಸಲು ಕ್ಷೇತ್ರದ ಶಾಸಕ ಗೋವಿಂದ ಕಾರಜೋಳರಿಗೆ ಸಚಿವ ಸ್ಥಾನ ಸಿಗುವುದು ಬಹುತೇಕ ಅಂತಿಮಗೊಂಡಿದ್ದು, ಜಿಲ್ಲೆಗೆ ಮತ್ತೂಂದು ಸ್ಥಾನ ಯಾರಿಗೆ ಸಿಗಲಿದೆ ಎಂಬ ಕುತೂಹಲ ಹೆಚ್ಚಿಸಿದೆ.

ನಿಜ, ಕಾರಜೋಳರ ಜತೆಗೆ ಜಿಲ್ಲೆಯ ಬಿಜೆಪಿ ಶಾಸಕರಲ್ಲಿ ಯಾರಿಗೆ ಸಚಿವ ಸ್ಥಾನ ದೊರೆಯಲಿದೆ ಎಂಬ ರಾಜಕೀಯ ಲೆಕ್ಕಾಚಾರದ ಮಾತುಗಳು ಎಲ್ಲೆಡೆ ಕೇಳಿ ಬರುತ್ತಿವೆ. ಯಡಿಯೂರಪ್ಪ ಅವರ ಮುತುವರ್ಜಿ ಜತೆಗೆ ಸಂಘ-ಪರಿವಾರದ ಬಲ ಇರುವವರಿಗೆ ಸ್ಥಾನ ದೊರೆಯಲಿದೆ ಎನ್ನಲಾಗಿದೆ.

ನಿರಾಣಿ-ಚರಂತಿಮಠರಲ್ಲಿ ಯಾರಿಗೆ ಮಣೆ?: ಕಳೆದ 2008ರಿಂದ 2013ರ ವರೆಗಿನ ಬಿಜೆಪಿ ಸರ್ಕಾರದಲ್ಲಿ ಬೃಹತ್‌ ಕೈಗಾರಿಕೆ ಸಚಿವರಾಗಿ ಕೆಲಸ ಮಾಡಿದ ಬೀಳಗಿಯ ಶಾಸಕ ಮುರಗೇಶ ನಿರಾಣಿ, ಬಾಗಲಕೋಟೆಯ ಶತಮಾನ ಕಂಡ ಶಿಕ್ಷಣ ಸಂಸ್ಥೆಯ ಕಾರ್ಯಾಧ್ಯಕ್ಷ, ಶಾಸಕ ಡಾ| ವೀರಣ್ಣ ಚರಂತಿಮಠ ಹೆಸರು ಸಚಿವ ಸ್ಥಾನಕ್ಕೆ ಮುಂಚೂಣಿಯಲ್ಲಿವೆ. ಆದರೆ, ಸದ್ಯಕ್ಕೆ ಗೋವಿಂದ ಕಾರಜೋಳ ಅವರೊಬ್ಬರಿಗೆ ಸಚಿವ ಸ್ಥಾನ ಕೊಟ್ಟು, ಮುಂದೆ ಸಂಪುಟ ವಿಸ್ತರಣೆಯಲ್ಲಿ ಜಿಲ್ಲೆಯ ವೇಳೆ ಜಿಲ್ಲೆಯ ಮತ್ತೂಬ್ಬ ಶಾಸಕರಿಗೆ ಸಚಿವ ಸ್ಥಾನ ನೀಡಲು ಪರಿಗಣಿಸೋಣ ಎಂಬ ಮಾತು ಬಿಜೆಪಿ ರಾಜ್ಯ ಮಟ್ಟದಲ್ಲಿ ಚರ್ಚೆ ನಡೆಯುತ್ತಿವೆ ಎಂಬ ಮಾತೂ ಕೇಳಿ ಬಂದಿವೆ.

ಆದರೆ, ಶಾಸಕರ ಬೆಂಬಲಿಗರು, ಹಿರಿಯರು ಬಾಗಲಕೋಟೆ ಜಿಲ್ಲೆ, ಬಿಜೆಪಿಯ ಭದ್ರಕೋಟೆಯಾಗಿದ್ದು, ಇಲ್ಲಿನ ಇಬ್ಬರಿಗೆ ಸಚಿವ ಸ್ಥಾನ ಕೊಡಬೇಕು. ಅಲ್ಲದೇ ದಲಿತ ನಾಯಕರಾಗಿರುವ ಗೋವಿಂದ ಕಾರಜೋಳರಿಗೆ ಉಪ ಮುಖ್ಯಮಂತ್ರಿ ಅಥವಾ ಪ್ರಮುಖ ಖಾತೆಯ ಜವಾಬ್ದಾರಿ ನೀಡಬೇಕು ಎಂಬ ಒತ್ತಡವನ್ನು ಹಲವರು ರಾಜ್ಯ ನಾಯಕರಿಗೆ ಹಾಕಿದ್ದಾರೆ ಎನ್ನಲಾಗಿದೆ.

ನಿಯೋಗ ಮೂಲಕ ತೆರಳಿದ ಪ್ರಮುಖರು: ಜಾತಿ ಲೆಕ್ಕಾಚಾರದ ಜತೆಗೆ ಪಕ್ಷನಿಷ್ಠೆ, ಪಕ್ಷ ಸಂಘಟನೆಗೆ ಬಲ ಕೊಡಬಲ್ಲ ಜಿಲ್ಲೆಯ ಶಾಸಕರಿಗೆ ಸಚಿವ ಸ್ಥಾನ ಕೊಡಬೇಕು. ಅಲ್ಲದೇ ಜಿಲ್ಲೆಯ ಪ್ರಮುಖ ಕಾರ್ಯಕರ್ತರಿಗೆ ನಿಗಮ ಮಂಡಳಿಯ ನೇಮಕಾತಿಯಲ್ಲಿ ಆದ್ಯತೆ ನೀಡಬೇಕು ಎಂಬ ಮನವಿ ಹೊತ್ತ ಹಲವರು, ಬಿಜೆಪಿಯ ಹಿರಿಯ ನಾಯಕರನ್ನು ಭೇಟಿ ಮಾಡಲು ಬೆಂಗಳೂರಿಗೆ ಪ್ರತ್ಯೇಕ ನಿಯೋಗ ಮೂಲಕ ತೆರಳಿ ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಅಲ್ಲದೇ ಮಾಜಿ ಶಾಸಕ ಪಿ.ಎಚ್. ಪೂಜಾರ, ಬಸವೇಶ್ವರ ಸಹಕಾರಿ ಬ್ಯಾಂಕ್‌ ಅಧ್ಯಕ್ಷ ಪ್ರಕಾಶ ತಪಶೆಟ್ಟಿ ಅವರಿಗೆ ಪ್ರಮುಖ ಜವಾಬ್ದಾರಿ ಕೊಡಬೇಕು ಎಂದು ಕೇಳಿಕೊಳ್ಳಲು ಅವರ ಬೆಂಬಲಿಗರು ಪಕ್ಷದ ಹಿರಿಯರಿಗೆ ಮನವಿ ಮಾಡಿ ಬಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಧ್ವಜಾರೋಹಣ ಭಾಗ್ಯ ಯಾರಿಗೆ?: ಹಿಂದೆ ಸದಾನಂದಗೌಡ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಕೆಲವೇ ದಿನಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ ಇತ್ತು. ಆಗ ಜಿಲ್ಲೆಯಿಂದ ಗೋವಿಂದ ಕಾರಜೋಳ ಹಾಗೂ ಮುರಗೇಶ ನಿರಾಣಿ ಇಬ್ಬರೂ ಸಚಿವರಾಗಿದ್ದರು. ಆದರೆ, ಜಿಲ್ಲಾ ಉಸ್ತುವಾರಿ ಹೊಣೆ ಯಾರಿಗೂ ಕೊಟ್ಟಿರಲಿಲ್ಲ. ಆ. 15ರ ಧ್ವಜಾರೋಹಣದ ಜವಾಬ್ದಾರಿ ಮಾತ್ರ ತಾತ್ಕಾಲಿಕವಾಗಿ ಮುರಗೇಶ ನಿರಾಣಿ ಅವರಿಗೆ ನೀಡಲಾಗಿತ್ತು. ಆಗ ಜಿಲ್ಲೆಯಲ್ಲಿ ಕಾರಜೋಳ ಮತ್ತು ನಿರಾಣಿ ಬಣಗಳು ಸೃಷ್ಟಿಯಾಗಿದ್ದವು. ಈಗ ರಾಜಕೀಯ ವಿದ್ಯಮಾನ ಬದಲಾಗಿವೆ. ರಹಸ್ಯ ಅಸಮಾಧಾನಗಳೇನೇ ಇದ್ದರೂ, ಸದ್ಯ ಬಿಜೆಪಿಯ ಎಲ್ಲ ಶಾಸಕರೂ ಒಗ್ಗಟ್ಟಾಗಿರುವಂತಿದ್ದಾರೆ. ಆದರೆ, ಸಚಿವ ಸ್ಥಾನದ ವಿಷಯದಲ್ಲಿ ಪೈಪೋಟಿ ಮಾತ್ರ ನಡೆಯುತ್ತಲೇ ಇದೆ.

ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯಂದು ಜಿಲ್ಲಾಡಳಿತದಿಂದ ನಡೆಯುವ ಧ್ವಜಾರೋಹಣ ನಡೆಸುವ ಸೌಭಾಗ್ಯ ಜಿಲ್ಲೆಯ ಯಾವ ಜನಪ್ರತಿನಿಧಿಗೆ ದೊರೆಯಲಿದೆ ಎಂಬ ಕುತೂಹಲ ಮೂಡಿದೆ. ಜಿಲ್ಲೆಯಿಂದ ಕಾರಜೋಳರೊಬ್ಬರೇ ಸಚಿವರಾದರೆ, ಅವರೇ ಜಿಲ್ಲೆಯ ಉಸ್ತುವಾರಿಯೂ ಆಗುವ ಸಾಧ್ಯತೆಯೇ ಹೆಚ್ಚು. ಒಂದು ವೇಳೆ ಜಿಲ್ಲೆಯ ಇಬ್ಬರು ಬಿಜೆಪಿ ಶಾಸಕರಿಗೆ ಸಚಿವ ಸ್ಥಾನ ದೊರೆತಲ್ಲಿ, ಅದು ಯಾರಿಗೆ ದೊರೆಯಲಿದೆ ಹಾಗೂ ಆ. 15ಕ್ಕೆ ಯಾರು ಧ್ವಜಾರೋಹಣ ಮಾಡಲಿದ್ದಾರೆ ಎಂಬ ಚರ್ಚೆ ಜಿಲ್ಲೆಯಲ್ಲಿ ನಡೆಯುತ್ತಿದೆ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.