ಪ್ರವಾಹದಿಂದ ಇಲ್ಲಿಯವರೆಗೆ 12 ಸಾವು: ಸಿಎಂ ಬಿಎಸ್‌ವೈ

ಅವಲಂಬಿತರಿಗೆ ತಲಾ 5 ಲಕ್ಷ ಪರಿಹಾರ; ಪ್ರವಾಹ ಪರಿಹಾರಕ್ಕಾಗಿ 1೦೦ ಕೋಟಿ ಹಣ ಬಿಡುಗಡೆ 

Team Udayavani, Aug 9, 2019, 6:43 PM IST

ಬಾಗಲಕೋಟೆ : ರಾಜ್ಯದ ಉತ್ತರಕರ್ನಾಟಕ ಹಾಗೂ ಕರಾವಳಿ ಭಾಗದಲ್ಲಿ ಉಂಟಾದ ಪ್ರವಾಹದಿಂದ ಈ ವರೆಗೆ 12 ಜನ ಮೃತಪಟ್ಟಿದ್ದಾರೆ. ಅವರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರವನ್ನು ತಕ್ಷಣ ನೀಡುವಂತೆ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಉಂಟಾದ ಪ್ರವಾಹ ಪರಿಸ್ಥಿತಿಯನ್ನು ಸ್ವತಃ ಪರಿಶೀಲಿಸಿದ್ದೇನೆ. ಎಲ್ಲ ಜಿಲ್ಲಾಡಳಿತಗಳು ಹಗಲು ರಾತ್ರಿ ಎನ್ನದೇ 24 ಗಂಟೆಯೂ ಪರಿಹಾರ ಕಾರ್ಯದಲ್ಲಿ ತೊಡಗಿವೆ ಎಂದರು.

ಪ್ರವಾಹ ಪರಿಸ್ಥಿತಿ ನಿಭಾಯಿಸಲು ಅನುದಾನದ ಕೊರತೆ ಇಲ್ಲ. ಪ್ರವಾಹ ಉಂಟಾದ ಜಿಲ್ಲೆಗಳಿಗೆ ಒಟ್ಟು 1೦೦ ಕೋಟಿ ಹಣ ಬಿಡುಗಡೆ ಮಾಡಲಾಗಿದೆ. ಬಾಗಲಕೋಟೆ ಜಿಲ್ಲೆಗೆ 1೦ ಕೋಟಿ ಅನುದಾನ ಒದಗಿಸಿದ್ದು, ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ ಒಟ್ಟು 17 ಕೋಟಿ ಹಣವಿದೆ. ಪರಿಹಾರ ಕಾರ್ಯಕ್ಕೆ ಯಾವುದೇ ರೀತಿಯ ಹುಂದೇಟು ಹಾಕದೇ ಎಲ್ಲ ರೀತಿಯ ಸೌಲಭ್ಯ ಕಲ್ಪಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ