5.60 ಲಕ್ಷ ರೂ. ಉಳಿತಾಯ ಬಜೆಟ್‌ ಮಂಡನೆ

ಅವಳಿ ಪಟ್ಟಣದಾದ್ಯಂತ ಅಭಿವೃದ್ಧಿ ಕಾಮಗಾರಿಗಳ ಸಂದರ್ಭದಲ್ಲಿ ರಸ್ತೆಗಳೆಲ್ಲವೂ ಹಾಳಾಗಿವೆ.

Team Udayavani, Jan 28, 2022, 5:53 PM IST

5.60 ಲಕ್ಷ ರೂ. ಉಳಿತಾಯ ಬಜೆಟ್‌ ಮಂಡನೆ

ರಬಕವಿ-ಬನಹಟ್ಟಿ: ನಗರಸಭೆ ಸಭಾ ಭವನದಲ್ಲಿ ನಗರಸಭೆ ಅಧ್ಯಕ್ಷ ಶ್ರೀಶೈಲ ಬೀಳಗಿ 5.60 ಲಕ್ಷ ಮೊತ್ತದ ಉಳಿತಾಯ ಬಜೆಟ್‌ ಮಂಡಿಸಿದರು. ಒಟ್ಟು 36.38 ಕೋಟಿ ರೂ.ಗಳ ಬಜೆಟ್‌ನಲ್ಲಿ 29.6 ಕೋಟಿ ರೂ.ಗಳಷ್ಟು ಜಮಾ-ಖರ್ಚಿನ ಬಗ್ಗೆ ಆಯವ್ಯಯ ಮಂಡಿಸಿದರು.

ನಗರಸಭೆಯ ಅಭಿವೃದ್ಧಿ ದೃಷ್ಟಿಯಿಂದ ಬಜೆಟ್‌ ಮಂಡಿಸಲಾಗಿದ್ದು, ಎಲ್ಲ ಸದಸ್ಯರು ಹಾಗೂ ಸಾರ್ವಜನಿಕರು ನಗರದ ಸೌಂದರ್ಯಕರಣ ಹಾಗೂ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಶ್ರೀಶೈಲ ಬೀಳಗಿ ಹೇಳಿದರು.

ಈ ವೇಳೆ ಶಾಸಕ ಸಿದ್ದು ಸವದಿ ಮಾತನಾಡಿ, ಅನೇಕ ಸಮಸ್ಯೆಗಳಿಂದ ಕೂಡಿರುವ ರಬಕವಿ-ಬನಹಟ್ಟಿ-ಹೊಸೂರ-ರಾಮಪುರ ಪಟ್ಟಣಗಳಿಗೆ ಈ ಬಜೆಟ್‌ ದಿಕ್ಸೂಚಿಯಾಗಿದ್ದು, ಪ್ರತಿ ವಾರ್ಡ್‌ ನ ಸದಸ್ಯರ ವಿಶ್ವಾಸದೊಂದಿಗೆ ಮಾದರಿ ನಗರವನ್ನಾಗಿಸಿ, ಜಿಲ್ಲೆಯಲ್ಲಿಯೇ ಸ್ವಚ್ಛ, ಆದರ್ಶ ನಗರಗಳನ್ನಾಗಿಸಲು ಎಲ್ಲರೂ ಪ್ರಾಮಾಣಿಕವಾಗಿ ಕೈ ಜೋಡಿಸಿ. ಬಯಲು ಶೌಚ ಮುಕ್ತ ಹಾಗೂ ಕೊಳಚೆ ನೀರು ನದಿ ಸೇರುವುದನ್ನು ತಡೆದು ನೀರು ಶುದ್ಧಿಕರಿಸಲು ಈಗಾಗಲೇ
ಯೋಜನೆ ಆರಂಭಿಸಿದ್ದು ಅದಕ್ಕೆ ಭೂಮಿಪೂಜೆ ಮಾಡಲಾಗಿದೆ ಎಂದರು.

ನಗರೋತ್ಥಾನದಡಿ ಅಭಿವೃದ್ಧಿಗೆಂದು ಮೂಲಭೂತ ಸೌಕರ್ಯಕ್ಕೆ 30 ಕೋಟಿ ರೂ.ಗಳಷ್ಟು ಅನುದಾನ ಹಾಗೂ ರಾಜ್ಯ ಹಣಕಾಸು ಅಡಿಯಲ್ಲಿ 5 ಕೋಟಿ ರೂ. ಗಳಷ್ಟು ಹಣ ಬಿಡುಗಡೆಗೊಂಡಿದೆ. ಈ ಕುರಿತು ಕಾಮಗಾರಿ ಕೈಗೆತ್ತಿಕೊಳ್ಳುತ್ತಿದ್ದು, ಸಮಸ್ಯೆಗಳನ್ನು ಸದಸ್ಯರು ಸಾರ್ವಜನಿಕರ ಮೂಲಕ ಪಡೆದು ಪರಿಹರಿಸಬೇಕು. ಒಳಚರಂಡಿಗೆ ಸಂಬಂಧಿ ಸಿದ ಕಾಮಗಾರಿಯು ಶೇ. 50ರಷ್ಟು ಮುಕ್ತಾಯಗೊಂಡಿದೆ.

ನಿರ್ಮಲ ನಗರವನ್ನಾಗಿಸುವಲ್ಲಿ ಎರಡನೇ ಹಂತದಲ್ಲಿ ಇನ್ನೂ 60 ರಿಂದ 70 ಕೋಟಿ ರೂ. ಅನುದಾನ ಶೀಘ್ರ ಬರಲಿದೆ. ಇದೀಗ ಅಮೃತ ನಿರ್ಮಲನಗರ ಯೋಜನೆಯಡಿ 1 ಕೋಟಿ ರೂ.ಗಳಷ್ಟು ಕಾಮಗಾರಿ ಕೈಗೆತ್ತಿಕೊಂಡಿರುವುದು ವಿಶೇಷವಾಗಿದೆ ಎಂದು ಸವದಿ ಹೇಳಿದರು.

ಅವಳಿ ಪಟ್ಟಣದಾದ್ಯಂತ ಅಭಿವೃದ್ಧಿ ಕಾಮಗಾರಿಗಳ ಸಂದರ್ಭದಲ್ಲಿ ರಸ್ತೆಗಳೆಲ್ಲವೂ ಹಾಳಾಗಿವೆ. ಅವೆಲ್ಲವುಗಳಿಗೆ ಮರು ಡಾಂಬರೀಕರಣ ಹಾಗು ಸಿಸಿ ರಸ್ತೆ ಕಾರ್ಯ ಜರುಗಲಿದೆ ಎಂದು ಸವದಿ ತಿಳಿಸಿದರು.

ಪೌರಾಯುಕ್ತ ಶ್ರೀನಿವಾಸ ಜಾಧವ ಮಾತನಾಡಿದರು. ಆಯವ್ಯಯ ಮಂಡನೆ ಸಂದರ್ಭ ಆಡಳಿತಾರೂಢ ಬಿಜೆಪಿ ಸದಸ್ಯರು ಮಾತ್ರ ಕಂಡು ಬಂದು ವಿಪಕ್ಷದ ಸದಸ್ಯರ ಗೈರು ಎದ್ದು ಕಾಣುತ್ತಿತ್ತು. ಆಯವ್ಯಯ ಮಂಡನೆಗೆ ಸಂಜಯ ತೆಗ್ಗಿ ಸಹಮತ ತೋರಿಸಿದರೆ ಯಲ್ಲಪ್ಪ ಕಟಗಿ ಅನುಮೋದಿಸಿದರು.

ನಗರಸಭೆ ಉಪಾಧ್ಯಕ್ಷೆ ಬಾಳವ್ವ ಕಾಖಂಡಕಿ, ವ್ಯವಸ್ಥಾಪಕ ಸುಭಾಸ ಖುದಾನಪುರ, ಬಸವರಾಜ ಶರಣಪ್ಪನವರ, ಬಿ.ಎಂ. ಡಾಂಗೆ, ಎಸ್‌. ಎಂ. ಕಲಬುರ್ಗಿ, ವಿ.ಆಯ್‌. ಬೀಳಗಿ, ಮುಖೇಶ ಬನಹಟ್ಟಿ, ವೈಶಾಲಿ ಹಿಪ್ಪರಗಿ, ಎಂ.ಎಂ. ಮುಗಳಖೋಡ, ರಾಜಕುಮಾರ ಹೊಸೂರ, ಶೋಭಾ ಹೊಸಮನಿ, ಸಂಗೀತಾ ಕೋಳಿ, ಮುತ್ತಪ್ಪ ಚೌಡಕಿ, ಎಸ್‌. ಎಂ. ಮಠದ, ರಮೇಶ ಮಳ್ಳಿ, ಅಭಿನಂದನ ಸೋನಾರ, ಪ್ರಭಾಕರ ಮೊಳೇದ, ಗೌರಿ ಮಳ್ಳಿ, ಅರುಣ ಬುದ್ನಿ ಇದ್ದರು.

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.